ಬೀದರ್‌ | ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯ : ಜಿಲ್ಲಾಡಳಿತಕ್ಕೆ ಖಡಕ್‌ ಸೂಚನೆ ನೀಡಿದ ಸಚಿವ ಈಶ್ವರ ಖಂಡ್ರೆ

Date:

ಬೀದರ್ ತಾಲೂಕಿನ ಬಗದಲ್‌ ಗ್ರಾಮದಲ್ಲಿ ಶಾಲಾ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗೆ ಗಾಯವಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ, ಗಾಯಾಳು ವಿದ್ಯಾರ್ಥಿ ಶೀಘ್ರ ಗುಣಮುಖನಾಗಲಿ ಎಂದು ಹಾರೈಸಿದ್ದು, ಚಿಕಿತ್ಸಾ ವೆಚ್ಛ ಭರಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

- Advertisement -

ʼಶಿಥಿಲಾವಸ್ಥೆಯಲ್ಲಿರುವ ಹಾಗೂ ಅಪಾಯಕಾರಿ ಕೊಠಡಿಯಲ್ಲಿ ಪಾಠ ಪ್ರವಚನ ನಡೆಸದಂತೆ ಈ ಹಿಂದೆಯೇ ಸ್ಪಷ್ಟ ಸೂಚನೆ ನೀಡಿದ್ದರೂ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ತನಿಖೆ ನಡೆಸಿ, ಶಾಲೆಯ ಮುಖ್ಯಸ್ಥರ ವಿರುದ್ಧ ಕ್ರಮದ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ಸಚಿವರು ನಿರ್ದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ʼಶಾಲಾ ಕಟ್ಟಡಗಳ ದುಸ್ಥಿತಿಯ ಕುರಿತಂತೆ ಪರಿಶೀಲನೆ ನಡೆಸುವಂತೆ ಮತ್ತು ದುರಸ್ಥಿತಿಗೆ ತುರ್ತು ಕ್ರಮ ಕೈಗೊಳ್ಳುವಂತೆ ಈ ಹಿಂದೆ ಅನೇಕ ಬಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕಳೆದ ಆಗಸ್ಟ್ 2ರಂದು ನಡೆದ ಕೆಡಿಪಿ ಸಭೆಯಲ್ಲಿ ಕೂಡ ಶಿಥಿಲಾವಸ್ಥೆಯಲ್ಲಿರುವ ಎಲ್ಲ ಶಾಲಾ ಕಟ್ಟಡಗಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಇಲಾಖೆಗೂ ಸೂಚಿಸಲಾಗಿತ್ತು. ಆದರೂ ಈ ಘಟನೆ ನಡೆದಿದೆ ಎಂದು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಅಧಿಕಾರಿಗಳು ವಿದ್ಯಾರ್ಥಿಗಳ ಸುರಕ್ಷತೆಗೆ ಗಮನ ಹರಿಸಬೇಕುʼ ಎಂದು ಸೂಚಿಸಿದ್ದಾರೆ.

ವಿದ್ಯಾರ್ಥಿಗಳು ಮತ್ತು ಬೋಧಕರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿ ಮತ್ತು ಯಾವ ಶಾಲೆಯ ಕೊಠಡಿ ಶಿಥಿಲವಾಗಿದೆ, ಅದನ್ನು ದುರಸ್ತಿ ಮಾಡಬಹುದೇ ಅಥವಾ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಬೇಕೆ ಎಂಬ ಬಗ್ಗೆ 10 ದಿನಗಳ ಒಳಗಾಗಿ ಸ್ಪಷ್ಟ ಮಾಹಿತಿಯೊಂದಿಗೆ ಪ್ರಸ್ತಾವನೆಯನ್ನು ಕಡತದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮನರೇಗಾ ಕಾಮಗಾರಿ ಸ್ಥಳದಲ್ಲಿ ʼರಕ್ಷಾ ಬಂಧನʼ ಆಚರಣೆ

ʼಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಯಾವ ವರ್ಷ ಕಟ್ಟಲಾಗಿದೆ, ಅದಕ್ಕೆ ಮಾಡಿರುವ ವೆಚ್ಚ ಎಷ್ಟು, ಇಷ್ಟು ಬೇಗ ಶಿಥಿಲಾವಸ್ಥೆಗೆ ಹೋಗಲು ಕಾರಣವೇನು ಎಂಬ ಬಗ್ಗೆ ಪರಿಶೀಲನಾ ವರದಿಯನ್ನು ಸಲ್ಲಿಸುವಂತೆʼ ಅವರು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...