ಬೀದರ್‌ | ವಿನಯ ಮಾಳಗೆಗೆ ರಾಜ್ಯ ಯುವ ಪ್ರಶಸ್ತಿ ಪ್ರದಾನ

Date:

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯರೂ ಆದ ಬೀದರ್‌ನ ಟೀಂ ಯುವಾ ಸಹ ಸಂಸ್ಥಾಪಕ ವಿನಯ ಮಾಳಗೆ ಅವರಿಗೆ ರಾಜ್ಯ ಯುವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

- Advertisement -

ಬೆಂಗಳೂರಿನ ಸರ್ ಪುಟ್ಟಣ್ಣಶೆಟ್ಟಿ ಪುರಭವನದಲ್ಲಿ ಕರ್ನಾಟಕ ಯುವ ಸಂಘ-ಸಂಸ್ಥೆಗಳ ಒಕ್ಕೂಟ ಬೆಂಗಳೂರು, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅಖಿಲ ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಜರುಗಿದ ಯುವ ಸಮ್ಮೇಳನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯ ಮಟ್ಟದ ಯುವ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲೆ, ಕ್ರೀಡೆ, ಸಮಾಜ ಸೇವೆ, ಪರಿಸರ ಸಂರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ರಾಷ್ಟ್ರ ಹಾಗೂ ರಾಜ್ಯದ 30 ಮಂದಿ ಯುವ ಸಾಧಕರಿಗೆ ಪ್ರಸಕ್ತ ವರ್ಷದ ರಾಜ್ಯ ಯುವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ್ ಹೊರಟ್ಟಿ, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ, ಕರ್ನಾಟಕ ರಾಜ್ಯ ಜನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಳ್ಳಿ ಶಿವಪ್ರಸಾದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಡಾ.ಸಿ.ಸೋಮಶೇಖರ್, ಕಲಾವಿದ ಜಿ. ಕಪ್ಪಣ್ಣ, ಚೇತನ್ ಆರ್, ಮಾನ್ಯ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರೋಶನಿ ಗೌಡ, ಅಖಿಲ ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘ, ಜಿ.ಕಪ್ಪಣ್ಣ ಸೇರಿದಂತೆ ಒಕ್ಕೂಟದ ಗೌರವಾಧ್ಯಕ್ಷ ವಿಜಯಕುಮಾರ್ ಸೋನಾರೆ, ಪ್ರಕಾಶ್ ಅಂಗಡಿ, ಗೌರವ ಕಾರ್ಯದರ್ಶಿ, ಶಿವ ಕುಮಾರ ಎಚ್.ಎಂ, ಒಕ್ಕೂಟ ಅಧ್ಯಕ್ಷ ಪನೀಂದ್ರ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.

ಇದನ್ನೂ ಓದಿ : ಬೀದರ್‌ | ದೇವರಾಜ ಅರಸು ಸಾಮಾಜಿಕ ನ್ಯಾಯದ ಹರಿಕಾರ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌಧೆ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಂಬೇಡ್ಕರ್) ರಾಜ್ಯಾಧ್ಯಕ್ಷ ಮಹೇಶ್ ಗೋರನಾಳಕರ್, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ವಿನೋದ್ ಕುಮಾರ ಬಂದಗೇ, ಹಿರಿಯ ಸಾಹಿತಿ ಪಾರ್ವತಿ ಸೋನಾರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...