ಹಲವು ದಿನಗಳಿಂದ ಕಾಗೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪುತ್ತಿದ್ದು, ಸದ್ಯ ಬೀದರ್ ಜಿಲ್ಲೆಯಲ್ಲಿ ಹಕ್ಕಿಜ್ವರದ ಆತಂಕ ಹೆಚ್ಚಾಗಿದೆ. ಭಾಲ್ಕಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಕಾಗೆಗಳು ಏಕಾಏಕಿ ಸಾವನ್ನಪ್ಪಿ ನೆಲಕ್ಕೆ ಬೀಳುತ್ತಿವೆ.
ಹಲವು ದಿನಗಳ ಹಿಂದೆ ಭಾಲ್ಕಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಉದ್ದಗೀರನಲ್ಲಿ ಮೊದಲ ಬಾರಿಗೆ ಹಕ್ಕಿಜ್ವರ ಕಾಣಿಸಿಕೊಂಡಾಗ ನೂರಾರು ಕಾಗೆಗಳು ಸಾವನ್ನಪ್ಪಿದ್ದವು. ಈಗ ಅದೇ ರೀತಿ ಭಾಲ್ಕಿಯಲ್ಲೂ ಪ್ರತಿದಿನ ಕಾಗೆಗಳು ಸತ್ತು ಬೀಳುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಇದನ್ನೂ ಓದಿ: ಬೀದರ್ | ವಾಕಿಂಗ್ ಹೋಗುತ್ತಿದ್ದ ಯುವಕನಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು
ಮಹಾರಾಷ್ಟ್ರ ಹಾಗೂ ತೆಲಂಗಾಣದ ಗಡಿಯಲ್ಲಿ ಪಶು ಇಲಾಖೆಯ ಅಧಿಕಾರಿಗಳು ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಿದ್ದರೂ ಅವರ ಕಣ್ಣು ತಪ್ಪಿಸಿ ಜಿಲ್ಲೆಗೆ ಅಕ್ರಮವಾಗಿ ಕೋಳಿ ಸಾಗಾಣಿಕೆ ಮಾಡಲಾಗುತ್ತಿದೆ. ನಿಗೂಢವಾಗಿ ಸಾವನ್ನಪ್ಪುತ್ತಿರುವ ಕಾಗೆಗಳು ಸೇರಿದಂತೆ ಇತರೆ ಪಕ್ಷಿಗಳ ಸಾವಿನ ಬಗ್ಗೆ ವೈದ್ಯಾಧಿಕಾರಿಗಳು ಪರಿಶೀಲಿಸಿ ಹಕ್ಕಿಜ್ವರದ ಆತಂಕವನ್ನು ನಿವಾರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
