ಬೀದರ್‌ | ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸೋರಿಕೆ; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯದ ಆರೋಪ

Date:

ಬೀದರ್ ತಾಲೂಕಿನ ಕಾಡವಾದ ಗ್ರಾಮದ ಅಂಗನವಾಡಿ ಕೇಂದ್ರ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಯಾವಾಗ ಕುಸಿದು ಬೀಳುತ್ತದೋ ಎಂಬ ಆತಂಕ ಪೋಷಕರಲ್ಲಿ ಮೂಡಿದೆ.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾಡವಾದ ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೂ ಇಲ್ಲಿನ ಅಂಗನವಾಡಿ ಕೇಂದ್ರಕ್ಕೆ ಮೂಲ ಸೌಕರ್ಯ ಒದಗಿಸಲು ಗ್ರಾಮ ಪಂಚಾಯಿತಿ ಆಡಳಿತ ಸಂಪೂರ್ಣ ವಿಫಲವಾಗಿದೆ.

“ಸುಮಾರು 25 ವರ್ಷದ ಹಳೆ ಕಟ್ಟಡದಲ್ಲಿ ಕಳೆದ 12 ವರ್ಷಗಳಿಂದ ಅಂಗನವಾಡಿ ನಡೆಯುತ್ತಿದೆ. ಕಟ್ಟಡದ ಮೇಲ್ಛಾವಣಿ ಹಾಗೂ ಗೋಡೆ ಅಲ್ಲಲ್ಲಿ ಬಿರುಕು ಬಿಟ್ಟು ಸೋರುತ್ತಿದೆ. ಕಿಟಕಿ, ಬಾಗಿಲು ಕಿತ್ತು ಬಂದಿವೆ. ಛಾವಣಿ ಹಿಂಬದಿ ಕಿಟಕಿಗಳ ವ್ಯವಸ್ಥೆ ಇಲ್ಲದೆ ಮಳೆ ನೀರು ಒಳಗೆ ನುಗ್ಗಿ ಧಾನ್ಯಗಳು ತೋಯ್ದು ಹೋದ ಘಟನೆ ಜರುಗಿದೆ. ಒಂದೆರಡು ಬಾರಿ ಅಡುಗೆ ಕೋಣೆಗೆ ಹಾವು ಬಂದಿತ್ತು. ಇದರಿಂದ ನಮಗೂ ಸೇರಿದಂತೆ ಮಕ್ಕಳು, ಪೋಷಕರಿಗೆ ಆತಂಕ ಎದುರಾಗಿದೆ” ಎಂದು ಅಂಗನವಾಡಿ ಸಿಬ್ಬಂದಿ ಈ ದಿನ.ಕಾಮ್‌ಗೆ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಪಾಯಕ್ಕೆ ಆಹ್ವಾನಿಸುತ್ತಿರುವ ಶೌಚಾಲಯ ಗುಂಡಿ

ಶೌಚಾಲಯಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಾಲೆ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಕೋಟ್ಯಂತರ ರೂ. ವೆಚ್ಚ ಮಾಡುತ್ತವೆ. ಆದರೆ ಈ ಅಂಗನವಾಡಿ ಕೇಂದ್ರದಲ್ಲಿ ಓದುವ 19 ಮಕ್ಕಳಿಗೆ ಬಯಲು ಶೌಚಾಲಯವೇ ಗತಿ ಎಂಬಂತಾಗಿದೆ. ಶೌಚಾಲಯ ನಿರ್ಮಾಣಕ್ಕಾಗಿ ಗುಂಡಿ ತೋಡಿದ ಪಂಚಾಯತ್ ಸದಸ್ಯರೊಬ್ಬರು ಎರಡು ವರ್ಷಗಳಾದರೂ ಶೌಚಾಲಯ ಕಾಮಗಾರಿ ಮುಗಿಸಲಿಲ್ಲ. ತೆರೆದ ಗುಂಡಿ ಹಾಗೇ ಉಳಿದ ಪರಿಣಾಮ ವಿದ್ಯಾರ್ಥಿಗಳು ಆತಂಕದಲ್ಲಿ ಕಲಿಯಬೇಕಾಗಿದೆ.

ಅಂಗನವಾಡಿ ಕೋಣೆ ಮುಂಭಾಗದಲ್ಲಿ ಇರುವ ಸುಮಾರು 5 ಅಡಿ ಆಳದ ಗುಂಡಿಯಲ್ಲಿ ಪುಟ್ಟ ಕಂದಮ್ಮಗಳು ಬೀಳುವ ಸಾಧ್ಯತೆ ಇದೆ. ಈ ಭಯದಿಂದ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಬರೀ 8ರಿಂದ 10 ಮಕ್ಕಳು ಬರುತ್ತಿದ್ದಾರೆ. ಪಂಚಾಯಿತಿ ಪಿಡಿಒ ಹಾಗೂ ಸದಸ್ಯರ ನಿರ್ಲಕ್ಷ್ಯ ಧೋರಣೆಯಿಂದ ಅಂಗನವಾಡಿ ಮಕ್ಕಳು ಕಲಿಕೆಯಿಂದ ವಂಚಿತರಾಗುತ್ತಿದ್ದಾರೆ ಎಂಬುದಕ್ಕೆ ಇದು ತಾಜಾ ಉದಾಹರಣೆ.

