ಬೀದರ್‌ | ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ಸಾವು

Date:

ದೇವರ ದರ್ಶನ ಮುಗಿಸಿ ವಾಪಸ್‌ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

- Advertisement -

ಕಾರು ಮತ್ತು ಡಿಟಿಡಿಸಿ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಕಾಶಿನಾಥ, ಪ್ರತಾಪ ಎಂಬುವರನ್ನು ಬೀದರ್‌ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮೃತರು ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್‌ ತಾಲೂಕಿನ ಜಗನಾಥಪುರ ಗ್ರಾಮದವರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಲ್ಲಿ ನವೀನ್‌ (25), ರಾಚಪ್ಪ (45) ಹಾಗೂ ನಾಗರಾಜ (40) ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲದಿಂದ ತಿಳಿದು ಬಂದಿದೆ.

ತೆಲಂಗಾಣದಿಂದ ಕಲಬುರಗಿಯ ಜಿಲ್ಲೆಯ ಗಾಣಗಾಪುರ ದತ್ತಾತ್ರೇಯ ದೇವರ ದರ್ಶನಕ್ಕೆ ತೆರಳಿದ್ದರು. ದೇಗುಲದಿಂದ ವಾಪಸ್‌ ಹುಮನಾಬಾದ್‌ ಮಾರ್ಗವಾಗಿ ಊರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಸುಡಾನ್ ನರಮೇಧಕ್ಕೆ ಕೊನೆಯೆಂದು?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ಬೀದರ್‌ | ಪ್ರೇಕ್ಷಕರ ಮನಗೆದ್ದ ʼಸಣ್ಣಗೌಡಸಾನಿ’ ನಾಟಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಹುಮುಖಿ ಪ್ರತಿಭೆಯುಳ್ಳ ಸಾಹಿತಿ, ಲೇಖಕರು, ಕಲಾವಿದರಿದ್ದು, ಅವರಿಗೆ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...