ಬೀದರ್‌ | ವಿಕಲಚೇತನರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಿ : ಶಶಿಧರ ಕೋಸಂಬೆ

Date:

ಸರ್ಕಾರದಿಂದ ವಿಕಲಚೇತನರಿಗೆ ಸಿಗುವಂತಹ ಸೌಲಭ್ಯಗಳು ಸಕಾಲದಲ್ಲಿ ಸಿಗುವಂತಾಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ‌ ಸೋಮವಾರ ಆಯೋಜಿಸಿದ್ದ ʼಮಕ್ಕಳ ಸಂರಕ್ಷಣೆʼ ವಿಷಯದ ಕುರಿತು ವಿಕಲಚೇತನರ ತಾಲೂಕಾ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ಜಿಲ್ಲಾ ಮಟ್ಟದಲ್ಲಿ ಒಂದು ದಿನದ ಅರಿವಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬೀದರನಿಂದ ಚಾಮರಾಜ ನಗರದವರೆಗೆ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಕಲಚೇತನರಿಗೆ ಗುರುತಿಸುವಂತಹ ಕೆಲಸ ಆಗಬೇಕಾಗಿದ್ದು, ಬೀದರ ಜಿಲ್ಲೆಯಿಂದ ಪರಿಣಾಮಕಾರಿಯಾಗಿ ಪ್ರಾರಂಭವಾಗಿ ರಾಜ್ಯದ ಉದ್ಧಗಲಕ್ಕೂ ಮಾಡಿ ಪ್ರತಿಯೊಂದು ಸಮಾಜದಲ್ಲಿರುವಂತಹ ಕಟ್ಟ ಕಡೆಯ ವಿಕಲಚೇತನರಿಗೆ ಸರ್ಕಾರದ ಸೌಲಭ್ಯ ಸಿಗುವಂತೆ ಮಾಡುವ ಉದ್ದೇಶವಾಗಿದ್ದು ಮತ್ತು ವಿಕಲಚೇತನರಿಗೆ ಮೀಸಲಿಟ್ಟ ಅನುದಾನ ದುರ್ಬಳಕೆ ಆಗದಂತೆ ಅವರ ಸೌಲಭ್ಯಗಳಿಗೆ ಬಳಕೆ ಆಗಬೇಕಾಗಿದೆʼ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮ ವ್ಯವಸ್ಥಾಪಕರು, ಯುನಿಸೆಫ್ ಮಕ್ಕಳ ಸಂರಕ್ಷಣಾ ಯೋಜನೆ, ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳದ ಹರೀಶ್ ಜೋಗಿ ಅವರು ವಿಕಲಚೇತನರ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಇದನ್ನೂ ಓದಿ : ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಮ್.ಎಸ್, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ರೂಪಾ ಎಸ್., ಮಕ್ಕಳ ಕಲ್ಯಾಣ ಸಮಿತಿ ಬೀದರನ ಅಧ್ಯಕ್ಷ ಸೀಮಪ್ಪಾ, ಬಾಲ ನ್ಯಾಯ ಮಂಡಳಿ ಸದಸ್ಯ ಸಂಜೀವಕುಮಾರ, ಮಕ್ಕಳ ರಕ್ಷಣಾ ಅಧಿಕಾರಿ ಗೌರಿಶಂಕರ ಸೇರಿದಂತೆ ತಾಲ್ಲೂಕಾ, ನಗರದ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಅದಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...