ಬೀದರ್‌ | ರಸ್ತೆ ಮೇಲೆ ಹರಿಯುತ್ತಿದೆ ಚರಂಡಿ ನೀರು; ಅಧಿಕಾರಿ ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಸೂಕ್ತವಾದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ನಿರ್ಮಾಣ ಮಾಡದ ಕಾರಣ ಮನೆಯ ಮುಂಭಾಗದಲ್ಲಿ ಹೊಲಸು ನೀರು ಸಂಗ್ರಹವಾಗುತ್ತಿದ್ದು, ಓಣಿಯ ನಿವಾಸಿಗಳು ರೋಗದ ಭೀತಿಯಲ್ಲಿ ವಾಸಿಸುತ್ತಿದ್ದೇವೆ ಎಂದು ಬೀದರ್‌ ಜಿಲ್ಲೆಯ ಗ್ರಾಮಸ್ಥರು ದೂರಿದರು.

- Advertisement -

ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಗ್ರಾಮದ ದಲಿತ ಓಣಿಯಲ್ಲಿ ಕಳೆದ 8ರಿಂದ 10 ವರ್ಷಗಳಿಂದ ರಸ್ತೆ ಕಿತ್ತು ಹೋಗಿದ್ದರೂ ಸುಧಾರಣೆ ಕಂಡಿಲ್ಲ. ಇನ್ನು ಚರಂಡಿ ವ್ಯವಸ್ಥೆ ಅಂತೂ ಇಲ್ಲವೇ ಇಲ್ಲ. ಶುದ್ಧ ಕುಡಿಯುವ ನೀರಿನ ಪೈಪ್ ಇದೇ ಹೊಲಸು ನೀರಿನಲ್ಲಿದೆ. ಇದರಿಂದ ಕಾಲೋನಿಯ ಸುಮಾರು 40ಕ್ಕೂ ಹೆಚ್ಚಿನ ಕುಟುಂಬಗಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ” ಎಂದು ಸ್ಥಳೀಯ ನಿವಾಸಿ ಗೌತಮ ಸಿಂಧೆ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
ಬೀದರ್‌ 2 1

ಸ್ಥಳೀಯ ನಿವಾಸಿಗಳು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮ ಪಂಚಾಯತ್ ಕೇಂದ್ರವಾದ ದಾಡಗಿ ಗ್ರಾಮದ ಇತರೆ ಓಣಿಯಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಮಾಡಲಾಗಿದೆ. ಆದರೆ ಪರಿಶಿಷ್ಟ ಜಾತಿ ಓಣಿಯಲ್ಲಿ ಸೌಕರ್ಯ ಒದಗಿಸಲು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸದಸ್ಯರಿಗೆ ಕಳೆದ ಹಲವು ವರ್ಷಗಳಿಂದ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಇದೀಗ ಮಳೆಗಾಲ ಆರಂಭವಾದ ಕಾರಣ ಮನೆಮುಂದೆ ಸಂಗ್ರಹವಾದ ನೀರಿನಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ” ಎಂದು ಈ ದಿನ.ಕಾಮ್ ಗೆ ಮಾತನಾಡಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಧರ್ಮಸ್ಥಳ ಸಂಘದಲ್ಲಿ ಸಾಲ ಮನ್ನಾಗೆ ಆಗ್ರಹಿಸಿ ಬಹಿರಂಗ ಪತ್ರ

ಈಗಾಗಲೇ ಜಿಲ್ಲೆಯ ಕೆಲವೆಡೆ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿದ್ದ ಘಟನೆಗಳು ಜರುಗಿವೆ. ಹೀಗಾಗಿ ಕೂಡಲೇ ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ಅನಾಹುತಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ ಆಗಬೇಕಾಗುತ್ತದೆ” ಎಂದು ಓಣಿಯ ನಿವಾಸಿಗಳು ಎಚ್ಚರಿಸಿದರು.

ಈ ವೇಳೆ ರಾಜಕುಮಾರ್ ಕಾಂಬಳೆ, ಮಾರುತಿ ಧಾವಲೆ, ಸಾಧಿಕ್ ಮಿಯ್ಯಾ, ಶಿವರಾಜ್ ಕಾಂಬಳೆ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಬೀದರ್‌ | ಲೇಖಕರಿಂದ ಗಟ್ಟಿ ಸಾಹಿತ್ಯ ಹೊರಬರಲಿ: ವಿಜಯಕುಮಾರ ಸೋನಾರೆ

ಪುಸ್ತಕಗಳ ನಿರಂತರ ಓದಿನಿಂದ ಬೌದ್ಧಿಕ ಪ್ರಬುದ್ಧತೆ ಬೆಳೆಯುತ್ತದೆ. ಬೀದರ್ ಜಿಲ್ಲೆಯಲ್ಲಿರುವ ಪ್ರತಿಭಾನ್ವಿತ...