ಬೀದರ್‌ | ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಓದಬೇಕು : ಎಸ್.ಪ್ರಭು

Date:

ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು ಪುಸ್ತಕ ಓದಬೇಕು. ಜ್ಞಾನವೇ ಎಲ್ಲದಕ್ಕೂ ಮುಖ್ಯ ಎಂದು ಸಿದ್ಧಾರ್ಥ ಪಿಯು ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಪ್ರಭು ಹೇಳಿದರು.

- Advertisement -

ಬೀದರ್‌ ನಗರದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಶಬನಮ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಅವರ ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಎಸ್.ಎಂ.ಜನವಾಡಕರ್ ಅವರು ಜಿಲ್ಲೆಯ ಹಿರಿಯ ಸಾಹಿತಿಗಳಲೊಬ್ಬರು. ಜಿಲ್ಲೆಯ ವಿಶೇಷತೆ ಕುರಿತು ಅವರ ಬರಹಗಳಲ್ಲಿ ಹಿಡಿದಿಟ್ಟಿದ್ದಾರೆ. ಬೌದ್ಧ ಸಾಹಿತ್ಯಕ್ಕೆ ಅವರ ಕೊಡುಗೆ ಇದೆ. ಇಂದಿನ ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕುʼ ಎಂದರು.

ಯುವ ಸಾಹಿತಿ ಪವನ ಬಾಲೇರ ಮಾತನಾಡಿ, ʼಎಸ್ ಎಂ ಜನವಾಡಕರ್ ಅವರು ಅನೇಕ ಮೌಲಿಕ ಕೃತಿಗಳನ್ನು ರಚಿಸಿದ್ದಾರೆ. ಕನ್ನಡ ನಾಡು-ನುಡಿ ಭಾಷೆ ಕುರಿತು ಅವರ ಬರಹಗಳಲ್ಲಿ ಕಾಣಬಹುದುʼ ಎಂದರು.

ಹಿರಿಯ ಕಥೆಗಾರರ ಗುರುನಾಥ ಅಕ್ಕಣ್ಣಾ ಮಾತನಾಡಿ, ʼಸಾಹಿತಿಗಳು ಸಮಾಜದ ಕಣ್ಣು, ಕಿವಿಯಾಗಬೇಕು. ರವಿ ಕಾಣದು ಕವಿ ಕಂಡನು ಎಂಬಂತೆ ಸಮಾಜದ ಅಂಕುಡೊಂಕುಗಳನ್ನು ಬರಹಗಾರ ತಿದ್ದುವ ಕೆಲಸ ಮಾಡಬೇಕು. ಸಮಾಜ ಪರಿವರ್ತನೆಯಲ್ಲಿ ಸಾಹಿತಿಗಳ ಪಾತ್ರ ಮುಖ್ಯವಾಗಿದೆʼ ಎಂದರು.

ಚುಟುಕು ಸಾಹಿತಿ ಪುಷ್ಪ ಕನಕ ಮಾತನಾಡಿ, ʼಬಹುತೇಕ ಬರಹಗಾರರು ಎಲ್ಲ ಪ್ರಕಾರದ ಸಾಹಿತ್ಯ ರಚನೆ ಅಸಾಧ್ಯ. ಆದರೆ ಜನವಾಡಕರ್ ಅವರು ಬುದ್ಧ ಸಾಹಿತ್ಯ ಸೇರಿದಂತೆ ವಿವಿಧ ಪ್ರಕಾರದಲ್ಲಿ ಸಾಹಿತ್ಯ ರಚಿಸಿದ್ದಾರೆʼ ಎಂದರು.

ಶಬನಮ್‌ ಟ್ರಸ್ಟ್ ಅಧ್ಯಕ್ಷೆ ಡಾ.ಮಕ್ತುಂಬಿ ಎಂ. ಅವರು ಮಾತನಾಡಿ, ʼಎಸ್.ಎಂ.ಜನವಾಡಕರ್ ಅವರು ಅತಿ ಹೆಚ್ಚು ಸಾಹಿತ್ಯ ಬರೆದು ಸಮಾಜಕ್ಕೆ ನೀಡಿದ್ದಾರೆ. ತಮ್ಮ ವೃತಿಯೊಂದಿಗೆ ಪ್ರವೃತಿಯಿಂದ ಸಾಹಿತ್ಯದ ಮೂಲಕ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಸಾಧನೆ ಎಲ್ಲರಿಗೂ ಪ್ರೇರಣೆ ನೀಡಲಿʼ ಎಂದು ಹೇಳಿದರು.

ಇದನ್ನೂ ಓದಿ : ಬೀದರ್‌ | ಪಿಡಿಒ ಹುದ್ದೆಗೆ ಪ್ರೊಬೇಷನರಿ ಐಎಎಸ್‌ ಅಧಿಕಾರಿ ರಮ್ಯಾ ನಿಯೋಜನೆ

ಕಾರ್ಯಕ್ರಮದಲ್ಲಿ ನಾಗಶಟ್ಟಪ್ಪ ಜೋತ್ಯಪ್ಪ , ಗುಂಡಪ್ಪ ಸೇರಿದಂತೆ ಕಾಲೇಜಿನ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಸುಲೋಚನಾ ನಿರೂಪಿಸಿದರು. ಏಕನಾಥ ಸ್ವಾಗತಿಸಿದರು. ಪ್ರೀಯಂಕಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಬೀದರ್‌ ಜಿಲ್ಲಾದ್ಯಂತ ಮತದಾರರ ಹೆಸರು ತೆಗೆಸಲು 6,101 ಫಾರಂ-7 ಅರ್ಜಿ ಸಲ್ಲಿಕೆ!

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಂದುವರಿದಿದ್ದು,...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...