ಬೀದರ್‌ | ಕನಕದಾಸರ ಕೀರ್ತನೆಗಳಲ್ಲಿ ಸಮಾಜ ಸುಧಾರಣೆ ತತ್ವ : ಸಚಿವ ಈಶ್ವರ ಖಂಡ್ರೆ

Date:

ಕನಕದಾಸರು ತಮ್ಮ ಕೀರ್ತನೆಗಳ ಮುಖಾಂತರ ಸಮಾಜದಲ್ಲಿ ಸುಧಾರಣೆ ತಂದಿದ್ದಾರೆ ಎಂದು ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತಿಳಿಸಿದರು.

- Advertisement -

ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ‌ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಕ್ತ ಶ್ರೇಷ್ಠ ಕನಕದಾಸರ 538ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಕನಕದಾಸರು ಸಮಾಜದ ಅಂಕುಡೊಂಕು, ಅಸಮಾನತೆ ಜಾತಿ ವ್ಯವಸ್ಥೆಯನ್ನು ತಮ್ಮ ಕೀರ್ತನೆಗಳ ಮುಖಾಂತರ ಹೋಗಲಾಡಿಸಿದರು. ʼಕುಲ-ಕುಲ ಎಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆನೇನಾದರು ಬಲ್ಲಿರಾʼ ಎಂದು ಹೇಳುತ್ತಾ ಜಾತಿ ವ್ಯವಸ್ಥೆಯನ್ನು ಕಟುವಾಗಿ ಖಂಡಿಸಿದ್ದಾರೆ. ಹಳ್ಳಿ ಹಳ್ಳಿಗೆ ಸಂಚಾರ ಮಾಡುವುದರ ಮೂಲಕ ಜನರಿಗೆ ಸತ್ಯ ಅಸತ್ಯತೆ ಬಗ್ಗೆ ಅರಿವು ಮೂಡಿಸಿದ್ದಾರೆ. ಮಹಾತ್ಮರು ಯಾವುದೇ ಒಂದು ಜಾತಿಗೆ ಸಂಬಂಧಸಿದವರಲ್ಲ, ಅವರು ಇಡೀ ಸಮಾಜದ ಏಳಿಗೆಗೆ ದುಡಿವುದರ ಮೂಲಕ ಸಮಾಜದಲ್ಲಿ ಸುಧಾರಣೆ ತಂದು ಶಾಂತಿ ಸಮಾನತೆ, ಭಾತೃತ್ವ ಸಾರಿದ್ದಾರೆʼ ಎಂದರು.

WhatsApp Image 2025 11 08 at 6.45.11 PM
ಸಾಹಿತಿ, ಉಪನ್ಯಾಸಕ ಡಾ.ಸಂಗಪ್ಪಾ ತೌಡಿ ವಿಶೇಷ ಉಪನ್ಯಾಸ ಮಂಡಿಸಿದರು.

ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರು ಮಾತನಾಡಿ, ʼಕನಕದಾಸರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಒಗ್ಗೂಡಿ ಜಾತಿ, ಕುಲ, ಮತ ಎನ್ನದೆ ಬಾಳಬೇಕುʼ ಎಂದರು.

ಬೀದರ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಮಾತನಾಡಿ, ʼಜಾತಿ, ಕುಲಕ್ಕಿಂತ ಮಾನವ ಧರ್ಮ ದೊಡ್ಡದು ಎಂದು ವಿಶ್ವಕ್ಕೆ ಸಂದೇಶ ಸಾರಿದ ಕನಕದಾಸರು ನಮ್ಮೆಲ್ಲರಿಗೆ ಮಾದರಿಯಾಗಿದ್ದಾರೆʼ ಎಂದರು.

ಮಾಜಿ ಸಚಿವ ಬಂಡೇಪ್ಪ ಖಾಶಂಪೂರ ಅವರು ಮಾತನಾಡಿ, ʼಕನಕದಾಸರು ಶ್ರೀಕೃಷ್ಣರ ಭಕ್ತರಾಗಿದ್ದರಿಂದ ಉಡುಪಿಗೆ ಹೋಗಿ ಕೃಷ್ಣನ ದರ್ಶನ ಪಡೆಯಲು ಹೋದಾಗ ಅವರಿಗೆ ದೇವಸ್ಥಾನದ ಒಳಗೆ ಬಿಡಲಿಲ್ಲ. ಅವಾಗ ಹೊರಗಡೆಯಿಂದ ಕೀರ್ತನೆ ಹಾಡುಗಳು ಹಾಡುತ್ತಿರುವಾಗ ಶ್ರೀ ಕೃಷ್ಣನೇ ಗೋಡೆ ಒಡೆದು ಮೂರ್ತಿ ತಿರುಗಿಸಿ ದರ್ಶನ ನೀಡಿದರು ಎನ್ನಲಾಗುತ್ತದೆ. ಭಕ್ತಿ ಎನ್ನುವುದು ಅಂತರಾಳದಲ್ಲಿ ಇರಬೇಕೇ ಹೊರತು ತೋರಿಕೆಗಲ್ಲʼ ಎಂದರು.

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಬೀದರನ ಉಪನ್ಯಾಸಕ ಡಾ.ಸಂಗಪ್ಪಾ ತೌಡಿ ವಿಶೇಷ ನೀಡಿ, ʼ ಪ್ರಸ್ತುತ ಸಮಾಜಕ್ಕೆ ಕನಕದಾಸರ ವಿಚಾರಗಳು ಅತ್ಯಂತ ಪರಿಣಾಕಾರಿಯಾಗಿ ಪಾತ್ರ ನಿರ್ವಹಿಸುತ್ತವೆ. ʼನಾನು ಎನ್ನುವ ಅಹಂಕಾರ ಹೋದಲ್ಲಿ ಅಂಥವರಿಗೆ ಮಾತ್ರ ಸ್ವರ್ಗ ಅಥವಾ ಮುಕ್ತಿಯನ್ನು ಪ್ರಾಪ್ತವಾಗುತ್ತದೆʼ ಎನ್ನುವ ಕನಕದಾಸರ ನುಡಿ ವಾಸ್ತವಿಕತೆ ಬಿಂಬಿಸುತ್ತದೆ. ʼಜ್ಞಾನಿಗಳಿಗೆ ಕನಕನ ಬೆಡಗು ತಿಳಿಯಲೇ ಇಲ್ಲ. ಇಂತಹ ಸಂದರ್ಭಗಳಿಂದ ಕನಕನ ತೇಜಸ್ಸು ಇನ್ನುಷ್ಠು ಮಿರುಗ ತೊಡಗಿತ್ತು. ಅಜ್ಞಾನಿಗಳ ಮುಖವು ಕಬ್ಬಿಣದಂತೆ ಜಂಗು ಹಿಡಿದು ಹೋಯಿತು. ಇಂತಹ ಲೋಕದ ಸತ್ಯಗಳನ್ನು ಕನಕದಾಸರು ನಮಗೆ ನೀಡಿದ್ದಾರೆʼ ಎಂದು ಪ್ರತಿಪಾದಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಿ ಪೂಜೆ ಸಲ್ಲಿಸಿ ನಂತರ ಬೊಮಗೊಂಡೇಶ್ವರ ವೃತ್ತ ಬಳಿ ಕನಕದಾಸರ ಭಾವಚಿತ್ರ ಹೊತ್ತ ರಥ ಮೆರವಣಿಗೆಗೆ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಶಾಸಕ ಶೈಲೇಂದ್ರ ಬೆಲ್ದಾಳೆ, ಮಾಜಿ ಸಚಿವ ಬಂಡೇಪ್ಪ ಖಾಶಂಪೂರ, ಜಿಲ್ಲಾ ಗ್ಯಾರಂಟಿ ಅಧ್ಯಕ್ಷ ಅಮೃತರಾವ ಚಿಮಕೋಡೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡಿದರು.

WhatsApp Image 2025 11 08 at 7.16.12 PM 2
ಸಾಹಿತಿ, ಪ್ರಾಧ್ಯಾಪಕ ಡಾ.ಸಂಗಪ್ಪಾ ತೌಡಿ ಅವರು ವಿಶೇಷ ಉಪನ್ಯಾಸ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ, ಔಧತಪೂರ ಮಠದ ಮಚೇಂದ್ರ ಮುತ್ಯಾ, ಬೀದರ ತಹಸಿಲ್ದಾರ್ ರವೀಂದ್ರ ದಾಮಾ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜುಕುಮಾರ ಅತಿವಾಳೆ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಮುಖಂಡರಾದ ಬಾಬುರಾವ ಮಲ್ಕಾಪುರೆ, ಪಂಡಿತರಾವ ಚಿದ್ರಿ, ಪೀರಪ್ಪಾ ಔರಾದೆ, ಸಂಗಪ್ಪ ಮಲ್ಕಾಪುರೆ, ಸಂತೋಷ ಜೋಳದಾಪಕೆ, ಹನುಮಂತ ಮಲ್ಕಾಪುರೆ, ರಾಜಕುಮಾರ ಕಂದಗೂಳೆ ಸೇರಿದಂತೆ ಸಮಾಜದ ಮುಖಂಡರು ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಪೋಟೋ ಶಿರ್ಷಿಕೆ 7
ಹುಮನಾಬಾದ ತಾಲ್ಲೂಕಿನ ರಾಜೇಶ್ವರ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೇರಿಸಿದ್ದಕ್ಕೆ ಗ್ರಾಮ ಪಂಚಾಯತ ಸದಸ್ಯರು, ಗ್ರಾಮಸ್ಥರು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...