ಬೀದರ್‌ | ಮಾಧ್ಯಮಗಳ ಪ್ರಾಮಾಣಿಕತೆ-ಬದ್ಧತೆಯಿಂದ ಸಾಮಾಜಿಕ ಏಳಿಗೆ ಸಾಧ್ಯ : ಡಾ.ಪ್ರಹ್ಲಾದ ಚೆಂಗಟಿ

Date:

ಸಮೂಹ ಮಾಧ್ಯಮಗಳು ಸಂವಿಧಾನದ ನಾಲ್ಕನೇ ಅಂಗ. ಅವುಗಳ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದಲೆ ಸಮಾಜದ ಏಳಿಗೆ ಸಾಧ್ಯ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ.ಪ್ರಹ್ಲಾದ ಚೆಂಗಟಿ ಹೇಳಿದರು.

- Advertisement -

ಬಸವಕಲ್ಯಾಣ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈದಿನ.ಕಾಮ್, ಐಕ್ಯುಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ‘ಮಾಧ್ಯಮ ಮತ್ತು ಯುವಜನತೆ’ ಕುರಿತ ವಿಶೇಷ ಉಪನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ʼಮಾಧ್ಯಮದವರಲ್ಲಿ ಇರುವ ಸಾಮಾಜಿಕ ಕಳಕಳಿ, ಕಾಳಜಿಗಳಿಂದ ಜಗತ್ತಿನ ಆತಂಕ, ಸಮಸ್ಯೆ ಕಳೆಯಲು ಸಾಧ್ಯʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ಏನೂ ಇಲ್ಲ- ನಾಸೆರ್...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಇರಾನಿನ ಕವಿ ನಾಸೆರ್ ಫಯ್ಜ್ ಅವರ ಕವನವೊಂದನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ ಹೆಚ್‌ ಭಾಗ್ಯ ಅಳುವ ಮಗವೊಂದನು ಸುಟ್ಟು ಬೂದಿ ಮಾಡಿದರು. ಅವನು ಏನೂ ಇಲ್ಲವೆಂದ. ತನ್ನೆಲ್ಲಾ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ಪತ್ರಕರ್ತ ಬಾಲಾಜಿ ಕುಂಬಾರ ಅವರು ವಿಶೇಷ ಉಪನ್ಯಾಸ ನೀಡಿ, ʼಈ ಕಾಲದಲ್ಲಿ ತಂತ್ರಜ್ಞಾನದ ಮೂಲಕ ಜಗತ್ತನ್ನು ನೋಡಲು ಕಲಿತಿದ್ದೇವೆ. ಆದರೆ, ಗ್ರಾಮೀಣ ಭಾರತದ ಹಲವಾರು ಸಮಸ್ಯೆ ಮತ್ತು ಸವಾಲುಗಳನ್ನು ಬಗೆಹರಿಸಲು ಸಾಧ್ಯವಾಗಿಲ್ಲ‌. ಹಳ್ಳಿಗಳು ಮತ್ತು ನಗರಗಳು ಎದುರಿಸುವ ವಿಭಿನ್ನ ಸಮಸ್ಯೆಗಳಿಗೆ ಪರಿಹರಿಸು ಕೆಲಸ ಮಾಧ್ಯಮಗಳಿಂದ ಸಾಧ್ಯʼ ಎಂದು ಹೇಳಿದರು.

ʼಮಾಧ್ಯಮ ಎಲ್ಲವೂ, ಎಲ್ಲರನ್ನೂ ಒಳಗೊಳ್ಳುವ ಮೂಲಕ ಚಲನಶೀಲತೆ ಪಡೆದಿದೆ. ಅದು ಏಕಕಾಲದಲ್ಲಿ ಓದುಗ ಮತ್ತು ಬರಹಗಾರರನ್ನು ಸೃಷ್ಟಿಸುವ ಕೆಲಸ ಮಾಡುತ್ತದೆ. ಹಲವು ಬರಹಗಾರರು ಪತ್ರಿಕೆಗಳಲ್ಲಿ ಬರೆಯುವ ಮೂಲಕ ಸಮಾಜವನ್ನು ಕಟ್ಟಿದ್ದಾರೆʼ ಎಂದರು.

ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ ಡಾ.ಭೀಮಾಶಂಕರ ಬಿರಾದಾರ ಮಾತನಾಡಿ, ʼಲೋಕದ ಹಲವು ಬಿಕ್ಕಟ್ಟುಗಳಿಂದ ಬಿಡುಗಡೆಯಾಗಲು ಸಾಹಿತ್ಯ ಕೃತಿಗಳು ಮತ್ತು ಮಾಧ್ಯಮಗಳು ಪ್ರಮಾಣುಗಳಾಗಿವೆ. ಬೌದ್ಧಿಕ ಮತ್ತು ವೈಚಾರಿಕ ನಿಲುವುಗಳನ್ನು ಮಂಡಿಸುವ ಮೂಲಕ ಮಾಧ್ಯಮಗಳಿಂದ ಹೊಸ ಜಗತ್ತು ಕಟ್ಟಲು ಸಾಧ್ಯ. ಲೋಕದ ಗ್ರಹಿಕೆಗೆ, ಸಮಾಜವನ್ನು ನೋಡುವ ನೋಟಕ್ರಮ ನೀಡುವ ಸಾಧನ ಮಾಧ್ಯಮಗಳಾಗಿವೆʼ ಎಂದು ನುಡಿದರು.

WhatsApp Image 2025 10 15 at 6.26.45 PM

ʼಚರಿತ್ರೆ ಅರಿಯುವಲ್ಲಿ, ವರ್ತಮಾನ ಗ್ರಹಿಸುವಲ್ಲಿ, ಭವಿಷ್ಯತ್ತನ್ನು ರೂಪಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತದೆ. ಮಾಧ್ಯಮ ಸತ್ಯ ಶೋಧನೆಗೆ ದಾರಿಯಾಗಬೇಕು. ಕೃಷಿಕರು, ಶ್ರಮಿಕರು ಎದುರಿಸುವ ಬಿಕ್ಕಟ್ಟಗಳು ಅಧಿಕಾರದಲ್ಲಿ ಇದ್ದವರಿಗೆ ತೋರಿಸಿ, ಪರಿಹಾರ ಕಂಡುಕೊಳ್ಳುವ ದಾರಿಯಾಗಿ ಮಾಧ್ಯಮ ಕಾರ್ಯನಿರ್ವಹಿಸುತ್ತಿವೆʼ ಎಂದರು.

ಇದನ್ನೂ ಓದಿ : ಬೀದರ್‌ | ಅ.30ರೊಳಗೆ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ : ಸಚಿವ ಈಶ್ವರ ಖಂಡ್ರೆ

ಪ್ರಾಧ್ಯಾಪಕರಾದ ಶರಣಬಸಪ್ಪ ಜನ್ನಾ, ಸುಭಾಷ ಮಚಕುರಿ, ಡಾ. ಪೀರಪ್ಪ ಸಜ್ಜನ್, ಬಸವರಾಜ ಬಿರಾದಾರ, ಚಿನ್ನಮ್ಮ, ಮಹೇಶ ಮಂಠಾಳೆ, ಫರೀದ್, ಅನಿಲ ಚಾಂದೆ, ಅಂಜಲಿ ಗಜರೆ, ಭಾಗ್ಯಶ್ರೀ, ನರೇಂದ್ರ, ಸುಸ್ಮೀತಾ ಸೇರಿದಂತೆ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು. ಐಕ್ಯುಎಸಿ ಸಂಯೋಜಕ ಡಾ.ಚಂದ್ರಕಾಂತ ಗಾಯಕವಾಡ ಸ್ವಾಗತಿಸಿದರು. ಪ್ರೊ.ಮೀನಾಕ್ಷಿ ಬಿರಾದಾರ ನಿರೂಪಿಸಿದರು. ಡಾ.ಶ್ರೀಕಾಂತ ಚೌಹಾಣ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಬೀದರ್ ತಾಲೂಕು ಅಧ್ಯಕ್ಷರಾಗಿ ವೀರೇಂದ್ರಕುಮಾರ್

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ (6ರಿಂದ 8ನೇ ತರಗತಿ) ಶಿಕ್ಷಕರ ಸಂಘದ...

ಶಿವಮೊಗ್ಗ | ಗನ್, ಡ್ರ್ಯಾಗರ್ ಹಿಡಿದು ರೀಲ್ಸ್‌! ಯುವಕನ ವಿರುದ್ಧ ಸುವೋ ಮೊಟೋ ಕೇಸ್‌

ಯುವಕನೊಬ್ಬ ಗನ್ ಮತ್ತು ಡ್ರ್ಯಾಗರ್ ಹಿಡಿದುಕೊಂಡು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿ...

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...