ಬೀದರ್‌ | ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Date:

Advertisements

ಪ್ರಜಾಪ್ರಭುತ್ವ ಆಶಯಗಳನ್ನು ಗಟ್ಟಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.

ನಗರದ ಸರಕಾರಿ ನೌಕರರ ಸಮುದಾಯ ಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼಪ್ರಜಾಪ್ರಭುತ್ವ ವ್ಯವಸ್ಥೆ ಜಗತ್ತಿನಲ್ಲಿಯೇ ಉತ್ತಮವಾದ ಮತ್ತು ಸುವ್ಯವಸ್ಥಿತವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವುದು ಮತ್ತು ಅದರ ಆಶಯಗಳನ್ನು ಪಾಲನೆ ಮಾಡಬೇಕು. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ನಾಗರಿಕರ ಪಾಲ್ಗೊಳ್ಳುವಿಕೆ ಅತ್ಯವಶ್ಯಕವಾಗಿದೆ. ಜನರಿಂದ, ಜನರಿಗಾಗಿ, ಜನರಿಗೊಸ್ಕರ ಇರುವ ವ್ಯವಸ್ಥೆಯಾಗಿದೆ. ನಮ್ಮ ಸಂವಿಧಾನ ನಮಗೆ ಎಲ್ಲಾ ರೀತಿಯ ಹಕ್ಕು, ಸ್ವಾತಂತ್ರ‍್ಯ ನೀಡಿದೆ. ಸಂವಿಧಾನದ ಆಶಯದಂತೆ ನಾವೆಲ್ಲರೂ ಉತ್ತಮ ನಾಗರಿಕರಾಗಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕುʼ ಎಂದರು.

ಬೀದರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ವಿಠಲದಾಸ ಪ್ಯಾಗೆ ಅವರು ಅತಿಥಿ ಉಪನ್ಯಾಸ ನೀಡಿ, ʼಪ್ರಜಾಪ್ರಭುತ್ವದ ಮಹತ್ವ ಮತ್ತು ಸಂದೇಶಗಳನ್ನು ಸಾರುವ ನಿಟ್ಟಿನಲ್ಲಿ ಪ್ರತಿ ವರ್ಷ ಸೆ.15 ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರವು ‘ನಮ್ಮ ಮತ ನಮ್ಮ ಹಕ್ಕು’ ಘೋಷಣೆಯೊಂದಿಗೆ ಪ್ರಜಾಪ್ರಭುತ್ವ ದಿನ ಆಚರಿಸುವ ಮೂಲಕ ಜನರಿಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕಾರ್ಯಗಳು ಮಾಡುತ್ತಿದೆʼ ಎಂದರು.

WhatsApp Image 2025 09 15 at 6.42.51 PM

ʼಪ್ರಜಾಪ್ರಭುತ್ವ ವ್ಯವಸ್ಥೆಯ ಉಳಿವಿಗಾಗಿ ನಾವೆಲ್ಲರೂ ಸಕ್ರಿಯವಾಗಿ ಭಾಗವಹಿಸುವುದು ಬಹಳ ಮುಖ್ಯವಾಗಿದೆ. ಆರ್ಥಿಕ ಅಸಮಾನತೆ ಹೋಗಲಾಡಿಸುವುದು, ಲಿಂಗ ಸಮಾನತೆ ಸಾಧಿಸುವುದು ಮತ್ತು ಇತರೆ ಸವಾಲುಗಳನ್ನು ಎದುರಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯಶಸ್ವಿಗೊಳಿಸಬೇಕುʼ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಚಿತ್ರಕಲೆ, ಭಾಷಣ, ಛಾಯಾಗ್ರಹಣ ಮತ್ತು ಇತರೆ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಗಿರೀಶ್ ಬದೋಲೆ ಅವರು ಪ್ರಜಾಪ್ರಭುತ್ವದ ಆಶಯ ಪ್ರತಿಯನ್ನು ಬೋಧಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕ್ರೀಡಾಂಗಣದಿಂದ ಸರ್ಕಾರಿ ನೌಕರರ ಭವನದವರೆಗೆ ಸೈಕಲ್ ಜಾಥಾ ನಡೆಯಿತು. ಜಾಥಾಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡಿದರು. ಸೈಕಲ್‌ ಜಾಥಾದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ : ಬೀದರ್‌ | ಮಧ್ಯಪ್ರದೇಶದಿಂದ ಗಾಂಜಾ ಖರೀದಿ : 43 ಕೆಜಿ ಗಾಂಜಾದೊಂದಿಗೆ ಸಿಕ್ಕಿಬಿದ್ದ ಮಹಿಳೆ ಪೊಲೀಸರ ವಶಕ್ಕೆ

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಮ್ಯಾ, ಡಿವೈಎಸ್ಪಿ ಶಿವನಗೌಡ ಪಾಟೀಲ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪ್ರಕಾಶ ಸೂರ್ಯವಂಶಿ, ಅಧಿಕ್ಷಕರು ಸುಭಾಷ್ ನಾಗುರೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸುನಿತಾ ಶಿವಾನಂದ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಚಂದ್ರಕಾಂತ ಶಹಾಬಾದಕರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X