ಬೀದರ್‌ | ಮಳೆಯಿಂದ ಶಾಲೆ ಗೋಡೆ ಬಿದ್ದು ವಿದ್ಯಾರ್ಥಿಗೆ ಗಾಯ : ಬಗದಲ್ ಶಾಲೆ ಮುಖ್ಯಶಿಕ್ಷಕ ಅಮಾನತು

Date:

Advertisements

ಮಳೆ ಬರುವ ಸಂದರ್ಭದಲ್ಲಿ ಶಾಲೆಯಲ್ಲಿ ಅನುಸರಿಸಬೇಕಾದ ಮುಂಜಾಗೃತ ಕ್ರಮದ ಬಗ್ಗೆ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಆದೇಶ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸದೆ ಕರ್ತವ್ಯದಲ್ಲಿ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಎಸಗಿದಕ್ಕಾಗಿ ಬೀದರ್ ತಾಲ್ಲೂಕಿನ ಬಗದಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಮಡಯ್ಯಾ ಸ್ವಾಮಿ ಅವರನ್ನು ಅಮಾನತುಗೊಳಿಸಲಾಗಿದೆ.

2025ರ ಆಗಸ್ಟ್‌ 7ರಂದು ಸದರಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ರೋಹನ ರಾಬರ್ಟ್‌ ಮಧ್ಯಾಹ್ನದ ಬಿಸಿಯೂಟ ಸೇವಿಸುವಾಗ ಶಾಲೆಯ ಗೋಡೆ ಬಿದ್ದು ತಲೆಗೆ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ಕೂಡಲೇ ಗ್ರಾಮದ ಮುಖಂಡರು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರು.

ಅಮಾನತಿನ ಅವಧಿಯಲ್ಲಿ ನಿಯಮಾನುಸಾರ ಕೆಸಿಎಸ್‌ಆರ್ ನಿಯಮ 98ರ ಅನ್ವಯ ಜೀವನಾಧರ ಭತ್ಯೆ ಪಡೆಯಲು ಅರ್ಹರಾಗಿರುತ್ತಾರೆ. ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕೆಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪನಿರ್ದೇಶಕರು ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.

Advertisements

ಇದನ್ನೂ ಓದಿ : ರಾಜ್ಯದಲ್ಲಿ ಅಧಿಕ ಮಳೆ : 4 ತಿಂಗಳಲ್ಲಿ 101 ಜನ, 843 ಜಾನುವಾರು ಸಾವು; 15 ಸಾವಿರ ಹೆಕ್ಟೇರ್‌ ಬೆಳೆ ಹಾನಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X