ಬೀದರ್‌ | ಮತಗಳ್ಳತನ ವಿರುದ್ಧ ಬಸವಕಲ್ಯಾಣದಲ್ಲಿ ಸಹಿ ಸಂಗ್ರಹ ಅಭಿಯಾನ

Date:

ʼಮತಗಳ್ಳತನ ವಿರೋಧಿ ಅಭಿಯಾನ ಒಂದು ಪಕ್ಷದ ಹೋರಾಟವಲ್ಲ, ಪ್ರಜಾಪ್ರಭುತ್ವವನ್ನು ಉಳಿಸುವ ಹೋರಾಟವಾಗಿದೆʼ ಎಂದು ಮಾಜಿ ವಿಧಾನ ಪರಿಷತ್‌ ಸದಸ್ಯ ವಿಜಯ್ ಸಿಂಗ್ ಹೇಳಿದರು.

- Advertisement -

ಬಸವಕಲ್ಯಾಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಡಾ ಬಿ.ಆರ್.ಅಂಬೇಡ್ಕರ್‌ ವೃತ್ತದಲ್ಲಿ ಆಯೋಜಿಸಿದ ಮತಗಳವು ವಿರೋಧಿ ಸಹಿ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿ, ʼದೇಶದ ಸಂವಿಧಾನ ದೇಶದ ಎಲ್ಲಾ ನಾಗರಿಕರಿಗೆ ಎಲ್ಲಾ ಹಕ್ಕುಗಳನ್ನು ನೀಡಿದೆ. ಅದರಲ್ಲೂ ಮತದಾನ ಹಕ್ಕು ಅತ್ಯಂತ ಪವಿತ್ರವಾಗಿದೆ. ಆದರೆ, ಅದನ್ನು ಕದಿಯುವ ಅಥವಾ ಮರೆಮಾಚುವ ಯಾವುದೇ ಪ್ರಯತ್ನ ಜನರ ಹಕ್ಕಿಗೆ ವಿರುದ್ಧವಾಗಿದ್ದು, ಇದು ಖಂಡನೀಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಮ್ಮ ಕಾಂಗ್ರೆಸ್ ಪಕ್ಷದಿಂದ ಇಡೀ ದೇಶದಲ್ಲಿ 5 ಕೋಟಿ ಸಹಿ ಸಂಗ್ರಹ ಮಾಡುವ ಉದ್ದೇಶವಿದ್ದು, ಜಿಲ್ಲೆಯ ಪ್ರತಿಯೊಬ್ಬ ಕಾರ್ಯಕರ್ತರು ಬಿಜೆಪಿ ಮಾಡಿರುವ ಈ ‘ವೋಟ್ ಚೋರಿ’ ಬಗ್ಗೆ ತಮ್ಮ ಬೂತ್ ಮಟ್ಟದಲ್ಲಿ ಮತದಾರರಿಗೆ ಮನವರಿಕೆ ಮಾಡಿ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

WhatsApp Image 2025 10 12 at 9.43.42 AM
ಮತಗಳವು ವಿರುದ್ಧ ಸಹಿ ಸಂಗ್ರಹ ಅಭಿಯಾನಕ್ಕೆ ಮಾಜಿ ಎಂಎಲ್ಸಿ ವಿಜಯ ಸಿಂಗ್‌ ಚಾಲನೆ ನೀಡಿದರು.

‘ಚುನಾವಣೆ ಆಯೋಗ ಮತದಾರರ ಪಟ್ಟಿಯಲ್ಲಿನ ಹೆಸರು ಸೇರ್ಪಡೆ, ಡಿಲೀಟ್‌ ಮಾಡಲು ಸಮಯಾವಕಾಶ ಕೊಟ್ಟು ಸಾರ್ವಜನಿಕಗೊಳಿಸಬೇಕು. ಎಲ್ಲ ಮತದಾರರ ಭಾವಚಿತ್ರ ಇರುವಂತೆ ಮತದಾರರ ಪಟ್ಟಿ ಸಿದ್ದಪಡಿಸಬೇಕು. ಬಸವಕಲ್ಯಾಣ ಕ್ಷೇತ್ರದಲ್ಲಿ ಕಡಿಮೆ ವಯಸ್ಸಿನವರನ್ನು ಮತದಾರರ ಪಟ್ಟಿಗೆ ಸೇರಿಸಲಾಗಿದ್ದು, ತಪ್ಪಿಸ್ಥ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕುʼ ಎಂದು ಆಗ್ರಹಿಸಿದರು.

ʼನಾವು ಅಧಿಕಾರಕ್ಕಾಗಿ ಕೆಲಸ ಮಾಡದೇ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿದ್ದೇವೆ. ಕ್ಷೇತ್ರದ ಪ್ರತಿ ಬೂತ್‌ನಲ್ಲಿ ಮತದಾರರ ಪಟ್ಟಿಯಲ್ಲಿರುವ ಹೆಸರುಗಳನ್ನು ಅಂಕಿ-ಅಂಶಗಳೊಂದಿಗೆ ಪರಿಶೀಲಿಸಿ, ಮತಗಳವು ನಡೆದರೆ ಅದರ ವಿರುದ್ಧ ಎಲ್ಲರೂ ಪ್ರಜಾಪ್ರಭುತ್ವ ಉಳಿವಿಗಾಗಿ ಧ್ವನಿಯೆತ್ತಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಬೀದರ್‌ | ʼಶಾಹೀನ್ʼ ಸಂಸ್ಥೆಯಿಂದ ಮಹಮೂದ್ ಗಾವಾನ್ ಮದರಸಾ ನವೀಕರಣ ಆರಂಭ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ್ ಸೇರಿದಂತೆ ಪ್ರಮುಖರಾದ ಅಜರಲಿ ನವರಂಗ, ಬಾಬು ಹೊನ್ನಾ ನಾಯಕ, ಡಿ.ಕೆ.ದಾವೂದ್, ರವಿ ಗಾಯಕವಾಡ, ರವಿ ಬುರಾಳೆ, ಶಿವು ಶೆಟಗರ, ದತ್ತು ಪದ್ಮ, ಆನಂದ್ ಪಾಟೀಲ್, ಲತಾ ಹಾರಕುಡೆ, ಸಗಿರೋದ್ದಿನ್, ಮನೋಹರ್‌ ಮೈಸೇ, ಯುವರಾಜ್ ಭೆಂಡೆ, ಮಲ್ಲು ಬೊಕ್ಕೆ, ನಾಗನಾಥ ಮೇತ್ರೆ, ಗಫಾರ್‌ ಪೇಶ ಇಮಾಮ್, ದಿಲೀಪ್ ಶಿಂಧೆ, ಶಶಿಕಾಂತ್ ದುರ್ಗೆ, ಭೀಮಶಾ ಫುಲೆ ಸೇರಿದಂತೆ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...