ವಿದ್ಯಾರ್ಥಿ ಜೀವನದಲ್ಲಿ ಮನೋಬಲ, ಆತ್ಮಬಲವಿದ್ದರೆ ಮಾತ್ರ ಯಶಸ್ಸು ಸುಲಭವಾಗಿ ಸಾಧಿಸಲು ಸಾಧ್ಯ ಎಂದು ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ಮಲ್ಲಮ್ಮ ಎಂ.ತಾಳಂಪಳ್ಳಿ ಹೇಳಿದರು.
ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2025-26ನೇ ಸಾಲಿಗೆ ಡಿಪ್ಲೋಮಾಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಸ್ವಾಗತ
ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ, ʼಜೀವನುದ್ದಕ್ಕೂ ಪ್ರತಿ ಹಂತದಲ್ಲಿಯೂ ಯಶಸ್ಸಿಗೆ ಪ್ರಯತ್ನಿಸಬೇಕುʼ ಎಂದರು.
ʼಕಾಲೇಜಿನಲ್ಲಿರುವ ಒಳ್ಳೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಉತ್ತಮ ಜ್ಞಾನ ಪಡೆದು ಉನ್ನತ ಹುದ್ದೆ ಪಡೆಯಬೇಕು. ಕುಟುಂಬಸ್ಥರು, ಶಿಕ್ಷಕರು ಇಟ್ಟಿರುವ ವಿಶ್ವಾಸಕ್ಕೆ ಪಾತ್ರರಾಗಲು ಮುನ್ನಡೆಯಬೇಕುʼ ಎಂದು ಸಲಹೆ ನೀಡಿದರು.
ಬಸವಕಲ್ಯಾಣ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯ ಎನ್.ಆರ್.ಕೋಡ್ಲೆ ಮಾತನಾಡಿ, ʼಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ಜೀವನದಲ್ಲಿ ಮುನ್ನುಗ್ಗಬೇಕಾಗಿದೆ. ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡಿ, ಉಚ್ಛ ಶ್ರೇಣಿಯಲ್ಲಿ ಪಾಸಾಗಿ, ಮುಂದಿನ ಭವಿಷ್ಯಕ್ಕಾಗಿ ಗಂಭೀರವಾಗಿ ಚಿಂತಿಸಬೇಕು ಸದಾ ಯಶಸ್ಸಿನ ಹಂಬಲವಿರಬೇಕುʼ ಎಂದು ಕಿವಿಮಾತು ಹೇಳಿದರು.

ಬಿಇಟಿ ಸಂಸ್ಥೆಯ ನಿರ್ದೇಶಕ ಹಾಗೂ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅಶೋಕಕುಮಾರ ವಣಗೇರಿ ಅವರು ಮಾತನಾಡಿ, ʼಜೀವನದಲ್ಲಿ ಉತ್ತಮ ಶಿಕ್ಷಣ ಜತೆಗೆ ಒಳ್ಳೆಯ ಸಂಸ್ಕಾರ ಅಳವಡಿಸಿಕೊಳ್ಳುವುದು ಮುಖ್ಯವಾಗಿದೆ. ದೇಶದ ಸೇವೆಯಲ್ಲಿ ತೊಡಗಿಕೊಂಡು ಸಮಾಜದ ಒಳಿತಿಗಾಗಿ ಶ್ರಮಿಸಬೇಕುʼ ಎಂದು ಹೇಳಿದರು.
ಬಸವಕಲ್ಯಾಣ ಐಟಿಐ ಕಾಲೇಜಿನ ಪ್ರಾಚಾರ್ಯ ಶಿವಕುಮಾರ ಸ್ವಾಮಿ ಹಾಗೂ ಬಸವಕಲ್ಯಾಣ ಇಂಜಿನೀಯರಿಂಗ್ ಕಾಲೇಜಿನ ಕಚೇರಿ ಅಧೀಕ್ಷಕರು ವೃಷೀಕೇತ ಭೂಸಾರೆ ಅವರು ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಿಎಂಗೆ ಮನವಿ
ಬಸವಕಲ್ಯಾಣ ಬಿಇಟಿ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬಸವಕಲ್ಯಾಣ ಇಂಜಿನಿಯರಿಂಗ್ ಕಾಲೇಜಿನ ಉಪಪ್ರಾಚಾರ್ಯ ಡಾ.ಅರುಣಕುಮಾರ ಎಲಾಲ, ಕುಲಸಚಿವ ಪ್ರೇಮಸಾಗರ ಪಾಟೀಲ, ಪಿಆರ್‌ಒ ಶಂಕರ ಆಗರಗಿ ಸೇರಿದಂತೆ ಕಾಲೇಜಿನ ಎಲ್ಲ ವಿಭಾಗ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಯೋಗೆಂದ್ರಸಿಂಗ್ ಸ್ವಾಗತಿಸಿದರು, ವಿದ್ಯಾಸಾಗರ ನಿರೂಪಿಸಿದರು ಹಾಗೂ ನೀಕತ್ ಫಾತಿಮಾ ವಂದಿಸಿದರು.