ಬೀದರ್‌ | ವಸತಿ ಶಾಲೆ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ಪ್ರಕರಣ; ತನಿಖೆಗೆ ಸೂಚನೆ

Date:

ಬೀದರ್‌ ಜಿಲ್ಲೆ ಭಾಲ್ಕಿ ತಾಲೂಕಿನ ನಿಟ್ಟೂರು(ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮೇಲ್ಛಾವಣಿಯಿಂದ ವಿದ್ಯಾರ್ಥಿನಿ ಜಿಗಿದ ದುರ್ಘಟನೆ ಇತ್ತೀಚೆಗೆ ಸಂಭವಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಭೇಟಿ ವೇಳೆ ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಿದ ಅವರು, “ಮೇಲ್ಛಾವಣಿಗೆ ಹೋಗುವ ಬಾಗಿಲು ಸರಿಯಾಗಿದ್ದು ಚಿಲಕ ಹಾಕಿದ್ದರೆ ಈ ದುರ್ಘಟನೆ ಸಂಭವಿಸುತ್ತಿರಲಿಲ್ಲ. ಅದೃಷ್ಟವಶಾತ ವಿದ್ಯಾರ್ಥಿನಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಈ ಘಟನೆಗೆ ಕಾರಣ ಏನೆಂಬುವುದು ತನಿಖೆ ನಡೆಸಿ ವರದಿ ನೀಡಬೇಕು” ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಮಸ್ಯೆ ಬಿಚ್ಚಿಟ್ಟ ವಿದ್ಯಾರ್ಥಿಗಳು : ಇದೇ ವೇಳೆ ಆಯೋಗದ ಸದಸ್ಯ ಶಶಿಧರ ಕೋಸಂಬೆ ಎದುರು ವಿದ್ಯಾರ್ಥಿಗಳು ವಸತಿ ನಿಲಯದಲ್ಲಿನ ಸಮಸ್ಯೆ ಬಿಚ್ಚಿಟ್ಟು ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರು. ಸೋಲಾರ್ ಹಾಳಾಗಿದ್ದು, ಪ್ರತಿದಿನ ತಣ್ಣೀರಿನಿಂದ ಸ್ನಾನ ಮಾಡುವ ಪರಿಸ್ಥಿತಿ ಇದೆ. ಮೆನು ಪ್ರಕಾರ ಊಟ ನೀಡುತ್ತಿಲ್ಲ. ವಸತಿ ನಿಲಯದಲ್ಲಿ ಪ್ರಾಚಾರ್ಯರು ವಾಸ ಮಾಡುತ್ತಿಲ್ಲ” ಎಂದು ವಿದ್ಯಾರ್ಥಿಗಳು ಸಮಸ್ಯೆಗಳ ಸರಮಾಲೆ ಬಿಚ್ಚಿಟ್ಟರು.

ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಅವರು ಅಡುಗೆ ಕೋಣೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಪರಿಶೀಲಿಸಿ ನಿಯಮ ಪ್ರಕಾರ ಮಕ್ಕಳಿಗೆ ಊಟ ನೀಡದಿರುವುದು, ತರಕಾರಿ ಪಲ್ಯ ಇಲ್ಲದಿರುವುದು, ಊಟಕ್ಕೆ ಬರೀ ತಿಳಿ ಸಾರು ಇರುವುದು ಕಂಡು ಅಲ್ಲಿದ್ದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು. ಪ್ರಾಚಾರ್ಯ ಮತ್ತು ಸಿಬ್ಬಂದಿಗಳ ವಾಸಕ್ಕೆ ನಿಲಯದಲ್ಲಿ ಪ್ರತ್ಯೇಕ ವಸತಿ ಕಟ್ಟಡ ಇದ್ದರೂ ಪ್ರಾಚಾರ್ಯರು ವಾಸ ಮಾಡದಿದ್ದರೆ ಮಕ್ಕಳ ಸಮಸ್ಯೆ ಕೇಳುವವರು ಯಾರು ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಹಾಯಕ‌ ಆಯುಕ್ತರ ವಜಾಕ್ಕೆ ವಕೀಲರ ಆಗ್ರಹ

ವಿದ್ಯಾರ್ಥಿಗಳ ಸಮಸ್ಯೆ ಆಲಿಸಲು ದೂರು ಪೆಟ್ಟಿಗೆ ಇಲ್ಲದಿರುವುದನ್ನು ಗಮನಿಸಿದ ಅವರು, “ಕೂಡಲೇ ವ್ಯವಸ್ಥೆಯಲ್ಲಿ ಸುಧಾರಣೆ ಆಗಬೇಕು. ಕಡ್ಡಾಯವಾಗಿ ಪ್ರಾಚಾರ್ಯರು ವಸತಿ ನಿಲಯದಲ್ಲಿ ವಾಸವಿದ್ದು ಸಮಸ್ಯೆಗಳನ್ನು ಆಲಿಸಬೇಕು. ಮಕ್ಕಳ ಸಮಸ್ಯೆಗೆ ಸ್ಪಂದಿಸಲು ಕಡ್ಡಾಯವಾಗಿ ದೂರು ಪೆಟ್ಟಿಗೆ ಅಳವಡಿಸಬೇಕು. ಇಲ್ಲದಿದ್ದರೆ ಸಂಬಧಿತರ ವಿರುದ್ಧ ಕ್ರಮ್ಕಕೆ ಮೇಲಧಿಕಾರಿಗಳಿಗೆ ಶಿಫಾರಸು ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಅಗತ್ಯ ಇರುವ ಕಡೆಗಳಲ್ಲಿ ಸಿಸಿ ಕ್ಯಾಮರಾ, ರಾತ್ರಿ ಕಾವಲುಗಾರನನ್ನು ನೇಮಿಸಿ ಕೊಳ್ಳುವಂತೆ ಸೂಚನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...