ಬೀದರ್ | ಸಾರಿಗೆ ಬಸ್ ನಿಲುಗಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ

Date:

ಬೀದರ್ ತಾಲೂಕಿನ ಇಸ್ಲಾಂಪುರ ಗ್ರಾಮದ ಬಸ್ ನಿಲುಗಡೆಯಲ್ಲಿ, ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲ್ಲಿಸದೇ ಹೋಗುತ್ತಿರುವುದನ್ನು ಖಂಡಿಸಿ ವಿಧ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಬುಧವಾರ ದಿಡೀರನೇ ಪ್ರತಿಭಟನೆ ನಡೆಸಿದ್ದಾರೆ.

- Advertisement -

ಭಾಲ್ಕಿ, ನಿಟ್ಟೂರ(ಬಿ)ದಿಂದ ಹೊರಡುವ ಬಸ್‌ಗಳು ಯರನಳ್ಳಿ, ಇಸ್ಲಾಂಪುರ ಮಾರ್ಗವಾಗಿ ಬೀದರ್‌ಗೆ ತೆರಳುತ್ತವೆ. ಆದರೆ, ಇಸ್ಲಾಂಪುರ ಗ್ರಾಮದಲ್ಲಿ ಬಸ್‌ ನಿಲ್ಲಿಸದೇ ಹೋಗುತ್ತಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗ್ರಾಮದ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಬೀದರ್ ನಗರಕ್ಕೆ ತೆರಳುತ್ತಾರೆ. ಸರಿಯಾದ ಸಮಯಕ್ಕೆ ಸರಕಾರಿ ಬಸ್ ಗಳು ಬಂದರೂ, ಬಸ್ಸಿನ ಚಾಲಕರು ವಿದ್ಯಾರ್ಥಿಗಳನ್ನು ನೋಡಿದ ಕೂಡಲೇ ನಿಲುಗಡೆಯಲ್ಲಿ ಬಸ್ ನಿಲ್ಲಿಸದೇ ಹೋಗುತ್ತಾರೆ. ಇದೇ ರೀತಿಯಾಗಿ ನಿತ್ಯಲೂ ಎಲ್ಲಾ ಬಸ್‌ ಚಾಲಕರು ಮಾಡುತ್ತಿದ್ದು, ಇದರಿಂದಾಗಿ ಎಲ್ಲಾ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತುಂಬಾ ತೊಂದರೆಯಾಗುತ್ತಿದೆ’ ಎಂದು ಗ್ರಾಮದ ಮುಖಂಡ ವೈಜಿನಾಥ ಜೀರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿ ಇಸ್ಲಾಂಪುರ ಗ್ರಾಮ ಬಸ್ ನಿಲುಗಡೆಯಲ್ಲಿ ಬಸ್‌ ನಿಲ್ಲಿಸಲು ಸೂಚಿಸಬೇಕು. ಈ ಮಾರ್ಗವಾಗಿ ಹೊಸ ಬಸ್ ಓಡಿಸಬೇಕು. ಸಾರಿಗೆ ಬಸ್‌ಗಳು ಇಸ್ಲಾಂಪುರ ಗ್ರಾಮದಲ್ಲಿ ಬರುವಂತೆ ಕ್ರಮ ಕೈಗೊಳ್ಳಬೇಕು
ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಣಿಕ, ಸಿದ್ದು, ಮಂಜುನಾಥ, ಸುಹಾಸಿನಿ, ಭಾಗ್ಯಜ್ಯೋತಿ, ಶಿವಾನಿ, ಸಂಗೀತಾ, ಸುನಿತಾ, ಅಶೋಕ, ಪ್ರಜ್ವಲ್, ದತ್ತು, ಸಾಯಿನಾಥ್ ಸೇರಿದಂತೆ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಬೀದರ್‌ ಜಿಲ್ಲೆ ಯಾವತ್ತಿಗೂ ಕಾಂಗ್ರೆಸ್‌ ಭದ್ರಕೋಟೆ : ಈಶ್ವರ ಖಂಡ್ರೆ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್...