ಬೀದರ್‌ | ಮೇ 26 ರಿಂದ ಜೂ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : 47 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ

Date:

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2 ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ʼಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಒಟ್ಟು 13,632 ವಿದ್ಯಾರ್ಥಿಗಳು ಪರೀಕ್ಷೆ-2 ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದು, ಒಟ್ಟು 566 ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಹಾಗೂ ಜಿಲ್ಲಾ ಹಂತದ ವೆಬ್ ಕೌನ್ಸೆಲಿಂಗ್ ವೀಕ್ಷಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆʼ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷ ಮಾತನಾಡಿ, ʼಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಮೊಬೈಲ್‌ ನಿಷೇಧಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಹಾಗೂ ಪರೀಕ್ಷಾ ಕೇಂದ್ರಗಳ ಹತ್ತಿರದಲ್ಲಿರುವ ಜೆರಾಕ್ಸ್ ಮತ್ತು ಸೈಬರ್ ಕೇಂದ್ರಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಿಸಲು ಆದೇಶ ಹೊರಡಿಸಲಾಗಿದೆʼ ಎಂದರು.

ಒಟ್ಟು 47 ಪರೀಕ್ಷಾ ಕೇಂದ್ರ : ಜಿಲ್ಲೆಯಲ್ಲಿ ಔರಾದ (5), ಬಸವಕಲ್ಯಾಣ (9), ಭಾಲ್ಕಿ (8), ಬೀದರ (15), ಹುಮನಾಬಾದ (10) ಸೇರಿದಂತೆ ಒಟ್ಟು (47) ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ನೋಡಲ್ ಅಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು ಹಾಗೂ ಎಲ್ಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಪಿಯುಸಿ ಪರೀಕ್ಷೆ-3 : ಮೇ.26ರೊಳಗಾಗಿ ಹೆಸರು ನೊಂದಾಯಿಸಿ

2025ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಅವಕಾಶ ಕಲ್ಪಿಸಿದ್ದರಿಂದ ಪರೀಕ್ಷೆ ಬರೆದ 5,727 ವಿದ್ಯಾರ್ಥಿಗಳ ಪೈಕಿ 2,066 ವಿದ್ಯಾರ್ಥಿಗಳು ಉತ್ತೀರ್ಣರಾಗಿ 2025ರ ದ್ವಿತೀಯ ಪಿಯುಸಿ ಒಟ್ಟಾರೆ ಫಲಿತಾಂಶ ಉತ್ತಮಗೊಂಡಿದೆ.

ಇದನ್ನೂ ಓದಿ : ಬೀದರ್ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ₹50 ಲಕ್ಷ ಅನುದಾನಕ್ಕೆ ವಿಜಯ ಸಿಂಗ್ ಮನವಿ

ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಸಂಬಂಧ ಪರೀಕ್ಷಾ ಪದ್ಧತಿಯಲ್ಲಿ ಸುಧಾರಣೆ ತಂದು 2025ರ ದ್ವಿತೀಯ ಪಿಯುಸಿ-3ನೇ ಪರೀಕ್ಷೆಯನ್ನು ಜೂನ್‌ 9ರಿಂದ ಜೂ.20ರವರೆಗೆ ನಡೆಸಲಾಗುತ್ತಿದೆ.

ವಿದ್ಯಾರ್ಥಿಗಳು ಮೇ 26ರೊಳಗಾಗಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಬೀದರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಒಗ್ಗೂಡಿದ ಪ್ರಗತಿಪರ ಧ್ವನಿಗಳು

ಸಂವಿಧಾನ, ಪ್ರಜಾಪ್ರಭುತ್ವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ರಕ್ಷಣೆಗಾಗಿ ಧಾರವಾಡದಲ್ಲಿ...

ಮರಗಳೇ ಇಲ್ಲದ ಜಾಗಕ್ಕೆ ಅರಣ್ಯ ಇಲಾಖೆಯ ಆಕ್ಷೇಪ; ಸಾರ್ವಜನಿಕರ ಆಕ್ರೋಶ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಕೇನೆಕುಂಜದ ಸರಕಾರಿ ಜಮೀನಿನಲ್ಲಿ...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ...

161 ಕಾಮಗಾರಿಗಳಿಗೆ ಶಂಕುಸ್ಥಾಪನೆ-ಉದ್ಘಾಟನೆ; ಜನಕಲ್ಯಾಣವೇ ಸರ್ಕಾರದ ಸಂಕಲ್ಪ: ಸಿದ್ದರಾಮಯ್ಯ

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡಲಾಗಿದ್ದು, ದಾಸನೂರು...