ಬೀದರ್ | ಹಾಡುಹಗಲೇ ಮನೆ ನುಗ್ಗಿ ಚಿನ್ನಾಭರಣ ಕದ್ದರೆಂದು ಸುಳ್ಳು ಕಥೆ ಕಟ್ಟಿದ ಕುಟುಂಬ

Date:

Advertisements

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು ಹಣ ದರೋಡೆಯಾಗಿದೆ ಎಂದು ಆರೋಪಿಸಿದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಸುಳ್ಳು ಎಂದು ಸಾಬೀತಾಗಿದೆ.

‘ಮನೆಯಲ್ಲಿ ನನ್ನ ಪತ್ನಿ ಒಬ್ಬಳೇ ಇದ್ದ ವೇಳೆ ಇಬ್ಬರು ಮುಸುಕುಧಾರಿಗಳು ಹಿಂಬಾಗಿಲಿನಿಂದ ಮನೆಗೆ ನುಗ್ಗಿ ಚಾಕುವಿನಿಂದ ಗಂಭೀರವಾಗಿ ಗಾಯಗೊಳಿಸಿ ಮನೆಯಲ್ಲಿದ್ದ 25 ತೊಲೆ ಚಿನ್ನಾಭರಣ ಹಾಗೂ 1 ಲಕ್ಷ ನಗದು ದರೋಡೆ ಮಾಡಿದ್ದಾರೆ’ ಎಂದು ಆರೋಪಿಸಿ ಕುಟುಂಬದ ಮುಖ್ಯಸ್ಥ ಓಂಕಾರ ಅಪಾರಾವ್ ಗಾದಗೆ ಎಂಬುವವರು ಫೆ.21ರಂದು ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ನಡೆದ ದಿನವೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿತು. ಹಾಡುಹಗಲೇ ನಡೆದ ಈ ಘಟನೆಯಿಂದಾಗಿ ಜಿಲ್ಲೆಯ ಜನರಲ್ಲಿ ಭಾರಿ ಆತಂಕ ಆವರಿಸಿತು.

Advertisements

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸರು 4 ತಂಡ ರಚಿಸಿ ಕೂಲಂಕುಷವಾಗಿ ತನಿಖೆ ನಡೆಸಿದ್ದು, ಮನೆ ದರೋಡೆ ನಡೆದಿದೆ ಎನ್ನಲಾದ ಆರೋಪ ಸುಳ್ಳು ಎಂದು ಸಾಬೀತಾಗಿದೆ.

ʼಮನೆ ದರೋಡೆಯಾಗಿದೆ ಎಂದು ಆರೋಪಿಸಿದ ಎಲ್ಲ ಚಿನ್ನಾಭರಣ ಹಾಗೂ ನಗದು ಅವರ ಮನೆಯಲ್ಲಿ ಪತ್ತೆಯಾಗಿದೆʼ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಬುಧವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ದೂರುದಾರ ಓಂಕಾರ ಗಾದಗೆ ಅವರ ಕುಟುಂಬ ಆರ್ಥಿಕ ಬಿಕ್ಕಟ್ಟು ಹಾಗೂ ಸಾಲದ ಸುಳಿಯಿಂದ ಪಾರಾಗಲು ಪೊಲೀಸರಿಗೆ ಈ ರೀತಿ ಸುಳ್ಳು ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂಬುದು ತನಿಖೆಯಿಂದ ಕಂಡು ಬಂದಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಸಾರ್ವಜನಿಕರ ಆಸ್ತಿ, ಪಾಸ್ತಿ ಹಾಗೂ ಪ್ರಾಣಹಾನಿ ಕಾಪಾಡಲು ಜಿಲ್ಲಾ ಪೊಲೀಸ್ ಕಟಿಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಪೋಷಕರ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ

ಸಂತಪೂರ ಠಾಣೆಯಲ್ಲಿ ದಾಖಲಾಗಿದ್ದ ಈ ಸುಳ್ಳು ದರೋಡೆ ಪ್ರಕರಣವನ್ನು ಚಾಕಚಕ್ಯತೆಯಿಂದ ಖುಲಾಸೆಗೊಳಿಸಿದ ಎಲ್ಲ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರ ಕಾರ್ಯವೈಖರಿಯನ್ನು ಎಸ್ಪಿ ಪ್ರದೀಪ್ ಗುಂಟಿ ಅವರು ಶ್ಲಾಘಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X