ಸ್ವಂತ ಖರ್ಚಿನಿಂದ ಅಂಗನವಾಡಿ ರಿಪೇರಿ

ಅಂಗನವಾಡಿ ಕಾರ್ಯಕರ್ತೆ ಸ್ನೇಹಲತಾ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಮಳೆ ನೀರು ಸಂಗ್ರಹವಾಗಿ ಅಂಗನವಾಡಿ ಕೇಂದ್ರದಲ್ಲಿನ ದವಸ ಧಾನ್ಯ ಹಾಳಾಗುತ್ತಿದ್ದು, ರಿಪೇರಿ ಮಾಡಿಸುವಂತೆ ಕೇಳಿದರೆ ಸ್ಪಂದಿಸದ ಸದಸ್ಯರ ನಿರ್ಲಕ್ಷ್ಯಕ್ಕೆ ಬೇಸತ್ತು ತಮ್ಮ ಸ್ವಂತ ಖರ್ಚಿನಿಂದ ಅಂಗನವಾಡಿ ಅಡುಗೆ ಕೋಣೆ ರಿಪೇರಿ ಮಾಡಿಸಿಕೊಂಡಿದ್ದೇವೆ. ಹಲವು ಬಾರಿ ಶೌಚಾಲಯ ಗುಂಡಿ ಮುಚ್ಚುವಂತೆ ವಿನಂತಿಸಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

“ಏನೂ ಅರಿಯದ ಪುಟ್ಟ ಕಂದಮ್ಮಗಳು ಆಟ ಆಡಲು ಅಥವಾ ಶೌಚಕ್ಕೆ ಹೊರಗಡೆ ಬಂದು ಆಯತಪ್ಪಿದರೆ ಸಾಕು ಶೌಚಾಲಯದ ಗುಂಡಿಯೊಳಗೆ ಬೀಳುವ ದೊಡ್ಡ ಅಪಾಯವಿದೆ. ಇನ್ನು ಮಳೆಯಾದರೆ ಗುಂಡಿ ತುಂಬುತ್ತದೆ. ಕೂಡಲೇ ಗ್ರಾಮ ಪಂಚಾಯಿತಿ ಆಡಳಿತ ಹಾಗೂ ಸಿಡಿಪಿಒ ಅಧಿಕಾರಿಗಳು ಎಚ್ಚೆತ್ತುಕೊಂಡು ಅವ್ಯವಸ್ಥೆ ಸರಿಪಡಿಸಬೇಕು. ಇಲ್ಲವಾದಲ್ಲಿ ಮುಂದಿನ ಅನಾಹುತಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ನೇರ ಹೊಣೆ ಆಗಬೇಕಾಗುತ್ತದೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾತನಾಡಿ, “ಕೆಲ ವರ್ಷಗಳ ಹಿಂದೆ ನಿರ್ಮಿಸಿದ ಅಂಗನವಾಡಿ ಕಟ್ಟಡ ಚೆನ್ನಾಗಿಯೇ ಇದೆ” ಎಂದು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಬಿಸಿಲಿನ ತಾಪ ಹೆಚ್ಚಳ; ಮೃಗಾಲಯ ತಂಪಾಗಿಡಲು ವಿಶೇಷ ವ್ಯವಸ್ಥೆ

ಪ್ರಸ್ತುತ ವರ್ಷ ಮೈಸೂರು ನಗರದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿರುವುದರಿಂದ ಮೃಗಾಲಯದ ಪ್ರಾಣಿಗಳು...

ತುಮಕೂರು | ಹಾಲಪ್ಪ ಯಾರು? ಮುದ್ದಹನುಮೇಗೌಡರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ: ಸಚಿವ ರಾಜಣ್ಣ

ಮಾಜಿ ಸಂಸದ ಮುದ್ದಹನುಮೇಗೌಡ ಅವರು ಯಾವುದೇ ಷರತ್ತಿಲ್ಲದೆ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದು,...

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ...

ತುಮಕೂರು | ಲೋಕಸಭಾ ಚುನಾವಣೆಗೆ ಜೆಡಿಎಸ್‌ ಟಿಕೆಟ್‌ ಬೇಡಿಕೆಯಿಟ್ಟ ಕೆ.ಟಿ ಶಾಂತಕುಮಾರ್

ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್...