ಬೀದರ್‌ | ಆಲಿಕಲ್ಲು ಮಳೆಗೆ ಬೆಳೆಹಾನಿ; ಶೈಲೇಂದ್ರ ಬೆಲ್ದಾಳೆ ಭೇಟಿ

Date:

  • ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ
  • ಬೆಳೆಹಾನಿ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದ ಬೆಲ್ದಾಳೆ

ಆಲಿಕಲ್ಲು ಮಳೆಯಿಂದ ಬೀದರ್ ತಾಲೂಕಿನ ಸುಲ್ತಾನಪುರ, ಮಲ್ಕಾಪುರ ಗ್ರಾಮಗಳಲ್ಲಿ ಭಾರೀ ಪ್ರಮಾಣದ ಬೆಳೆ ಹಾನಿಯಾಗಿದೆ. ಮಳೆಯಿಂದ ಹಾನಿಗೊಳಗಾದ ಗ್ರಾಮಗಳ ಜಮೀನುಗಳಿಗೆ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ.

ಜೋಳ, ಈರುಳ್ಳಿ, ಕಡಲೆ, ಕಲ್ಲಂಗಡಿ, ಹೂ ಕೋಸು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು, ನಷ್ಟ ಅನುಭವಿಸಿರುವುದಾಗಿ ರೈತರು ಅಧಿಕಾರಿಗಳ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸಂತ್ರಸ್ತ ರೈತರ ಹೊಲಗಳ ಸಮೀಕ್ಷೆ ನಡೆಸಿ, ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಬೆಲ್ದಾಳೆ ಸೂಚಿಸಿದ್ದಾರೆ.

“ಬೆಳೆಹಾನಿ ಕುರಿತಂತೆ ಮುಖ್ಯಮಂತ್ರಿ ಅವರ ಗಮನಕ್ಕೆ ತಂದು, ರೈತರಿಗೆ ಸೂಕ್ತ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು” ಎಂದು ಅವರು ಭರವಸೆ ನೀಡಿದ್ದಾರೆ.

ಅಧಿಕಾರಿಗಳ ಭೇಟಿ ವೇಳೆ, ಚನ್ನಪ್ಪ ಗೌರಶೆಟ್ಟಿ, ಬಸವರಾಜ ಹಿಲಾಲಪುರ, ಶಿವು ಸುಲ್ತಾನಪುರೆ, ಸಂಗಯ್ಯ ಸ್ವಾಮಿ, ಬಸವರಾಜ ಹೆಡ್ಡಿ, ಅನಿಲ್ ಮೇಲ್ದೊಡ್ಡಿ ಸೇರಿದಂತೆ ಅಧಿಕಾರಿಗಳು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ʼಸೊಸೆಗೆ ಸೀರೆ ಉಡಿಸಬೇಕುʼ ವದಂತಿ; ಅಂಗಡಿಗಳಲ್ಲಿ ವ್ಯಾಪಾರ ಜೋರು

ವೈಜ್ಞಾನಿಕವಾಗಿ ಜಗತ್ತು ಎಷ್ಟೇ ಮುಂದುವರೆದ್ರೂ ಮೌಢ್ಯ ಆಚರಣೆಗಳನ್ನ ಮಾತ್ರ ಬಿಟ್ಟಿಲ್ಲ. ಇದಕ್ಕೆ...

ಬೆಳಗಾವಿ | ನಿಗಮ-ಮಂಡಳಿ ಅಧ್ಯಕ್ಷರಿಗೆ ಸಂಪುಟ ಸ್ಥಾನಮಾನ; ಪಿಐಎಲ್‌ ದಾಖಲಿಸುವುದಾಗಿ ಎಚ್ಚರಿಕೆ

"ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನಗಳಿಂದ ವಂಚಿತರಾಗಿ ಅತೃಪ್ತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ಸಲುವಾಗಿ,...

ಧಾರವಾಡ | ಚಳಿಯ ಕೊರತೆ; ಸಂಕಷ್ಟದಲ್ಲಿ ಕಡಲೆ ಬೆಳೆದ ರೈತರು

ಮುಂಗಾರು ಮಳೆ ವೈಫಲ್ಯದಿಂದ ಮುಂಗಾರು ಬೆಳೆ ಕಳೆದುಕೊಂಡಿದ್ದ ಧಾರವಾಡ ಜಿಲ್ಲೆಯ ರೈತರಿಗೆ,...

ತುಮಕೂರು | ವಿದ್ಯಾರ್ಥಿನಿ ಜೊತೆ ಶಿಕ್ಷಕ ಅನುಚಿತ ವರ್ತನೆ; ಪೋಷಕರ ಪ್ರತಿಭಟನೆ

ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು...