ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

Date:

ಸಹೋದರತ್ವದ ಬಾಂಧವ್ಯ ಬೆಸೆಯುವ ರಕ್ಷಾ ಬಂಧನ ಹಬ್ಬವನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಕಾರ್ಮಿಕರು ತಾವು ಕೈಗೊಂಡ ಕಾಮಗಾರಿ ಸ್ಥಳದಲ್ಲಿಯೇ ವಿಶೇಷವಾಗಿ ಆಚರಿಸಿದರು.

- Advertisement -

ಬೀದರ್‌ ಜಿಲ್ಲಾ ಪಂಚಾಯತ್‌, ಭಾಲ್ಕಿ ತಾಲೂಕು ಪಂಚಾಯತ್‌, ಗ್ರಾಮ ಸ್ವರಾಜ್ಯ ಅಭಿಯಾನ ಮತ್ತು ಸಂಯೋಗ ಸಂಸ್ಥೆ ಸಹಯೋಗದಲ್ಲಿ ತಾಲೂಕಿನ ಖಟಕ ಚಿಂಚೋಳಿ ಗ್ರಾಮ ಪಂಚಾಯತ್‌ ಹಾಗೂ ಬ್ಯಾಲಹಳ್ಳಿ(ಕೆ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಹಾಲಹಳ್ಳಿ ಗ್ರಾಮಗಳಲ್ಲಿ ಸಾಮಾಜಿಕ ಅರಣ್ಯ ವಲಯ ಪ್ರದೇಶದಲ್ಲಿ ನಡೆಯುತ್ತಿರುವ ಮನರೇಗಾ ಕಾಮಗಾರಿ ಸ್ಥಳದಲ್ಲಿ ಪರಸ್ಪರ ಮಹಿಳೆಯರು ಪುರುಷರಿಗೆ ರಾಖಿ ಕಟ್ಟುವುದರ ಮೂಲಕ ಸಹೋದರತ್ವ ಭಾವ ಸಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಹಿಳೆಯರ ಘನತೆ ಎತ್ತಿ ಹಿಡಿಯುವ, ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡುವುದು ರಕ್ಷಾಬಂಧನ ಉದ್ದೇಶ. ಅಷ್ಟೇ ಅಲ್ಲದೆ, ಆರೋಗ್ಯ, ಆಯಸ್ಸಿಗಾಗಿ ಸಹೋದರಿ ಬಯಸಿದರೆ, ಸಹೋದರಿಯನ್ನು ಸದಾ ಕಾಲ ರಕ್ಷಿಸುವ, ನೋವು-ನಲಿವುಗಳಲ್ಲಿ ಭಾಗಿಯಾಗುವ ಭರವಸೆ ಸಹೋದರ ನೀಡುತ್ತಾನೆ. ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರರು ಇಂತಹ ವಿಶಿಷ್ಟ ಹಬ್ಬಕ್ಕೆ ಹೊಸ ಸೊಬಗು ತಂದುಕೊಟ್ಟರು.

ಮನರೇಗಾ ಯೋಜನೆಯಡಿ ಕೆಲಸ ಮಾಡುವ ಗಂಡು ಮತ್ತು ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ಇದೆ. ಕಾಮಗಾರಿ ಸ್ಥಳದಲ್ಲಿ ಪರಸ್ಪರ ಸೌಹಾರ್ದತೆಯಿಂದ, ಒಬ್ಬರಿಗೊಬ್ಬರು ಆಸರೆಯಾಗಿ ದುಡಿದು ಬದುಕು ನಿರ್ವಹಿಸುವ ಕಾರ್ಮಿಕರು ಜಾತಿ-ಧರ್ಮದ ಗೋಡೆ ಮುರಿದು ಸಹೋದತ್ವ ಬಾಂಧವ್ಯಕ್ಕೆ ಸಾಕ್ಷಿಯಾದರು.

WhatsApp Image 2025 08 09 at 4.33.22 PM
ಮಹಿಳೆಯರು ಪುರುಷರಿಗೆ ರಾಖಿ ಕಟ್ಟಿ, ಆರಳಿ ಮಾಡಿ ಸಿಹಿ ತಿನ್ನಿಸಿದರು.

