ಬೀದರ್‌ | ರಾಜ್ಯ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯ ಮಾಡಿದೆ : ಶಾಸಕ ಪ್ರಭು ಚವ್ಹಾಣ

Date:

ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಅನ್ಯಾಯ ಮಾಡಿದೆ. ಇದು ಸರಿಪಡಿಸುವವರೆಗೂ ಹೋರಾಟ ನಿಲ್ಲುವುದಿಲ್ಲ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು.

- Advertisement -

ಔರಾದ(ಬಿ) ಪಟ್ಟಣದ ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ನಡೆದ ಬಂಜಾರಾ ಸಮಾವೇಶ ಹಾಗೂ ಒಳ ಮೀಸಲಾತಿ ಕುರಿತ ಚಿಂತನ- ಮಂಥನ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ʼಕಾಂಗ್ರೆಸ್ ಸರ್ಕಾರ ತೀವ್ರ ಹಿಂದುಳಿದಿರುವ ಬಂಜಾರಾ, ಭೋವಿ, ಕೊರಮ, ಕೊರಚ ಸಮಾಜಗಳನ್ನು ಕಡೆಗಣಿಸುತ್ತಾ ಬಂದಿದೆ. ಹಿಂದೊಮ್ಮೆ ಈ ಸಮಾಜಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಹೊರ ಹಾಕುವ ಪ್ರಯತ್ನ ಮಾಡಿತ್ತು. ಆದರೆ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಅದು ಸಾಧ್ಯವಾಗಲಿಲ್ಲʼ ಎಂದರು.

ʼಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಈ ನಾಲ್ಕೂ ಸಮುದಾಯಗಳಿಗೆ ಶೇ 4.5ರಷ್ಟು ಮೀಸಲಾತಿ ಕೊಟ್ಟಿತ್ತು. ಈಗಿನ ಕಾಂಗ್ರೆಸ್‌ ಸರ್ಕಾರ ಈ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ನಿರೀಕ್ಷೆಯಿತ್ತು. ಆದರೆ ನಾಲ್ಕು ಸಮುದಾಯಗಳೊಂದಿಗೆ ಇನ್ನೂ 59 ಸಮುದಾಯಗಳನ್ನು ಸೇರಿಸಿ ಬರೀ ಶೇ 5ರಷ್ಟು ಮೀಸಲಾತಿ ಕೊಟ್ಟು ಘೋರ ಅನ್ಯಾಯ ಮಾಡಿದೆʼ ಎಂದು ಆಕ್ರೋಶ ಹೊರಹಾಕಿದರು.

ʼನ್ಯಾಯಮೂರ್ತಿ ನಾಗಮೋಹನದಾಸ್ ವರದಿಯ ಬಗ್ಗೆ ಆರಂಭದಿಂದಲೂ ಅಪಸ್ವರಗಳು ಕೇಳಿಸಿದ್ದವು. ಅವೈಜ್ಞಾನಿಕ ಮತ್ತು ದೋಷಪೂರಿತ ವರದಿಯನ್ನು ಯಾವುದೇ ಕಾರಣಕ್ಕೂ ಅಂಗೀಕರಿಸಬಾರದೆಂದು ಎಷ್ಟೇ ಹೋರಾಟ ಮಾಡಿದ್ದರೂ ಜನತೆಯ ಕೂಗನ್ನು ಕಿವಿಗೆ ಹಾಕಿಕೊಳ್ಳದೆ ಮನಸ್ಸಿಗೆ ತೋಚಿದಂತೆ ಒಳ ಮೀಸಲಾತಿಯನ್ನು ವರ್ಗೀಕರಣ ಮಾಡಿದ್ದಾರೆ. ಈ ಬಗ್ಗೆ ಸಮಾಜ ಬಾಂಧವರು ಜಾಗೃತರಾಗಬೇಕುʼ ಎಂದು ಹೇಳಿದರು.

ʼರಾಜ್ಯದಲ್ಲಿ ಬಂಜಾರ ಸಮುದಾಯವು ಇನ್ನೂ ಸಾಕಷ್ಟು ಹಿಂದುಳಿದಿದೆ. ವಲಸೆ, ಅನಕ್ಷರತೆ, ಬಡತನದಂತಹ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ನಾನು ಸಮಾಜದ ಅಭಿವೃದ್ಧಿಗೆ ನಿರಂತರ ಶ್ರಮಿಸುತ್ತಿದ್ದೇನೆ‌. ಸಮಾಜ ಬಾಂಧವರು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೇ ಗೌರವಯುತವಾಗಿ ಬದುಕಬೇಕು. ಯಾವುದೇ ದೂರು ದುಮ್ಮಾನಗಳಿಗೆ ಆಸ್ಪದ ಕೊಡಬಾರದುʼ ಎಂದು ತಿಳಿಸಿದರು.

