ಬೀದರ್‌ | ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು : ಬೆಲ್ದಾಳ ಶರಣರು

Date:

Advertisements

ಹನ್ನೆರಡನೆಯ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ಭೌತಿಕ ಅನುಭವ ಮಂಟಪ ಇತ್ತು ಎಂದು ಕೌಠಾ(ಬಿ) ಬಸವ ಯೋಗಾಶ್ರಮದ ಬೆಲ್ದಾಳ ಸಿದ್ಧರಾಮ ಶರಣರು ನುಡಿದರು.

ಬೀದರ್ ನಗರದ ಗಾಂಧಿಗಂಜ್‍ನ ಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ನಡೆದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ‘ವಚನ ಮಂಟಪ’ ಮಾಸಿಕ ಚಿಂತನ-ಮಂಥನ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ, ʼವಚನಗಳಲ್ಲಿ ಅನುಭವ ಮಂಟಪದ ಐತಿಹಾಸಿಕತೆʼ ವಿಷಯ ಕುರಿತು ಮಾತನಾಡಿದರು.

ʼಭೌತಿಕ ಅನುಭವ ಮಂಟಪವೇ ಇರಲಿಲ್ಲ. ವಚನಗಳಲ್ಲಿ ಎಲ್ಲೂ ಅನುಭವ ಮಂಟಪದ ಪ್ರಸ್ತಾಪವಿಲ್ಲ ಎಂದು ಚಿಂತಕಿ ವೀಣಾ ಬನ್ನಂಜೆ ಇತ್ತೀಚಿಗೆ ನೀಡಿರುವ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ಬಸವಾದಿ ಶರಣರ ಬಹಳಷ್ಟು ವಚನಗಳಲ್ಲಿ ಅನುಭವ ಮಂಟಪದ ಪ್ರಸ್ತಾಪ ಇದೆ. ಬಸವಣ್ಣನವರ ಧರ್ಮಪತ್ನಿ ನೀಲಾಂಬಿಕೆ ಅವರ ವಚನದಲ್ಲಿ ಈ ಕುರಿತು ವಿಶೇಷವಾಗಿ ಉಲ್ಲೇಖಿಸಲಾಗಿದೆ. ಅನುಭವ ಮಂಟಪ ಭೌತಿಕವಾಗಿ ಅಸ್ತಿತ್ವದಲ್ಲಿ ಇತ್ತು ಎನ್ನುವುದನ್ನು ನಿರೂಪಿಸಲು ನೀಲಾಂಬಿಕೆ ಅವರ ಒಂದೇ ಒಂದು ವಚನ ಸಾಕುʼ ಎಂದು ಹೇಳಿದರು.

Advertisements
vachan Mantap Programme 1
ಜಾಗತಿಕ ಲಿಂಗಾಯತ ಮಹಾಸಭಾದ ವಚನ ಮಂಟಪ ಕಾರ್ಯಕ್ರಮವನ್ನು ಸಂಸದ ಸಾಗರ್ ಖಂಡ್ರೆ ಉದ್ಘಾಟಿಸಿದರು

ವಚನ ಪಠಣ ಮಾಡಿ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ಸಾಗರ್ ಖಂಡ್ರೆ ಮಾತನಾಡಿ, ʼಪ್ರತಿಯೊಬ್ಬರೂ ವಚನಗಳ ಚಿಂತನ-ಮಂಥನದ ವಚನ ಮಂಟಪ ಕಾರ್ಯಕ್ರಮದ ಸದುಪಯೋಗ ಪಡೆಯಬೇಕು. ಕಾರ್ಯಕ್ರಮ ಹೆಚ್ಚು ಹೆಚ್ಚು ವಿಸ್ತಾರಗೊಳ್ಳಲಿ. ಬಸವಾದಿ ಶರಣರ ತತ್ವ ಪಸರಿಸುವ ಆಶಯ ಈಡೇರಲಿʼ ಎಂದು ಶುಭ ಹಾರೈಸಿದರು.

ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಮಾತನಾಡಿ, ʼಶರಣರು ವಚನಗಳ ಮೂಲಕ ಬದುಕಿನ ಸೂತ್ರ ನೀಡಿದ್ದಾರೆ. ಅವುಗಳನ್ನು ಪಾಲಿಸಿದ್ದಲ್ಲಿ ಬದುಕು ಸಾರ್ಥಕವಾಗುತ್ತದೆ. ಮಹಾಸಭಾ ಶರಣರ ವಚನಗಳ ಮೇಲೆ ಬೆಳಕು ಚೆಲ್ಲುವ ಮಾಸಿಕ ಕಾರ್ಯಕ್ರಮ ಆರಂಭಿಸಿರುವುದು ಶ್ಲಾಘನೀಯʼ ಎಂದರು.

