ಬೀದರ್‌ | ಕೌಶಲಕ್ಕೆ ಬಹು ಬೇಡಿಕೆ ಇದೆ : ವೆಂಕಟ ವವಿಲಾಲಾ

Date:

Advertisements

ಪದವಿ ಜತೆಗೆ ಕೌಶಲ ಇದ್ದರೆ ಭವಿಷ್ಯ ಉಜ್ವಲವಾಗಲಿದೆ ಎಂದು ಹೈದರಾಬಾದ್‍ನ ಪ್ರೇರಕ ಭಾಷಣಕಾರ ವೆಂಕಟ ವವಿಲಾಲಾ ಹೇಳಿದರು.

ಬೀದರ್ ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿಕರ್ನಾಟಕ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಹಾಗೂ ಹೈದರಾಬಾದ್‍ನ ಧ್ರುವ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ ವೃತ್ತಿ ಮಾರ್ಗದರ್ಶನ ಹಾಗೂ ಸಮಾಲೋಚನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ʼಕೌಶಲಕ್ಕೆ ಈಗ ಎಲ್ಲೆಡೆ ಬಹು ಬೇಡಿಕೆ ಇದೆ. ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿಗಷ್ಟೇ ಸೀಮಿತರಾಗಬಾರದು. ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ನೆರವಾಗುವ ಎಂಬಿಎ, ಎಂಎಸ್ಸಿ ಹಾಗೂ ಎಂಕಾಂ ಸೇರಿದಂತೆ ವಿವಿಧ ಕೋರ್ಸ್‍ಗಳ ಅಧ್ಯಯನಕ್ಕೆ ಆಸಕ್ತಿ ತೋರಬೇಕು. ಯುಪಿಎಸ್‍ಸಿ, ಕೆಪಿಎಸ್‍ಸಿ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ತಯಾರಿ ನಡೆಸಬೇಕು. ಹೆಚ್ಚು ಅಭಿರುಚಿ ಇರುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಲ್ಲಿ ಯಶಸ್ಸು ಗಳಿಸಬಹುದುʼ ಎಂದು ಸಲಹೆ ನೀಡಿದರು.

Advertisements
Karnataka College Career Guidance Programme Photo 2
ಪ್ರೇರಕ ಭಾಷಣಕಾರ ವೆಂಕಟ ವವಿಲಾಲಾ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಚಾರ್ಯ ಪ್ರೊ.ಮಲ್ಲಿಕಾರ್ಜುನ ಹಂಗರಗಿ, ಹೈದರಾಬಾದ್‍ನ ಎಸ್ಎನ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ಶಂಕರ ಜಾಧವ್, ಉಪ ಪ್ರಾಚಾರ್ಯ ಸೋಮನಾಥ ಬಿರಾದಾರ, ಐಕ್ಯೂಎಸಿ ಸಂಯೋಜಕ ಡಾ. ರಾಜಕುಮಾರ ಪರದೇಶಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬಿಸಿಲಿನ ತಾಪ : ಮನರೇಗಾ ಕಾರ್ಮಿಕರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ

ಕಾಲೇಜಿನ ಐಐಸಿ ಘಟಕದ ಮುಖ್ಯಸ್ಥ ಡಾ. ವಿನೋದ ಕಾಳೇಕರ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅನ್ನಿ ಕ್ರಿಸ್ಟಿನಾ ನಿರೂಪಿಸಿದರು. ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಪವನಕುಮಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X