ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬಿಸಿಯೂಟ ಸೇವಿಸಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಬಿಸಿಯೂಟ ಸಹಾಯಕ ನಿರ್ದೇಶಕ ಸಂಜು ಕುಮಾರ್ ಕಾಂಗ್ಗೆ ಹಾಗೂ ಶಾಲೆಯ ಮುಖ್ಯ ಶಿಕ್ಷಕ ಮಹಾದೇವ ಅವರನ್ನು ಅಮಾನತುಗೊಳಿಸಿ ಬೀದರ್ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಿ ಶಿಲ್ಪಾ ಎಂ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?
ನಿಂಬೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂ. 23ರಂದು ಮಧ್ಯಾಹ್ನದ ಬಿಸಿಯೂಟ ಸೇವಿಸಿದ 94 ವಿದ್ಯಾರ್ಥಿಗಳ ಪೈಕಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಲ್ಲಿಸಿದ್ದರು. ವರದಿ ಆಧರಿಸಿ ಸಿಇಒ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ.