ಬೀದರ್‌ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ : ವಕೀಲ ರಾಕೇಶ ಕಿಶೋರ್‌ ಪ್ರತಿಕೃತಿ ದಹಿಸಿ ಆಕ್ರೋಶ

Date:

ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಅ.6ರಂದು ಶೂ ಎಸೆದು ಅಪಮಾನಿಸಿದ ವಕೀಲ ರಾಕೇಶ ಕಿಶೋರ್‌ ಕೃತ್ಯ ಖಂಡಿಸಿ ಬಸವಕಲ್ಯಾಣದಲ್ಲಿ ಬುಧವಾರ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ ನಡೆಯಿತು.

- Advertisement -

ನಗರದ ಡಾ.ಅಂಬೇಡ್ಕರ್ ಅವರ ವೃತ್ತದಲ್ಲಿ ಸೇರಿದ ವಿವಿಧ ಸಂಘಟನೆಗಳ ಪ್ರಮುಖರು ವಕೀಲ ರಾಕೇಶ ವಿರುದ್ಧ ಘೋಷಣೆ ಕೂಗಿದರು, ಬಳಿಕ ವಕೀಲ ರಾಕೇಶ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು. ತಹಶೀಲ್ದಾರ್ ಮುಖಾಂತರ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ʼಸಿಜೆಐ ಬಿ.ಆರ್ ಗವಾಯಿ ಅವರತ್ತ ಶೂ ಎಸೆದ ವಕೀಲ ರಾಕೇಶ ಕಿಶೋರ್‌ ಹಾಗೂ ಗ್ವಾಲಿಯರ್‌ನಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನಿಸಿದ ಅನೀಲ್ ಮಿಶ್ರಾ ಎಂಬ ವಕೀಲನ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಇಬ್ಬರನ್ನು ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಭಗವಾನ್ ಬುದ್ಧ ಹಾಗೂ ಡಾ.ಅಂಬೇಡ್ಕರ್ ಅವರ ಅನುಯಾಯಿ ಹಾಗೂ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದರೂ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸಿಜೆಐ ಅವರ ಮೇಲೆ ಶೂ ಎಸೆದ ಘಟನೆ ವ್ಯಕ್ತಿ ಮೇಲೆ ನಡೆಸಿದ ದಾಳಿಯಲ್ಲ. ನ್ಯಾಯ, ಸಂವಿಧಾನದ ಮೇಲಿನ ದಾಳಿಯಾಗಿದೆ. ಇದ ಮನುವಾದದ ಮತಾಂಧರು ನಡೆಸಿದ ಸಂವಿಧಾನದ ಮೌಲ್ಯಗಳ ಮೇಲಿನ ಭಯೋತ್ಪಾದಕ ದಾಳಿಯಾಗಿದೆʼ ಎಂದು ಖಂಡಿಸಿದರು.

ʼಸಿಜೆಐ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕಿವೆ. ಈ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಈ ಘಟನೆಯನ್ನು ಖಂಡಿಸಬೇಕು. ಡಾ.ಅಂಬೇಡ್ಕರ್, ಭಾರತೀಯ ಸಂವಿಧಾನ, ನ್ಯಾಯಮೂರ್ತಿ ಮತ್ತು ನ್ಯಾಯಾಲಯಕ್ಕೆ ಅವಮಾನಿಸುವ ವ್ಯಕ್ತಿಗಳ ಮೇಲೆ ಕಡ್ಡಾಯವಾಗಿ ದೇಶದ್ರೋಹದ ಪ್ರಕರಣ ದಾಖಲಿಸಲು ಹೊಸ ಕಾನೂನು ರೂಪಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಬೀದರ್‌ | ಸಿಜೆಐ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿ

ದಸಂಸ ತಾಲೂಕು ಅಧ್ಯಕ್ಷ ಪಿಂಟು ಕಾಂಬಳೆ, ವಾಯ್ಸ್ ಆಫ್ ಅಂಬೇಡ್ಕರ್ ರಾಜ್ಯಾಧ್ಯಕ್ಷ ಸುರೇಶ್ ಮೋರೆ, ಬೌದ್ಧ ಮಹಾಸಭಾ ಅಧ್ಯಕ್ಷ ಮನೋಹರ್ ಮೈಸೆ ಹಾಗೂ ಪ್ರಮುಖರಾದ ಇಕ್ರಾಮ್‌ ಖಾದಿವಾಲಾ, ಆಕಾಶ ಖಂಡಾಳೆ, ದೀಪಕ್ ಗಾಯಕವಾಡ್, ಸಿಕಂದರ್ ಸಿಂಧೆ, ವಿಜಯಕುಮಾರ್ ಡಾಂಗೆ, ಸಂದೀಪ ಮುಕಿಂದೆ, ನಗರಸಭೆ ಸದಸ್ಯ ಗಫಾರ್ ಪೆಸ್ಮಾಮ್, ಸಂಜು, ಗೌತಮ್ ಜಾಂತೆ, ಅಶೋಕ್ ಮದಾಳೆ ಹಾಗೂ ಯುವರಾಜ್ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...

ರಾಯಚೂರು | ಪತ್ರಿಕಾ ರಂಗ ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎ.ವಸಂತ್ ಕುಮಾರ

ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು....

ಮುದ್ದೇಬಿಹಾಳ | ಸೆ.21ರಂದು ಕ್ರಾಂತಿ ಜ್ಯೋತಿ ಪ್ರವಾದಿ ಮುಹಮ್ಮದ್ ಸೀರತ್ ಸಮಾರಂಭ

ಜಮಾಅತೆ ಇಸ್ಲಾಮಿ ಹಿಂದ್ ಮುದ್ದೇಬಿಹಾಳ ಘಟಕದ ವತಿಯಿಂದ ‘ಕ್ರಾಂತಿಯ ಜ್ಯೋತಿ ಪ್ರವಾದಿ...