ಮಹಿಳೆಯರು ರಾಖಿ ಕಟ್ಟುವಾಗ ಪುರುಷರ ಹಣೆಗೆ ತಿಲಕವಿಟ್ಟು, ನೂಲೆಳೆಯ ರಾಖಿ ಕಟ್ಟಿ, ಸಿಹಿ ತಿನಿಸಿ, ಆರತಿ ಮಾಡಿದಾಗ ಏನೋ ಸಂಭ್ರಮ ಮೂಡುತ್ತದೆ. ನಾವು ಅವರಿಗೆ ರಕ್ಷಣೆ ಕೊಡುತ್ತೇವೆ ಎನ್ನುವುದಕ್ಕಿಂತ ಹೆಣ್ಣು ಮಕ್ಕಳ ಆಶೀರ್ವಾದವೇ ನಮ್ಮನ್ನು ಕಾಯುತ್ತದೆ ಎಂಬುದು ಪುರುಷರಲ್ಲಿ ಭಾವ ಮೂಡಿತು.

ಗ್ರಾಮದಿಂದ ದೂರದಲ್ಲಿರುವ ಅರಣ್ಯ ಪ್ರದೇಶದಲ್ಲಿ ನರೇಗಾ ಕಾಮಗಾರಿಯಲ್ಲಿ ಮಹಿಳೆಯರು ಕೆಲಸ ಮಾಡುವುದು ಕಷ್ಟ. ಅಂತಹ ಸಂದರ್ಭಗಳಲ್ಲಿ ಪುರುಷರು ಕೆಲಸದಲ್ಲಿ ನೆರವಾಗುವುದು ಮಾತ್ರವಲ್ಲದೇ, ಅವರನ್ನು ಸುರಕ್ಷಿತವಾಗಿ ಮನೆ ಸೇರುವವರೆಗೂ ವಿಶೇಷ ಕಾಳಜಿ ವಹಿಸುತ್ತಾರೆ. ಕೂಡು ಕುಟುಂಬದಂತೆ ಜೊತೆಯಾಗಿರುತ್ತಾರೆ. ಹೀಗಾಗಿ ಇಂತಹ ವಿಶಿಷ್ಟ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ತಾಲೂಕಿನ ವಿವಿಧೆಡೆ ಕಾಮಗಾರಿ ಸ್ಥಳಗಳಲ್ಲಿ ಭಾಲ್ಕಿ ತಾಲೂಕು ಪಂಚಾಯತಿ ವತಿಯಿಂದ ರಕ್ಷಾ ಬಂಧನ ಹಬ್ಬ ಆಚರಿಸಲಾಗಿದೆʼ ಎಂದು ಸಂಯೋಗ ಸಂಸ್ಥೆಯ ತರಬೇತಿದಾರ ನೀಲಕಂಠ ಮಾಳಚಾಪುರ ಹೇಳಿದರು.

ಇದನ್ನೂ ಓದಿ : ಬೀದರ್‌ | ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರ ಹುದ್ದೆ ಖಾಲಿ : ಸಚಿವರಿಗೆ ಮನವಿ ಸಲ್ಲಿಸಿದ ನಿಯೋಗ

ಕಾರ್ಯಕ್ರಮದಲ್ಲಿ ರೇಣುಕಾ, ಪುಷ್ಪವತಿ, ಗುಂಡಮ್ಮ, ಚಿನ್ನಮ್ಮ, ಶರಣಪ್ಪ, ಇಂದುಮತಿ ಸೇರಿದಂತೆ 30ಕ್ಕೂ ಅಧಿಕ ಮಹಿಳೆಯರು. 20 ಪುರುಷರು ಸೇರಿದಂತೆ ಕಾಯಕ ಬಂಧುಗಳಾದ ಜೀವನ್‌, ಕವಿತಾ ಹಾಗೂ ಮಾಲಾಶ್ರೀ ಆರ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...