ಬೀದರ್‌ | ಸಿಜೆಐ ಗವಾಯಿ ಮೇಲೆ ಶೂ ಎಸೆತ ಪ್ರಕರಣ : ದಲಿತ ಸೇನೆ ಪ್ರತಿಭಟನೆ

Date:

ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ವಕೀಲ ರಾಕೇಶ ಕಿಶೋರ್‌ ಶೂ ಎಸೆದಿರುವ ಘಟನೆಯನ್ನು ಖಂಡಿಸಿ ಹುಲಸೂರ ಪಟ್ಟಣದಲ್ಲಿ ಸೋಮವಾರ ದಲಿತ ಸೇನೆ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಪಟ್ಟಣದ ಭೀಮನಗರದ ಡಾ.ಅಂಬೇಡ್ಕರ್ ವೃತ್ತದಿಂದ ಕಾಲ್ನಡಿಗೆಯಲ್ಲಿ ಮೆರವಣಿಗೆ ಮುಖಾಂತರ ತಹಸೀಲ್ದಾರ್‌ ಕಚೇರಿಗೆ ತಲುಪಿದರು. ಬಳಿಕ ತಹಸೀಲ್‌ ಕಚೇರಿ ಎದುರುಗಡೆ ಮುಖ್ಯರಸ್ತೆ ಮೇಲೆ ವಕೀಲ ರಾಕೇಶ್ ಕಿಶೋರ್ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಶಿವಾನಂದ ಮೇತ್ರೆ ಅವರಿಗೆ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತಿಭಟನಾಕಾರರು ಮಾತನಾಡಿ, ʼಸಂವಿಧಾನಾತ್ಮಕ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯುವುದು ಅತ್ಯಂತ ಹೇಯ ಮತ್ತು ರಾಷ್ಟ್ರವಿರೋಧಿ ಕೃತ್ಯವಾಗಿದೆ. ಇಂತಹ ವರ್ತನೆಗೆ ಯಾವುದೇ ರೀತಿಯ ಸಹಾನುಭೂತಿ ತೋರಬಾರದು. ವಕೀಲ ರಾಕೇಶ್ ಕಿಶೋರ್ ಅವರನ್ನು ಬಂಧಿಸಿ, ಪ್ರಕರಣಕ್ಕೆ ನ್ಯಾಯಾಂಗ ತನಿಖೆ ನಡೆಸಿ ದೇಶದಿಂದಲೇ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ʼಸಿಜೆಐ ಬಿ.ಆರ್ ಗವಾಯಿ ಅವರತ್ತ ಶೂ ಎಸೆದ ವಕೀಲ ರಾಕೇಶ ಕಿಶೋರ್‌ ಹಾಗೂ ಗ್ವಾಲಿಯರ್‌ನಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನಿಸಿದ ಅನೀಲ್ ಮಿಶ್ರಾ ಎಂಬ ವಕೀಲನ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ, ಇಬ್ಬರನ್ನು ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕುʼ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ʼಭಗವಾನ್ ಬುದ್ಧ ಹಾಗೂ ಡಾ.ಅಂಬೇಡ್ಕರ್ ಅವರ ಅನುಯಾಯಿ ಹಾಗೂ ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಸಂವಿಧಾನ ಜಾರಿಯಾಗಿ 75 ವರ್ಷಗಳು ಕಳೆದರೂ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸಿಜೆಐ ಅವರ ಮೇಲೆ ಶೂ ಎಸೆದ ಘಟನೆ ವ್ಯಕ್ತಿ ಮೇಲೆ ನಡೆಸಿದ ದಾಳಿಯಲ್ಲ. ನ್ಯಾಯ, ಸಂವಿಧಾನದ ಮೇಲಿನ ದಾಳಿಯಾಗಿದೆ. ಇದ ಮನುವಾದದ ಮತಾಂಧರು ನಡೆಸಿದ ಸಂವಿಧಾನದ ಮೌಲ್ಯಗಳ ಮೇಲಿನ ಭಯೋತ್ಪಾದಕ ದಾಳಿಯಾಗಿದೆʼ ಎಂದು ಖಂಡಿಸಿದರು.

ʼಸಿಜೆಐ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕಿವೆ. ಈ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಈ ಘಟನೆಯನ್ನು ಖಂಡಿಸಬೇಕು. ಡಾ.ಅಂಬೇಡ್ಕರ್, ಭಾರತೀಯ ಸಂವಿಧಾನ, ನ್ಯಾಯಮೂರ್ತಿ ಮತ್ತು ನ್ಯಾಯಾಲಯಕ್ಕೆ ಅವಮಾನಿಸುವ ವ್ಯಕ್ತಿಗಳ ಮೇಲೆ ಕಡ್ಡಾಯವಾಗಿ ದೇಶದ್ರೋಹದ ಪ್ರಕರಣ ದಾಖಲಿಸಲು ಹೊಸ ಕಾನೂನು ರೂಪಿಸಬೇಕುʼ ಎಂದು ಒತ್ತಾಯಿಸಿದರು.

ಇದನ್ನೂ ಓದಿ : ಔರಾದ್ ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ : ಸಚಿವ ಈಶ್ವರ ಖಂಡ್ರೆ

ಪ್ರತಿಭಟನೆಯಲ್ಲಿ ದಲಿತ ಸೇನೆ ತಾಲ್ಲೂಕಾಧ್ಯಕ್ಷ ಅಶೋಕ ಸಿಂಧೆ, ಉಪಾಧ್ಯಕ್ಷ ಸತೀಷ ಗಾಯಕವಾಡ, ಕಾರ್ಯದರ್ಶಿ ಅಶೋಕ ಕಾಂಬಳೆ, ರಾಜು ಲಾಖೆ, ಸಂಭಾಜಿ ಬ್ರಿಗೇಡ್‌ ತಾಲ್ಲೂಕಾಧ್ಯಕ್ಷ ಜ್ಞಾನೋಬಾ ನಿಟ್ಟೂರೆ, ಆಲ್‌ ಇಂಡಿಯಾ ಬಹುಜನ್‌ ಸಮಾಜ ಪಕ್ಷದ ತಾಲ್ಲೂಕಾಧ್ಯಕ್ಷ ಸಂತೋಷ ಮೇಘಶಾಮ, ಆಲ್‌ ಇಂಡಿಯಾ ದಲಿತ ಪ್ಯಾಂಥರ್‌ ಸೇನೆ ಜಿಲ್ಲಾ ಕಾರ್ಯದರ್ಶಿ ಪ್ರಫುಲ್‌ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಾದ ಶಂಕರ ಫುಲೆ, ಮನೋಜ ಬನಸೂಡೆ, ಸುನೀಲ ಹಂದಿಕೇರೆ, ಅರುಣ ಗಾಯಕವಾಡ, ಈರಪ್ಪಾ ಧುಮ್ಮನಸೂರ, ಯಶವಂತ ಕಾಂಬಳೆ, ಅನೀಲ್‌ ಒಡೆಯಾರ್‌, ವಿದ್ಯಾಸಾಗರ, ರತನ್‌ ಸೂರ್ಯವಂಶಿ ಹಾಗೂ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...