ಬೀದರ್‌ | ಆ.14ರಂದು ಒಳಮೀಸಲಾತಿ ವರದಿ ತಿರಸ್ಕರಿಸಲು ಆಗ್ರಹಿಸಿ ಪ್ರತಿಭಟನೆ

Date:

ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ದಾಸ್‌ ಅವರು ಒಳಮೀಸಲಾತಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸುವಂತೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ಬೀದರ್ ಜಿಲ್ಲಾ ಬಲಗೈ ಒಳ ಮೀಸಲಾತಿ ಹೋರಾಟ ಸಮಿತಿಯಿಂದ (ಹೊಲೆಯ ಸಂಬಂಧಿತ ಜಾತಿಗಳ ಸಮೂಹ) ಆ. 14ರಂದು ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಬೀದರ್ ನಗರದ ಶಹಾಗಂಜ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್‌ ಭವನದಲ್ಲಿ ಭಾನುವಾರ ನಡೆದ ಸಮಿತಿಯ ಸಭೆಯಲ್ಲಿ ಈ ಒಕ್ಕೊರಲಿನ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಈ ವರದಿ ಅನುಷ್ಠಾನಗೊಂಡರೆ ನಮ್ಮ ಮುಂದಿನ ಪೀಳಿಗೆಗೆ ಅನ್ಯಾಯವಾಗಲಿದೆ. ಅವೈಜ್ಞಾನಿಕವಾದ ಈ ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕು ಎಂದು ಒತ್ತಾಯಿಸುವ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. 

ಧಮ್ಮ ಆಚಾರ್ಯ ಮಿಲಿಂದ್ ಗುರೂಜಿ ಸಮಿತಿಯ ಪ್ರಮುಖರಾದ ಮಾರುತಿ ಬೌದ್ಧೆ, ಅನಿಲಕುಮಾರ್‌ ಬೆಲ್ದಾರ್, ರಮೇಶ್ ಡಾಕುಳಗಿ, ಬಾಬುರಾವ್‌ ಪಾಸ್ವಾನ್‌, ವಿಠ್ಠಲದಾಸ್‌ ಪ್ಯಾಗೆ, ಕಾಶಿನಾಥ ಚೆಲ್ವಾ, ಶ್ರೀಪತರಾವ್‌ ದೀನೆ, ಮಹೇಶ ಗೋರನಾಳಕರ್, ವಿನಯ್‌ ಕುಮಾರ್‌ ಮಾಳಗೆ, ವಿನೋದ ಅಪ್ಪೆ ಸೇರಿದಂತೆ ವಿವಿಧ ದಲಿತ ಸಂಘಟನೆಗಳ ನೂರಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಯುವಜನರಲ್ಲಿ ಸಂವಿಧಾನ ಪ್ರಜ್ಞೆ ಬೆಳೆಸಲು ಅ.17ರಿಂದ ತರಬೇತಿ ಶಿಬಿರ

ಯುವಜನರಲ್ಲಿ ಸಂವಿಧಾನಾತ್ಮಕ ಅರಿವು, ಸಾಮಾಜಿಕ ಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವ...

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...