ಬೀದರ್‌ | ವೈಜ್ಞಾನಿಕ ಚಿಂತನೆಯಿಂದ ಮಾತ್ರ ದೇಶದ ಪ್ರಗತಿ ಸಾಧ್ಯ : ಶಾಮಸುಂದರ ಖಾನಾಪೂರೆ

Date:

ಅಪಾರ ಜ್ಞಾನದ ಸಾಮರ್ಥ್ಯವಿದ್ದರೂ ಸಹ ಅವೈಜ್ಞಾನಿಕ ಚಿಂತನೆ, ಮೌಢ್ಯಗಳನ್ನು ನಂಬಿ ಬದುಕು ಕಟ್ಟಿಕೊಳ್ಳುತ್ತಿರುವ ನಾವು ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಅಸಾಧ್ಯ ಎಂದು ಸಂಪನ್ಮೂಲ ಶಿಕ್ಷಕ ಶಾಮಸುಂದರ ಖಾನಾಪೂರೆ ಕಳವಳ ವ್ಯಕ್ತಪಡಿಸಿದರು.

- Advertisement -

ಔರಾದ್ ಪಟ್ಟಣದ ಕನ್ನಡ ಭವನದಲ್ಲಿ ಗುರುವಾರ‌ ಬೀದರ್‌ನ ಬ್ರೇನ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಹಾಗೂ ಎತ್ತ ಸಾಗುತ್ತಿದೆ ಭಾರತ? ಎಂಬ ವಿಷಯ ಕುರಿತಾದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ʼಶಿಕ್ಷಣದ ಮೂಲಕ ಜ್ಞಾನ ಪಡೆದು ಮೂರ್ಖರಂತೆ ಕೆಲ ಮೌಢ್ಯ ನಂಬಿಕೆಗಳ ಬೆನ್ಹತ್ತಿ ಹೋಗುತ್ತಿರುವುದು ದೇಶಕ್ಕೆ ಅತ್ಯಂತ ಅಪಾಯಕಾರಿಯಾಗಲಿದೆ. ಭಾರತ ಎಂಬ ಪದ ದೇಶದಲ್ಲಿ ವಾಸಿಸುವ ಸಮಸ್ತ ಜನರ ಪ್ರತಿನಿಧಿತ್ವದ ಸಂಕೇತವಾಗಿ ನೋಡಬೇಕಿದೆ. ಇದನ್ನು ಒಂದು ನಕ್ಷೆಯಾಗಿ ನೋಡದೇ ಇಲ್ಲಿ ವಾಸಿಸುವ ಜನರ ಬದುಕು-ಬವಣೆಯ ಅರಿಯುವುದಾಗಿದೆ. ಹಲವು ಜಾತಿ, ಧರ್ಮ, ಮತಗಳನ್ನು ಹೊಂದಿರುವ ಭಾರತ ಬಹುತ್ವ ಸಂಸ್ಕೃತಿಯ ಪ್ರತಿಬಿಂಬದಂತಿದೆʼ ಎಂದರು.

ʼಪ್ರತಿಯೊಬ್ಬರೂ ಅನ್ಯ ಧರ್ಮ, ಅನ್ಯ ಜಾತಿಯ ಜನರಿಗೂ ಗೌರವಿಸಿ ನಾವೆಲ್ಲ ಭಾರತೀಯರು ಎಂದರಿತು ಬದುಕು ರೂಪಿಸಿಕೊಳ್ಳಬೇಕಿದೆ. ಪರಸ್ಪರ ಪ್ರೀತಿ ವಿಶ್ವಾಸದಿಂದ ಬದುಕದ ಹೊರತು ಅಭಿವೃದ್ದಿ ಸಾಧ್ಯವಿಲ್ಲ. ಭಾರತದಲ್ಲಿ ಎಲ್ಲರಿಗೂ ಸಂವಿಧಾನದ ಪಾಲನೆ ಮುಖ್ಯ ಎಂಬುದರ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆʼ ಎಂದು ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ ಮೂಲಗೆ ಮಾತನಾಡಿ, ʼದೇಶದಲ್ಲಿ ಜಾತಿಯತೆ ಎಂಬುದು ವಾಸ್ತವ. ದೇಶದ ಎಲ್ಲ ಬೆಳವಣಿಗೆಗಳು ಜಾತಿಯತೆ ಆಧಾರದಲ್ಲಿ ನಿರ್ಧರಗೊಳ್ಳುತ್ತಿವೆ. ಹೀಗಾಗಿ ಜಾತಿವಿನಾಶ ಮಾಡುವುದು ಅತ್ಯಂತ ಮುಖ್ಯವಾಗಿ. ದೇಶದ ಮಾಧ್ಯಮ ಮತ್ತು ರಾಜಕೀಯ ವ್ಯವಸ್ಥೆ ಸರಿಪಡಸದೇ ದೇಶದ ಅಭಿವೃದ್ಧಿ ಕನಸು ಕಾಣುವುದು ವ್ಯರ್ಥʼ ಎಂದರು.

ಕಾರ್ಯಕ್ರಮದಲ್ಲಿ ನ್ಯಾಯವಾದಿ ಶಿವರುದ್ರ ಕಾಂಬಳೆ, ಕಸಾಪ ಅಧ್ಯಕ್ಷ ಬಿ.ಎಂ ಅಮರವಾಡಿ, ನಿವೃತ್ತ ಶಿಕ್ಷಕ ಶಿವಾಜಿರಾವ ಪಾಟೀಲ್, ಶಿಕ್ಷಕ ಸೂರ್ಯಕಾಂತ ಸಿಂಗೆ, ಯುವ ಚಿಂತಕರಾದ ವಿನೋದ ರತ್ನಾಕರ್,‌ ಪರಮೇಶ್ವರ ವಿಳಸಪೂರೆ, ಸುಧಾಕರ ಕೊಳ್ಳುರ್ ಮಾತನಾಡಿದರು.

ಇದನ್ನೂ ಓದಿ : ಬೀದರ್‌ | ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗಿಯಾದ ಶಿಕ್ಷಕರ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಕಾರ್ಯಕ್ರಮದಲ್ಲಿ ನಂದಾದೀಪ ಬೋರಾಳೆ, ಮಲ್ಲಿಕಾರ್ಜುನ ಟಂಕಸಾಲೆ, ನಾಗಸೇನ ತಾರೆ, ಬಾಲಾಜಿ ಕುಂಬಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಲಾಪ್ರತಿಭೋತ್ಸವ: ವಿವಿಧ ಸ್ಪರ್ಧೆಗಳಿಗೆ ಅರ್ಜಿ ಆಹ್ವಾನ

ಮಕ್ಕಳು ಹಾಗೂ ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕನ್ನಡ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...

ಕೋಲಾರ | ಶಾಲೆಯ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ ಅಗತ್ಯ: ಲಕ್ಷ್ಮಣಗೌಡ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ,...