ಬೀದರ ತಾಲ್ಲೂಕಿನ ಜನವಾಡಾ ಗ್ರಾಮದ ನಾಡ ಕಚೇರಿ ಆವರಣದಲ್ಲಿ ಜುಲೈ1 ರಂದು ಬೆಳಿಗ್ಗೆ 10.30 ಗಂಟೆಗೆ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಬೀದರ್ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜಂಟಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಕ್ರಮಕ್ಕೆ ಸಮಯದ ಮುಂಚಿತವಾಗಿ ಬೆಳಿಗ್ಗೆ 10 ಗಂಟೆಯಿಂದ ತಮ್ಮ ಸಿಬ್ಬಂದಿಯೊಂದಿಗೆ ಹಾಜರಿದ್ದು, ಬಂದಿರುವ ಅಹವಾಲು ಸ್ವೀಕರಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಪ್ರಭುರಾವ ಕಂಬಳಿವಾಲೆ, ಜಯದೇವಿ ತಾಯಿ ಲಿಗಾಡೆ ಪ್ರತಿಷ್ಠಾನ ರಚನೆ ನನೆಗುದಿಗೆ : ಬೇಕಿದೆ ಇಚ್ಚಾಶಕ್ತಿ!