ಬೀದರ್‌ | ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ತುರ್ತು ಪರಿಹಾರ ಘೋಷಿಸಲಿ : ಬಿ.ವೈ.ವಿಜಯೇಂದ್ರ

Date:

ಬೀದರ್‌ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಬೀದರ್ ತಾಲ್ಲೂಕಿನ ಬರಿದಾಬಾದ್‌, ಬುಧೇರಾ, ಇಸ್ಲಾಂಪುರ, ಭಾಲ್ಕಿ ತಾಲ್ಲೂಕಿನ ನಿಟ್ಟೂರು(ಬಿ) ಮತ್ತು ಕಮಲನಗರ ತಾಲ್ಲೂಕಿನ ಸಾವಳಿ, ಸಂಗಮ ಗ್ರಾಮದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಬಳಿಕ ಮಾತನಾಡಿ ಬಿ.ವೈ.ವಿಜಯೇಂದ್ರ ಅವರು ಮಾತನಾಡಿ, ʼನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ. ರೈತ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭೀಕರ ನೆರೆ ಹಾವಳಿಯಿಂದ ತತ್ತರ ಗೊಂಡಿರುವ ಸಂಕಷ್ಟಿತ ಜನರ ಹಾಗೂ ರೈತರ ನೆರವಿಗೆ ಧಾವಿಸದೆ ತಾತ್ಸಾರ ಧೋರಣೆ ಅನುಸರಿಸುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 09 29 at 5.24.01 PM
ಬೀದರ್‌ ತಾಲ್ಲೂಕಿನ ಇಸ್ಲಾಂಪುರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ʼಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ರೈತರು ಸಂಪೂರ್ಣ ಬೆಳೆ ಕಳೆದುಕೊಂಡು ಚಿಂತೆಗೀಡಾಗಿದ್ದಾರೆ.ಚಕಾಂಗ್ರೆಸ್ ಸರ್ಕಾರದ ಹೃದಯಹೀನ ನಡವಳಿಕೆಯ ಕಾರ್ಯವೈಖರಿ ದೃಶ್ಯಗಳು ಪ್ರವಾಸದಲ್ಲಿ ಎದ್ದು ಕಂಡಿವೆ. ಸರ್ಕಾರ ರೈತರಿಗೆ ಶಾಶ್ವತ ಪರಿಹಾರ ನೀಡಲು ಮುಂದಾಗಬೇಕು. ಎನ್‌ಡಿಆರ್‌ಎಫ್ ಪರಿಹಾರ ಬಂದೇ ಬರುತ್ತದೆ. ಆದರೆ ರಾಜ್ಯ ಸರ್ಕಾರ ತತ್‌ಕ್ಷಣ ಪರಿಹಾರಕ್ಕೆ ನೀಡಬೇಕುʼ ಎಂದು ಆಗ್ರಹಿಸಿದರು.

ʼನಾವು ರಾಜಕೀಯ ಮಾಡಲು ಬಂದಿಲ್ಲ. ಮುಖ್ಯಮಂತ್ರಿಯವರನ್ನು ನಾನು ಟೀಕಿಸಲ್ಲ. ಸಂಕಷ್ಟದಲ್ಲಿರುವ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಬಂದಿದ್ದೇವೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ‌ ನೇತ್ರತ್ವದ ಬಿಜೆಪಿ ಸರ್ಕಾರವಿದ್ದಾಗ ಎನ್‌ಡಿಆರ್‌ಆಫ್‌ ನಿಯಮಗಳಡಿ ಪರಿಹಾರ ನೀಡಲಾಗಿತ್ತು. ಅಷ್ಟೇ ಪರಿಹಾರ ರಾಜ್ಯ ಸರ್ಕಾರದಿಂದಲೂ ನೀಡಿದ್ದರು. ಮನೆ, ಬೆಳೆ ಹಾನಿಯಾದ ಬಡವರಿಗೆ, ರೈತರಿಗೆ ಪರಿಹಾರ ನೀಡಲಾಗಿತ್ತು. ಈಗಲೂ ರಾಜ್ಯ ಸರ್ಕಾರ ಅದೇ ರೀತಿ ಕೆಲಸ ಮಾಡಬೇಕುʼ ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ಬೆಳಿಗ್ಗೆ ಬೀದರ್‌ ತಾಲ್ಲೂಕಿನ ಖಾಶೆಂಪುರ(ಪಿ) ಗ್ರಾಮದಲ್ಲಿ ಇತ್ತೀಚೆಗೆ ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ರೈತ ಮಹಿಳೆ ಗಂಗಮ್ಮ ಶಂಕರರಾವ್ ಮಚಕೂರೆ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆರ್ಥಿಕ ನೆರವು ನೀಡಿದರು.

WhatsApp Image 2025 09 29 at 5.24.00 PM

ಇದನ್ನೂ ಓದಿ : ಭೀಮಾನದಿ ಪ್ರವಾಹ : ಒಂದೇ ವಾರದಲ್ಲಿ 1.18 ಹೆಕ್ಟೇರ್‌ ಬೆಳೆ ಹಾನಿ, ಹಲವು ಸೇತುವೆ ಮುಳುಗಡೆ

ಶಾಸಕರಾದ ಪ್ರಭು ಚೌಹಾಣ್, ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮುಖಂಡರಾದ ಈಶ್ವರ್ ಸಿಂಗ್ ಠಾಕೂರ್, ಶಶಿಧರ ಹೊಸಳ್ಳಿ, ಬಾಬು ವಾಲಿ ರಘುನಾಥರಾವ್‌ ಮಲ್ಕಾಪುರೆ, ಗುರುನಾಥ ಜ್ಯಾಂತಿಕರ್‌ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಬೀದರ್‌ | ʼಕರೇಜ್‌ʼ ದೇಶದ ಜಲಸಂರಕ್ಷಣೆಗೆ ಮಾದರಿ : ಕೇಂದ್ರದ ಅಧಿಕಾರಿಗಳ ಮೆಚ್ಚುಗೆ

ಬೀದರ್‌ನ ಐತಿಹಾಸಿಕ ʼಕರೇಜ್‌ʼ ಜಲವ್ಯವಸ್ಥೆ ದೇಶದ ಜಲಸಂರಕ್ಷಣೆಗೆ ಮಾದರಿಯಾಗಬಲ್ಲದು ಎಂದು ಕೇಂದ್ರ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...