ʼಬಂಜಾರಾ ಸಮಾಜದ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಐಎಎಸ್, ಐಪಿಎಸ್, ಎಂಜಿನಿಯರ್, ವೈದ್ಯಕೀಯ ವೃತ್ತಿಯಂತಹ ಉನ್ನತ ಹುದ್ದೆಗಳನ್ನು ಪಡೆಯಬೇಕೆಂಬ ಕನಸಿದೆ. ಬಡವರು, ಅನಾಥ ಮಕ್ಕಳು ಪ್ರತಿಭಾವಂತರಿದ್ದರೂ ಓದಲು ಸಾಧ್ಯವಾಗದತಂಹ ಮಕ್ಕಳಿದ್ದರೆ ನನ್ನ ಗಮನಕ್ಕೆ ತನ್ನಿ ಅಂಥವರ ಸಹಕಾರಕ್ಕೆ ನಾನು ಸದಾ ಸಿದ್ಧನಿದ್ದೇನೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್ | ಯಾವ ಹುದ್ದೆಗೂ ಸಲ್ಲಿಕೆಯಾಗದ ನಾಮಪತ್ರ : ಪತ್ರಕರ್ತರ ಸಂಘಕ್ಕೆ ಪುನಃ ಚುನಾವಣೆ

ಸಮಾಜದ ಮುಖಂಡರಾದ ಮಾರುತಿ ಚವ್ಹಾಣ, ಪ್ರತೀಕ ಚವ್ಹಾಣ, ಪ್ರದೀಪ ಪವಾರ, ಸಚಿನ ರಾಠೋಡ, ಸುಜಿತ ರಾಠೋಡ, ಧನಾಜಿ ರಾಠೋಡ, ಸೂರ್ಯಕಾಂತ ಪವಾರ, ಪ್ರಹ್ಲಾದ ರಾಠೋಡ, ಸೋನಾಜಿ ರಾಠೋಡ, ಬಾಬು ರಾಠೋಡ ಕೋರೆಕಲ್, ವಸಂತ ರಾಠೋಡ ಮೆಡಪಳ್ಳಿ, ರಮೇಶ ಜಾಧವ ಮಾಳೆಗಾಂವ, ಕಾಳಿದಾಸ ಆಡೆ, ಸೋನು ರಾಠೋಡ, ಬಸವರಾಜ ನಾಯಕ್, ಬಾಬು ರಾಠೋಡ, ಶಿವಾಜಿ ರಾಠೋಡ, ಸಂಜೀವ ಚವ್ಹಾಣ, ಸಂಜೀವ ರಾಠೋಡ, ಬಬನ್ ಚವ್ಹಾಣ, ರಾಮದೇವ ಕಾರಬಾರಿ, ಲಕ್ಷ್ಮಣ ಜಾಧವ, ಜಿಲ್ಲಾ ಪಂಚಾಯತ, ತಾಲ್ಲೂಕು ಪಂಚಾಯತ, ಗ್ರಾಮ ಪಂಚಾಯತ್ ಗಳ ಹಾಲಿ ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು, ಬಂಜಾರಾ ಕ್ರಾಂತಿದಳದ ಅಧ್ಯಕ್ಷರು, ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಚಕ್ರ ಎಸೆತ : ಅಂಬೇಡ್ಕರ್‌ ವಸತಿ ಶಾಲೆ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

2026–27ನೇ ಸಾಲಿನ ಕ್ರೀಡಾಕೂಟದಲ್ಲಿ ಕಮಲನಗರ ತಾಲ್ಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ವಸತಿ...

ಔರಾದ ಪಟ್ಟಣದಲ್ಲಿ ಕುಡಿಯುವ ನೀರಿನ ಅಭಾವ: ತೇಗಂಪೂರ ಕೆರೆ ನೀರು ಪೂರೈಕೆಗೆ ಆಗ್ರಹ

ಔರಾದ ಪಟ್ಟಣದಲ್ಲಿ ಕಳೆದ ಎಂಟು ದಿನಗಳಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...