ಬೀದರ್‌ | ಮಹಿಳಾ ಶೋಷಣೆ ತಡೆಯಲು ಹೋರಾಟವೇ ಅಸ್ತ್ರ : ಮೀನಾಕ್ಷಿ ಬಾಳಿ

Date:

ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ, ಅನ್ಯಾಯದ ವಿರುದ್ಧ ಗಟ್ಟಿ ಧ್ವನಿ ಎತ್ತುವ ಕೆಲಸ ಜನವಾದಿ ಮಹಿಳಾ ಸಂಘಟನೆ ಮಾಡುತ್ತಿದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಮೀನಾಕ್ಷಿ ಬಾಳಿ ಹೇಳಿದರು.‌

- Advertisement -

ಹುಮನಾಬಾದ್ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ನಡೆದ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ 11ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿ, ʼಕಳೆದ 36 ವರ್ಷಗಳಿಂದ ಜನವಾದಿ ಮಹಿಳಾ ಸಂಘಟನೆ ನೊಂದ ಮಹಿಳೆರ ಧ್ವನಿಯಾಗಿ ಕಾರ್ಯನಿರ್ವಹಿಸಿಸುತ್ತಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼ1981ರಲ್ಲಿ ಸ್ಥಾಪನೆಯಾದ ಈ ಸಂಘಟನೆಯು ದೇಶಾದ್ಯಂತ ಸುಮಾರು 1.20 ಕೋಟಿಗೂ ಅಧಿಕ ಮಹಿಳಾ ಸದಸ್ಯರನ್ನು ಹೊಂದಿದ ಅತಿ ದೊಡ್ಡ ಮಹಿಳಾ ಸಂಘಟನೆಯಾಗಿ ಹೊರಹೊಮ್ಮಿದೆ. ಬೀದರ್ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ಎಲ್ಲ ಬಗೆಯ ಶೋಷಣೆ ನಡೆಯುತ್ತಿರುವುದು ಖಂಡನೀಯವಾಗಿದೆ. ‌ಕೋಮು ಸಾಮರಸ್ಯ, ಜನಾಂಗೀಯ ನಿಂದನೆ, ಧಾರ್ಮಿಕ ಅಸಹನೆ ಹುಟ್ಟು ಹಾಕಲಾಗುತ್ತಿದೆ. ಇದರಿಂದಾಗಿ ಎಲ್ಲ ಧರ್ಮಗಳ ಮಹಿಳೆಯರು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.‌ ಹೀಗಾಗಿ ಜನಾಂಗೀಯ ದ್ವೇಷ ಹರಡದಂತೆ ನೋಡಿಕೊಳ್ಳಬೇಕಾಗಿದೆʼ ಎಂದು ತಿಳಿಸಿದರು.

WhatsApp Image 2025 08 03 at 4.05.31 PM
ಹುಮನಾಬಾದ್‌ ಪಟ್ಟಣದಲ್ಲಿ ಜನವಾದಿ ಮಹಿಳಾ ಸಂಘಟನೆಯ ಸಮ್ಮೇಳನ ಪ್ರಯುಕ್ತ ಮೆರವಣಿಗೆ ನಡೆಯಿತು.

ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಮಾತನಾಡಿ, ʼದುಡಿಯುವ ಜನರೆಲ್ಲರೂ ಒಂದೇ. ಜಗತ್ತಿನ ಮಹಿಳೆಯರೆಲ್ಲರೂ ಒಂದೇ ಆಗಿದ್ದಾರೆ. ಮಹಿಳೆಯರ ಮೇಲಿನ ಅತ್ಯಾಚಾರ, ಹಿಂಸೆ, ದೌರ್ಜನ್ಯ ತಡೆಯಬೇಕಾದರೆ, ನಾವೆಲ್ಲ ಸಂಘಟಿತರಾಗಬೇಕು. ಜನವಾದಿ ಸಂಘಟನೆಯ ಸದಸ್ಯತ್ವ ಸಂಖ್ಯೆಯನ್ನು ಹೆಚ್ಚಿಸಬೇಕು. ಪ್ರತಿ ಗ್ರಾಮ, ಪಟ್ಟಣ, ತಾಲ್ಲೂಕುಗಳಲ್ಲಿ ಜನವಾದಿ ಸಂಘಟನೆ ಕಟ್ಟುವ ಅಗತ್ಯವಿದೆʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ನಿರ್ಮಾಣವಾಗದ ಸ್ವಂತ ಕಟ್ಟಡ : ಯರನಳ್ಳಿ ಗ್ರಾಮ ಪಂಚಾಯಿತಿಗೆ ಆರೋಗ್ಯ ಕೇಂದ್ರವೇ ಆಸರೆ!

ಸಂಘಟನೆಯ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮಿ ಗಡ್ಡೆ, ಹುಮನಾಬಾದ್ ಪುರಸಭೆ ಸಮುದಾಯದ ಸಂಘಟನಾಧಿಕಾರಿ ಮೀನಾಕುಮಾರಿ ಬೋರಾಳಕರ್, ಸಂಘಟನೆಯ ಜಿಲ್ಲಾ ಉಪಾಧ್ಯಕ್ಷೆ ರೇಷ್ಮಾ ಹಂಸರಾಜ, ಸಿಐಟಿಯು ಜಿಲ್ಲಾ ಸಂಚಾಲಕಿ ಶ್ರೀದೇವಿ ಚೂಡೆ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ರೇಖಾ ಹಮೀಲಪೂರಕರ್, ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಜಯಶ್ರೀ ಮೆಂಡೋಳೆ, ಶೀಲಾ ರೆಡ್ಡಿ, ಸುನೀತಾ ಭೋಲಾ, ಮಹೇಶ್ವರಿ‌ ಪೋಚಂಪಳ್ಳಿ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...