ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

Date:

ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ. ಅವರ ಜೀವನ ಮತ್ತು ವಚನಗಳ ಅಧ್ಯಯನ ಮಾಡಿದರೆ, ನಮ್ಮ ಬದುಕನ್ನು ಹೇಗೆ ಉನ್ನತೀಕರಿಸಿಕೊಳ್ಳಬೇಕು ಎಂಬುದು ತಿಳಿಯುತ್ತದೆ ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

- Advertisement -

ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 136ನೇ ಜಯಂತ್ಯುತ್ಸವ ನಿಮಿತ್ತ ಭಾನುವಾರ ಆಯೋಜಿಸಿದ್ದ ʼವಚನ ದರ್ಶನʼ ಪ್ರವಚನ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ...

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ ಘನವಾದ ಚರಿತ್ರೆಯ ಸಂಪುಟವಾಗಿ ಕಟ್ಟಿದ ಧೀಮಂತ ಸಿನೆಮಾ ಕಲಾವಿದ ಪ್ಯಾಟ್ರಿಷಿಯೊ ಗುಜ್ಮಾನ್, ಇತ್ತೀಚಿಗೆ ಇಲ್ಲವಾದರು. ಅವರ ಸೃಜನಶೀಲತೆ, ತುಡಿತ ಮತ್ತು...

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ʼಮುಂಜಾನೆಯ ಮಂಜಿನಲ್ಲಿ ಮುಂದಿನ ದಾರಿ ಕಾಣುವುದಿಲ್ಲ, ಸೂರ್ಯನ ಕಿರಣಗಳು ಬಂದಾಗ ಮಂಜು ಸರಿದು ದಾರಿ ಸ್ಪಷ್ಟವಾಗಿ ಕಾಣುತ್ತದೆ. ಬದುಕಿನಲ್ಲಿ ಅನೇಕ ಜಂಜಡ ತೊಂದರೆಗಳು ಅಶಾಂತಿ ನೆಲೆ ಮಾಡಿ ಮುಂದಿನ ದಾರಿ ಕಾಣದಿದ್ದಾಗ,
ಪ್ರವಚನಗಳ ಮೂಲಕ ಜ್ಞಾನ ಸೂರ್ಯನ ಕಿರಣಗಳಿಂದ ಬದುಕಿನ ಮುಂದಿನ ದಾರಿ ಕಾಣುತ್ತದೆ. ಹಾಗಾಗಿ ಇಂತಹ ಪ್ರವಚನಗಳು ನಮ್ಮ ಬದುಕಿಗೆ ಅತ್ಯವಶ್ಯʼ ಎಂದು ತಿಳಿಸಿದರು.

ʼಡಿ.21ರ ವರೆಗೆ ಪ್ರಭುಲಿಂಗ ಸ್ವಾಮೀಜಿ ಅವರು ʼವಚನ ದರ್ಶನʼ ವಿಷಯದ ಮೇಲೆ ಬೆಳಕು ಚೆಲ್ಲಲ್ಲಿದ್ದು ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನದ ಸದುಪಯೋಗ ಪಡೆದು ಕೊಳ್ಳಬೇಕುʼ ಎಂದು ಕೋರಿದರು.

ಪ್ರವಚನಕಾರರಾದ ಪ್ರಭುಲಿಂಗ ದೇವರು ಮಾತನಾಡಿ, ʼಮನೆಯಲ್ಲಿ ಕಸ ಬಿದ್ದಾಗ ಪ್ರತಿದಿನ ಸ್ವಚ್ಛಪಡಿಸಿಕೊಳ್ಳುವಂತೆ, ಮನದ ಮೈಲಿಗೆಯನ್ನು ತೊಳೆಯಲು ಇಂತಹ ಪ್ರವಚನಗಳು ಪರಿಣಾಮಕಾರಿ ಕೆಲಸವನ್ನು ಮಾಡುತ್ತವೆʼ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸಂಗಮೇಶ ಗಾಮಾ ಮಾತನಾಡಿ, ʼಶರಣರ ಮಹಾತ್ಮರ ಬದುಕು ಅವರ ನಡೆ- ನುಡಿಗಳು ನಮ್ಮ ಬದುಕಿನ ಅನೇಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತವೆ. ಆದ್ದರಿಂದ ಜನತೆ ಹೆಚ್ಚು ಇಂತಹ ಪ್ರವಚನಗಳನ್ನು ಆಲಿಸಬೇಕುʼ ಎಂದರು. 

ಇದನ್ನೂ ಓದಿ : ಬೀದರ್ | ವಚನ ಸಾಹಿತ್ಯದಿಂದ ಸಾಂಸ್ಕೃತಿಕ ಶಕ್ತಿ ಹೆಚ್ಚಳ : ದೀಪ್ತಾ ಭಾಸ್ತಿ

ಚನ್ನಬಸವಾಶ್ರಮ ಪರಿಸರದ ಸಂಚಾಲಕ ವಿಶ್ವನಾಥಪ್ಪ ಬಿರಾದರ್ಬ ಸವಗುರುವಿನ ಪೂಜೆ ನೆರವೇರಿಸಿದರು. ತಾಲೂಕು ಜಾಗತಿಕ ಲಿಂಗಾಯತ ಮಹಾಸಭಾದ ಅಧ್ಯಕ್ಷ ಬಸವರಾಜ ಮರೆ ಅವರು ಧರ್ಮ ಗ್ರಂಥ ಪಠಣ ಮಾಡಿದರು. ಪ್ರವಚನ ಸೇವಾ ಸಮಿತಿಯ ಅಧ್ಯಕ್ಷ ಶಿವಕುಮಾರ ಕಮಠಾಣೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ರಾಯಚೂರು | ಮಳೆಗಾಲ ಮುಗಿಯುವ ಮುನ್ನವೇ ಬಿಸಿಲಿನ ತಾಪ; ರಾಯಚೂರಿನಲ್ಲಿ 37.6 ಡಿಗ್ರಿ ಉಷ್ಣಾಂಶ

ಸೆಪ್ಟೆಂಬರ್‌ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್‌ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ...

ಬೀದರ್‌ | ಡಾ.ಚನ್ನಬಸವ ಪಟ್ಟದ್ದೇವರ ವೃಕ್ಷೋಧ್ಯಾನವನ ಉದ್ಘಾಟನೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಇಂಚೂರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ಚನ್ನಬಸವ...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...