ಬೀದರ್‌ | ಶಿಕ್ಷಕಿ ಭಾರತಿ ಲೋನಿಕರ್‌ಗೆ ಗ್ರಾಮಸ್ಥರಿಂದ ಅದ್ಧೂರಿ ಬೀಳ್ಕೊಡುಗೆ

Date:

ಔರಾದ್‌ ತಾಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಲೋನಿಕರ್‌ ಅವರ ವಯೋನಿವೃತ್ತಿ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು.

- Advertisement -

ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು, ಜೀವನದುದ್ದಕ್ಕೂ ನಿಷ್ಠೆಯಿಂದ ಬೋಧನೆ ಮಾಡಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡಿರುವ ಶಿಕ್ಷಕರು ಮಕ್ಕಳ ಬಾಳಿಗೆ ಬೆಳಕಾಗುತ್ತಾರೆ. ಸೇವಾ ನಿವೃತ್ತಿ ಬದುಕು ಅತ್ಯಂತ ನೆಮ್ಮದಿಯಾಗಲಿʼ ಎಂದು ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....
WhatsApp Image 2025 11 10 at 7.10.34 PM

ಸಂತಪೂರ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕ ಶಿವಲಿಂಗ ಹೇಡೆ ಮಾತನಾಡಿ, ʼಶಿಕ್ಷಕರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ದೇಶದ ನಿರ್ಮಾತೃರು. ಕಲಿಕೆ ಜೊತೆಗೆ ಮಾನವೀಯ ಮೌಲ್ಯಗಳನ್ನು ನೀಡುವ ಕೆಲಸ ಶಿಕ್ಷಕರು ಮಾಡಬೇಕು. ಎರಡು ದಶಕಗಳ ಕಾಲ ಒಂದೇ ಶಾಲೆಯಲ್ಲಿ ಸೇವೆಗೈದ ಭಾರತಿ ಲೋನಿಕರ್‌ ಅವರ ಬದುಕು ಸಾರ್ಥಕವಾಗಿದೆ. ಶಿಕ್ಷಕರು ಮಕ್ಕಳ ಏಳಿಗೆಯಲ್ಲಿ ಬದುಕಿನ ಸಾರ್ಥಕತೆ ಕಂಡುಕೊಳ್ಳಬೇಕಿದೆʼ ಎಂದು ನುಡಿದರು.

ಶಾಲೆಯ ಮುಖ್ಯಶಿಕ್ಷಕಿ ಸವಿತಾ ಪಾಟೀಲ್‌ ಪ್ರಾಸ್ತಾವಿಕ ಮಾತನಾಡಿ, ʼಶಿಕ್ಷಕಿ ಭಾರತಿ ಲೋನಿಕರ್‌ ಅವರು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ಜೊತೆಗೆ ಸಾಹಿತ್ಯ, ಸಂಸ್ಕೃತಿ, ಕ್ರೀಡಾ ಚಟುವಟಿಕೆಯ ಮನೋಭಾವ ಬೆಳೆಸಿ ಮಕ್ಕಳ ಅಚ್ಚುಮೆಚ್ಚಿನ ಗುರುಗಳಾದವರು. ಅವರೊಂದಿಗೆ ಸೇವೆ ಸಲ್ಲಿಸಿದ ನನಗೂ ಸಂತೃಪ್ತಿಇದೆ. ಇಷ್ಟು ವರ್ಷಗಳ ಕಾಲ ನಿಷ್ಠೆಯ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದು ಅವರು ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆʼ ಎಂದರು.

WhatsApp Image 2025 11 10 at 7.11.21 PM
ಸಾಧಕ ಶಿಕ್ಷಕ, ಗಣ್ಯರಿಗೆ ಶಾಲಾ ಮಂಡಳಿಯಿಂದ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಿರುವ ಭಾರತಿ ಲೋನಿಕರ್‌ ದಂಪತಿಗೆ ವಿದ್ಯಾರ್ಥಿಗಳು, ಗ್ರಾಮಸ್ಥರು, ಗ್ರಾಮ ಪಂಚಾಯತ್‌ ಸದಸ್ಯರು ಮತ್ತಿತರರು ವಿಶೇಷವಾಗಿ ಗೌರವಿಸಿ ಬೀಳ್ಕೊಟ್ಟರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಇದನ್ನೂ ಓದಿ : ಬೀದರ್‌ | ವಕೀಲರು ಕನ್ನಡದಲ್ಲಿ ವಾದಿಸಲಿ : ವಿನಾಯಕ ವಾನಖಂಡೇ

ಗ್ರಾಮ ಪಂಚಾಯತ್‌ ಅಧ್ಯಕ್ಷೆ ಸುಶೀಲಾಬಾಯಿ ಮೇತ್ರೆ, ಪಿಡಿಒ ನರಸಿಂಗ್‌ ಮಾನೆ, ಸಿಆರ್‌ಪಿ ಶಿವಾನಂದ ಸ್ವಾಮಿ, ಸರ್ಕಾರಿ ನೌಕರರ ಸಂಘದ ನಾಮ ನಿರ್ದೇಶಿತರಾದ ಗಫರ್‌ ಖಾನ್‌, ಇಮ್ಯಾನುವೆಲ್, ಪತ್ರಕರ್ತ ಬಾಲಾಜಿ ಕುಂಬಾರ, ಶಾಲೆಯ ಶಿಕ್ಷಕರಾದ ಗೋವಿಂದ ಮಾನೆ, ಪ್ರದೀಪ ಕುಮಾರ, ಬಸವರಾಜ್ ಸ್ವಾಮಿ, ಭಾಗ್ಯವತಿ, ಶಾಲಿನಿ ಸೇರಿದಂತೆ ಗ್ರಾಮದ ಗಣ್ಯರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಚಡಚಣದಲ್ಲಿ ಉಪವಾಸ ಸತ್ಯಾಗ್ರಹ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಕರ್ನಾಟಕ ಲೋಕಸೇವಾ...

ಉಡುಪಿ | ಮಲ್ಪೆಯಲ್ಲಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಕೊಲೆ

ಆಂಧ್ರಪ್ರದೇಶ ಮೂಲದ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ...

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...