ಬೀದರ್ | ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ವರ್ಗಾವಣೆ: ‘ಹೋಗಬೇಡಿ ಸರ್’ ಎಂದು ಕಣ್ಣೀರಿಟ್ಟ ವಿದ್ಯಾರ್ಥಿಗಳು

Date:

Advertisements

ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಯಾದ ಕಾರಣ ಮಕ್ಕಳು ಬಿಕ್ಕಿ, ಬಿಕ್ಕಿ ಅತ್ತ ಪ್ರಸಂಗ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

2013ರಿಂದ ಕೌಡಗಾಂವ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಗೋಪಾಲ್ ರೆಡ್ಡಿ ಅವರು ಬೀದರ್ ತಾಲೂಕಿನ ಬಗದಲ್ ಸರ್ಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.

ಶಾಲೆಯಲ್ಲಿ ಆಯೋಜಿಸಿದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೆಚ್ಚಿನ ಶಿಕ್ಷಕ ಬೇರೆಡೆಗೆ ಹೋಗುತ್ತಿರುವುದರಿಂದ ಬೇಸರಗೊಂಡು ವಿದ್ಯಾರ್ಥಿಗಳು ಭಾವುಕರಾಗಿ ಒಲ್ಲದ ಮನಸ್ಸಿನಿಂದ ಕಳಿಸಿಕೊಟ್ಟರು. “ದಯವಿಟ್ಟು, ನಮ್ಮನ್ನು ಬಿಟ್ಟು ಎಲ್ಲಿಗೂ ಹೋಗ್ಬೇಡಿ ಸರ್” ಎಂದು ಮಕ್ಕಳು ಅಳುತ್ತಾ ತಬ್ಬಿಕೊಂಡರು.

Advertisements
ಬೀದರ್3

ಬೀಳ್ಕೊಡುಗೆ ಕಾರ್ಯಕ್ರಮ ಮುಗಿಸಿ ಕೊಠಡಿಯಿಂದ ಹೊರಬರುತ್ತಿದ್ದಂತೆಯೇ ಬಿಗಿದಪ್ಪಿಕೊಂಡು ಕೈಮುಗಿದ ಮಕ್ಕಳು,
“ನೀವು ಹೋಗಬೇಡಿ, ಇಲ್ಲಿಯೇ ಇರಿ” ಎಂದು ಕಣ್ಣೀರು ಹಾಕಿದರು. ಇದನ್ನು ನೋಡಿ ಶಿಕ್ಷಕ ಗೋಪಾಲ ರೆಡ್ಡಿ ಅವರ ಕಣ್ಣಂಚಿನಿಂದಲೂ ನೀರು ಚಿಮ್ಮಿದವು. ಇದಕ್ಕೆ ಸಾಕ್ಷಿಯಾಗಿದ್ದ ಮುಖ್ಯಗುರು, ಸಹ ಶಿಕ್ಷಕರು ಗೋಪಾಲ್ ರೆಡ್ಡಿ ಅವರನ್ನು ಪ್ರೀತಿಯಿಂದ ಬೀಳ್ಕೊಟ್ಟರು. ಇದು ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಯಿತು.

ಮೊಟ್ಟ ಮೊದಲ ಸೇವೆ ಆರಂಭಿಸುವ ಮೂಲಕ 11 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕನಾಗಿ ಸೇವೆ ಸಲ್ಲಿಸಿರುವ ಗೋಪಾಲ್ ರೆಡ್ಡಿ, ಎರಡು ಬಾರಿ ಸಲ ಖೋ ಖೋ ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಹಾಗೂ ಮೂರು ಸಲ ವಿಭಾಗ ಮಟ್ಟಕ್ಕೆ ಮತ್ತು ಸ್ಕೌಟ್ ಮತ್ತು ಗೈಡ್ಸ್ ನಲ್ಲಿ ರಾಜ್ಯ ಮಟ್ಟದ ಪುರಸ್ಕಾರ ಗವರ್ನರ್ ಅವಾರ್ಡ್, ಮೂರು ಬಾರಿ ರಾಜ ಭವನ ಹೋಗಲು ಅವಕಾಶ ಸೇರಿದಂತೆ ಅನೇಕ ಚಟುವಟಿಕೆಗಳಲ್ಲಿ ಸುಮಾರು 35 ವಿದ್ಯಾರ್ಥಿಗಳಿಗೆ ವಿವಿಧ ಪ್ರಶಸ್ತಿಗೆ ಗುರುತಿಸುವ ಕೆಲಸ ಮಾಡಿದ್ದಾರೆ.

ಬೀದರ್ 1 1

“ನನ್ನ 11 ವರ್ಷದ ಅವಧಿಯಲ್ಲಿ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸಿರುವ ಸಂತೋಷ್ ಕುಮಾರ್ ಪೂಜಾರಿ ಜಗದೇವಿ ಬೋಸ್ಲೆ ಹಾಗೂ ಪ್ರಸ್ತುತ ಸೇವೆಯನ್ನು ಸಲ್ಲಿಸುತ್ತಿರುವ ಮುಖ್ಯ ಗುರು ಬಾಲಿಕಾ ಮೇಹಕರ್ ಹಾಗೂ ಗ್ರಾಮದ ಪೋಷಕರ ಬೆಂಬಲ , ‌ಸಹಕಾರದಿಂದ ಉತ್ತಮ ಕೆಲಸ ಮಾಡಲು ಸಾಧ್ಯವಾಯಿತು” ಎಂದು ವರ್ಗಾವಣೆಗೊಂಡ ಶಿಕ್ಷಕ ಗೋಪಾಲ್ ರೆಡ್ಡಿ ಹೇಳಿದರು.

“ಇಲ್ಲಿನ ಜನರ ಮತ್ತು ಮಕ್ಕಳ ಪ್ರೀತಿ, ಸ್ನೇಹ ಇಷ್ಟು ವರ್ಷ ಇಲ್ಲಿ ನೆಲೆ ನಿಲ್ಲುವಂತೆ ಮಾಡಿತು. ಮಕ್ಕಳ ಜತೆಗೆ ಮರೆಯಲಾರದಂಥ ಬಾಂಧವ್ಯ ಬೆಸೆದಿದೆ” ಎಂದು ಶಿಕ್ಷಕ ಗೋಪಾಲ್ ರೆಡ್ಡಿ ಭಾವುಕರಾಗಿ ಹೇಳುತ್ತಾ, ಮಕ್ಕಳಿಗೆ ಬೀಳ್ಕೊಟ್ಟು ತೆರಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X