ಬೀದರ್‌ | ಅಸಮಾನತೆ ವಿರುದ್ಧ ಬಂಡಾಯವೆದ್ಧ ವೈಚಾರಿಕ ಸಂತ ಕನಕದಾಸ : ಪಾರ್ವತಿ ಸೋನಾರೆ

Date:

ಕೀರ್ತನೆಗಳ ಮೂಲಕ ವಿಶ್ವಪ್ರೇಮ ಸಾರಿದ ಕನಕದಾಸರು ಸಮಾಜದಲ್ಲಿ ಬೇರೂರಿದ ಮೌಢ್ಯಕ್ಕೆ ಕೊಳ್ಳಿ ಇಟ್ಟ ವೈಚಾರಿಕ ಸಂತ ಎಂದು ಸಾಹಿತಿ, ಕಥೆಗಾರ್ತಿ ಪಾರ್ವತಿ ಸೋನಾರೆ ಅಭಿಪ್ರಾಯಪಟ್ಟರು.

- Advertisement -

ಪಟ್ಟಣದ ತಹಸೀಲ್ ಕಛೇರಿಯಲ್ಲಿ ಶನಿವಾರ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ ಕನಕ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿ, ʼಕನಕದಾಸರ ಕೀರ್ತನೆಗಳಲ್ಲಿ ಮಾನವೀಯತೆ, ಸರ್ವಧರ್ಮ ಸಮಾನತೆಯ ವಿಚಾರಗಳಿವೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ʼಕನಕದಾಸರು ಕನ್ನಡ ನಾಡು ಕಂಡ ಶ್ರೇಷ್ಠ ಚಿಂತಕ ಎಂದ ಅವರು, ಜಾತಿ ವ್ಯವಸ್ಥೆ, ಶೋಷಣೆ, ಅಸಮಾನತೆಯ ವಿರುದ್ಧ ಬಂಡಾಯವೆದ್ಧ ಕನಕದಾಸ ಅನಿಷ್ಠ ಪದ್ದತಿ, ಆಚರಣೆಗಳಿಂದ ಕೂಡಿದ ಭಕ್ತಿ ಮನುಕುಲಕ್ಕೆ ಮಾರಕ ಎಂಬುದನ್ನು ಎಚ್ಚರಿಸಿದರು. ಸಾಹಿತ್ಯದ ದೃಷ್ಟಿಯಿಂದ ನೋಡಿದರೂ ಕನಕದಾಸ ಎಲ್ಲರಿಗಿಂತ ಮುಂಚೂಣಿಯಲ್ಲಿದ್ದಂತೆ ಕಾಣುತ್ತದೆ. ಕೀರ್ತನೆ, ಸುಳಾದಿ, ಉಗಾಭೋಗಗಳು, ಮುಂಡಿಗೆಗಳು, ಕಾವ್ಯ ಕೃತಿಗಳ ಮೂಲಕ ಕನ್ನಡವನ್ನು ಉಚ್ಛ್ರಾಯ ಸ್ಥಿತಿಗೆ ಕೊಂಡೊಯ್ದಿದ್ದಾರೆʼ ಎಂದರು.

ತಹಸೀಲ್ದಾರ್ ಮಹೇಶ ಪಾಟೀಲ್ ಮಾತನಾಡಿ, ʼಕನ್ನಡ ಸಾಹಿತ್ಯದ ತೂಕ ಹೆಚ್ಚಿಸಿದ ಕನಕದಾಸರು ಬರೆದ ʼರಾಮಧಾನ್ಯ ಚರಿತೆʼ ಕೃತಿ ಮೇಲು-ಕೀಳು ಎಂಬ ಮನಸ್ಥಿತಿಗೆ ಉತ್ತರಿಸಿದಂತಿದೆ. ಶ್ರಮಿಕ ವರ್ಗದವರೇ ದೇವರಿಗೆ ಪ್ರೀಯವಾಗಿರುತ್ತಾರೆ, ಬದುಕಿನಲ್ಲಿ ಗಟ್ಟಿಯಾಗಿರುತ್ತಾರೆʼ ಎಂದರು.

ಕನಕದಾಸ ಜಯಂತಿ ನಿಮಿತ್ತ ಪಟ್ಟಣದ ಬಸ್ ನಿಲ್ದಾಣ ಬಳಿ ಕನಕ ವೃತ್ತದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಪಪಂ ಅಧ್ಯಕ್ಷೆ ಸರುಬಾಯಿ ಘುಳೆ ಚಾಲನೆ ನೀಡಿದರು. ಮೆರವಣಿಗೆಯು ಕನಕದಾಸ ವೃತ್ತದಿಂದ ಬಸವೇಶ್ವರ ವೃತ್ತ, ಸಾರ್ವಜನಿಕ ಆಸ್ಪತ್ರೆ, ಪೊಲೀಸ್ ಠಾಣೆ, ನ್ಯಾಯಾಲಯ ರಸ್ತೆಯಿಂದ ತಹಸೀಲ್ ಆವರಣಕ್ಕೆ ತೆರಳಿತು. ಮೆರವಣಿಗೆಯಲ್ಲಿ ಮಕ್ಕಳು, ಕಳಸ ಹೊತ್ತ ಮಹಿಳೆಯರು, ತಾಲೂಕು ಅಧಿಕಾರಿಗಳು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಪಪಂ ಮುಖ್ಯಾಧಿಕಾರಿ ಸರುಬಾಯಿ ಘುಳೆ, ಖಜಾನೆ ಅಧಿಕಾರಿ ಮಾಣಿಕ ನೇಳಗಿ, ಬಿಇಒ ರಂಗೇಶ, ಎಡಿ ಶಿವಕುಮಾರ ಘಾಟೆ, ಪಪಂ ಸದಸ್ಯ ಗುಂಡಪ್ಪ ಮುದಾಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ರಾಮಣ್ಣ ವಡೆಯರ್, ಡಾ.ವೈಜಿನಾಥ ಬುಟ್ಟೆ ಹಾಗೂ ಪ್ರಮುಖರಾದ ಶಿವಕುಮಾರ್ ಮೇತ್ರೆ, ಶಿವರಾಜ ಅಲಮಾಜೆ, ಶಿವಾಜಿರಾವ ಪಾಮುದಾಳೆ, ಶ್ರಾವಣಕುಮಾರ ಭಂಡೆ, ರಾಜಕುಮಾರ ಮುದಾಳೆ, ಅರ್ಜುನ ಭಂಗೆ, ಸಂತೋಷ ಮುದಾಳೆ, ಕೃಷ್ಣ ಸಾಗಾವೆ, ಬೀರಪ್ಪ ರಕ್ಷಾಳೆ, ಧನರಾಜ ಮಾನೆ ಸೇರಿದಂತೆ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...

ಯಾದಗಿರಿ | ತತ್ವಪದಕಾರ ಅವಧೂತ ಶ್ರೀ ರಂಗಲಿಂಗೇಶ್ವರ ಕುರಿತು ವಿಶೇಷ ಉಪನ್ಯಾಸ

ತತ್ವಪದಕಾರ ಹಾಗೂ ಅವಧೂತ ಶ್ರೀ ರಂಗಲಿಂಗೇಶ್ವರರ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ತಾಲೂಕು...