ಬೀದರ್ | ಶಿಕ್ಷಕರ ಕೊರತೆ; ಶಾಲೆ ತೊರೆದು ವಿದ್ಯಾರ್ಥಿಗಳ ಪ್ರತಿಭಟನೆ

Date:

Advertisements

ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು, ಶಾಲೆಗೆ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಜಮಗಿ ಶಾಲೆಯ ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಜಮಗಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನಾಲ್ವರು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ನಾಲ್ಕು ವಿಷಯಗಳನ್ನು ಬೋಧಿಸಲು ಶಿಕ್ಷಕಿಲ್ಲದಂತಾಗಿದೆ. ಬೇರೆ ಶಿಕ್ಷಕನ್ನೂ ಶಾಲೆಗೆ ನಿಯೋಜಿಸಿಲ್ಲ. ಹೀಗಾಗಿ, ತರಗತಿಗಳು ನಡೆಯದಂತಾಗಿದೆ. ಶಿಕ್ಷಣದಲ್ಲಿ ಹಿಂದುಳಿಯುವ ಸಾಧ್ಯತೆ ಇದೆ ಎಂದು ವಿದ್ಯಾರ್ಥಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರೌಢಶಾಲೆಯಲ್ಲಿ ಸುಮಾರು 200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದೇವೆ. ಆದರೆ, ಶಾಲೆಯಲ್ಲಿ ಮುಖ್ಯೋಪಾಧ್ಯಾಯ ಮತ್ತು ಗಣಿತ ಶಿಕ್ಷಕರು ಮಾತ್ರವೇ ಇದ್ದಾರೆ. ಉಳಿದ ಯಾವುದೇ ವಿಷಯ ಶಿಕ್ಷಕರಿಲ್ಲ. ಕಳೆದ ಹದಿನೈದು ದಿನಗಳಿಂದ ಬೇರೆ ಶಿಕ್ಷಕರು ಬರ್ತಾರೆ ಅಂತ ಹೇಳ್ತಾನೇ ಇದ್ದಾರೆ.‌ ಆದರೆ, ಯಾವುದೇ ಶಿಕ್ಷಕರು ಬಂದಿಲ್ಲ ಎಂದು ಕಿಡಿಕಾರಿದ್ದಾರೆ.

Advertisements

“ಶಾಲೆಗೆ ಇಬ್ಬರು ಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ಉಳಿದ ವಿಷಯಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಲಾಗುತ್ತದೆ” ಎಂದು ಔರಾದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್ ನಗನೂರ ಈದಿನ.ಕಾಮ್‌ಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X