ಬೀದರ್‌ | ರಸ್ತೆ, ಚರಂಡಿ ಅವ್ಯವಸ್ಥೆ : ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಆಕ್ರೋಶ

Date:

Advertisements

ಬಸವಕಲ್ಯಾಣ ತಾಲ್ಲೂಕಿನ ಪ್ರತಾಪುರ ಗ್ರಾಮದ ವಾರ್ಡ್-‌2ರಲ್ಲಿ ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೆ ಕಾಲೋನಿಯ ನಿವಾಸಿಗಳು ಪರದಾಡುತ್ತಿದ್ದು, ಕೂಡಲೇ ಗ್ರಾಮ ಪಂಚಾಯತಿ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ʼಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಗ್ರಾಮದಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಕಂಡಿಲ್ಲ. ಚರಂಡಿ ನೀರು ರಸ್ತೆ ಮೇಲೆ ಹರಿದು ಜನರಿಗೆ ಓಡಾಡಲು ಪರದಾಡುತ್ತಿದ್ದಾರೆ. ಇನ್ನು ಮಳೆಗಾಲದಲ್ಲಿ ರಸ್ತೆ, ಚರಂಡಿ ಅಧ್ವಾನದಿಂದ ಕೆಸರು ಗದ್ದೆಯಂತಾಗುವ ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆʼ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಈ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ತಿಳಿಸಿದರೂ ಯಾರೊಬ್ಬರೂ ಸ್ಪಂದಿಸುತ್ತಿಲ್ಲ. ರಸ್ತೆ, ಚರಂಡಿಯ ಅವ್ಯವಸ್ಥೆಯಿಂದ ಶಾಲಾ ಮಕ್ಕಳು, ವೃದ್ಧರಿಗೆ ತೀವ್ರ ತೊಂದರೆ ಆಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿಯೂ ಎದುರಾಗಿದೆ ಎಂದು ಹೇಳಿದರು.

WhatsApp Image 2025 09 21 at 9.35.18 AM

ಗ್ರಾಮ ಪಂಚಾಯತಿ ಚುನಾವಣೆ ವೇಳೆ ರಸ್ತೆ ಮಾಡುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ತದನಂತರ ಇತ್ತ ತಿರುಗಿಯೂ ನೋಡಿಲ್ಲ. ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಗಿಯುತ್ತಿದ್ದರೂ ಮೂಲ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ. ನಮ್ಮ ಸಮಸ್ಯೆಗೆ ಸ್ಪಂದಿಸದಿದ್ದರೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಬೀದರ್‌ | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಚಾಲನೆ

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ವಿಜಯಲಕ್ಷ್ಮಿ, ಜ್ಯೋತಿ, ಕವಿತಾ, ಲಕ್ಷ್ಮಿ, ಕೃಷ್ಣಬಾಯ್, ಸಂತೋಷ್, ಗೋಪಾಲ್, ಗುರುನಾಥ ಮತ್ತಿತರರು ಇದ್ದರು.

ವರದಿ ಮಾಹಿತಿ : ಲೋಕೇಶ ಕಾಂಬಳೆ, ಸಿಟಿಜನ್‌ ಜರ್ನಲಿಸ್ಟ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X