ಈಗ ಸ್ಪರ್ಧಾತ್ಮಕ ಯುಗ ಇದೆ. ಹೀಗಾಗಿ ವಿದ್ಯಾರ್ಥಿಗಳು ಸ್ಪರ್ಧೆಗೆ ಅಣಿಯಾಗಬೇಕು ಎಂದು ಪ್ರಭಾರ ಪ್ರಾಚಾರ್ಯ ಡಾ. ರಾಜಕುಮಾರ ಅಲ್ಲೂರೆ ಹೇಳಿದರು.
ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ ಹಾಗೂ ಸಂಶೋಧನಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದ ಎಂ.ಎ.ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ರ‍್ಯಾಂಕ್ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ʼಕಠಿಣ ಪರಿಶ್ರಮ ವಹಿಸಿದರೆ ಮಾತ್ರ ಉನ್ನತ ಹುದ್ದೆ ಪಡೆಯಲು ಸಾಧ್ಯವಿದೆʼ ಎಂದು ತಿಳಿಸಿದರು.
ಉದ್ಘಾಟನೆ ನೆರವೇರಿಸಿದ ಪ್ರಾಧ್ಯಾಪಕಿ ಡಾ. ಶೀಲಾ ಎನ್.ಎಸ್. ಮಾತನಾಡಿ, ʼವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಅದಕ್ಕೆ ಪೂರಕವಾಗಿ ತಯಾರಿ ನಡೆಸಬೇಕುʼ ಎಂದು ಹೇಳಿದರು.
ಅರ್ಥಶಾಸ್ತ್ರ ಸ್ನಾತಕೋತ್ತರ ಪದವಿ ಪೂರೈಸಿದವರಿಗೆ ವಿಪುಲ ಉದ್ಯೋಗ ಅವಕಾಶಗಳು ಇವೆ ಎಂದು ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಸುಚಿತಾನಂದ ಕೆ.ಮಲ್ಕಾಪುರೆ ತಿಳಿಸಿದರು.
2023-24ನೇ ಸಾಲಿನ ಎಂ.ಎ. ಅರ್ಥಶಾಸ್ತ್ರ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ‍್ಯಾಂಕ್ ಗಳಿಸಿದ ರೇಬಿಕಾ, ಭಾಗ್ಯಶ್ರೀ ಹಾಗೂ ಪೂಜಾ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ : ಬೀದರ್ | ಸಾಲಬಾಧೆ : ಮನೆಯಲ್ಲಿ ನೇಣಿಗೆ ಶರಣಾದ ರೈತ
ಕಾಲೇಜಿನ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಕುಲಕರ್ಣಿ, ಸಹ ಪ್ರಾಧ್ಯಾಪಕ ಡಾ. ಜೈ ಭರತ ಎಂ. ಮಂಗೇಶ್ಕರ್, ಉಪನ್ಯಾಸಕರಾದ ಪ್ರೊ.ಬಸವರಾಜ ಕುರಕೋಟಿ ಉಡಮನಳ್ಳಿ, ಡಾ.ಸುನೀಲಕುಮಾರ ಮೂಲಗೆ, ಡಾ.ಬೊಕ್ಕರ್ಲ ನಾಗೇಂದ್ರಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ನಾಗಾರ್ಜುನ, ಕಾವ್ಯಶ್ರೀ ನಿರೂಪಿಸಿದರು.