ಹುಲಸೂರಿನ ಶಿವಾನಂದ ಸ್ವಾಮೀಜಿ ಮಾತನಾಡಿ, ʼಇಂದು ಕಾರ್ಯಕ್ರಮಗಳ ಸಂಘಟನೆ ಸುಲಭವಲ್ಲ.ಬಸವ ತತ್ವದ ಕಾರ್ಯಕ್ಕೆ ಎಲ್ಲರೂ ಸಹಕರಿಸಬೇಕು. ಒಳ್ಳೆಯ ಚಿಂತನೆಗಳನ್ನು ಬಿತ್ತುವ ಕಾರ್ಯಕ್ರಮಗಳಿಂದ ಮಾತ್ರ ಸುಂದರ ಸಮಾಜ ಕಟ್ಟಲು ಸಾಧ್ಯವಾಗುತ್ತದೆʼ ಎಂದು ತಿಳಿಸಿದರು.

WhatsApp Image 2025 03 31 at 5.35.38 PM
ವಚನ ಮಂಟಪ ಸಮಾರಂಭದಲ್ಲಿ ಭಾಗವಹಿಸಿದ ಬಸವಾನುಯಾಯಿಗಳು

ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ ಮಾತನಾಡಿ, ʼವಚನಗಳ ಚಿಂತನೆಯ ಕಾರ್ಯಕ್ರಮಕ್ಕೆ ವಚನ ಮಂಟಪ ಹೆಸರಿಟ್ಟಿರುವುದು ಅತ್ಯಂತ ಸೂಕ್ತವಾಗಿದೆ. ಇದು, ಐತಿಹಾಸಿಕ ಶೀರ್ಷಿಕೆ. ಜನಪದರು ವಚನ ಮಂಟಪ ಪದವನ್ನು ಬಳಸಿದ್ದರುʼ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿ, ʼಮಹಾಸಭಾ ಜಿಲ್ಲೆಯಲ್ಲಿ ಬಸವ ತತ್ವ ಪ್ರಸಾರದ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ನಾಲ್ಕು ವರ್ಷಗಳಲ್ಲಿ 3 ಸಾವಿರ ಸದಸ್ಯತ್ವ ಮಾಡಿಸಿದ ಹಾಗೂ ಬಸವಕಲ್ಯಾಣದಲ್ಲಿ ರಾಷ್ಟ್ರೀಯ ಲಿಂಗಾಯತ ಪ್ರಥಮ ಮಹಾ ಅಧಿವೇಶನ ಯಶಸ್ವಿಯಾಗಿ ಸಂಘಟಿಸಿದ ಶ್ರೇಯ ಮಹಾಸಭಾದ ಬೀದರ್ ಜಿಲ್ಲಾ ಘಟಕಕ್ಕೆ ಇದೆʼ ಎಂದು ತಿಳಿಸಿದರು.

ʼಈಚೆಗೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಶರಣರ ವಚನ ಸಾಹಿತ್ಯದ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿವೆ. ಹೀಗಾಗಿ ಜನರಲ್ಲಿ ವಚನ ಪ್ರಜ್ಞೆ ಮೂಡಿಸಲು ಹಾಗೂ ವಚನಗಳ ಕುರಿತು ಚಿಂತನೆಗೆ ಹಚ್ಚಲು ವಚನ ಮಂಟಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆʼ ಎಂದು ಹೇಳಿದರು.

vachan Mantap Programme 3
ಹುಲಸೂರಿನ ಶಿವಾನಂದ ಸ್ವಾಮೀಜಿ ಮಾತನಾಡಿದರು

ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ ಮಾತನಾಡಿದರು. ಗಾಂಧಿಗಂಜ್‍ನ ಹಿರಿಯ ವ್ಯಾಪಾರಿಗಳಾದ ಅಣ್ಣಾರಾವ್ ಮೊಗಶೆಟ್ಟಿ, ನಾಗಶೆಟ್ಟೆಪ್ಪ ದಾಡಗಿ, ಪ್ರಮುಖರಾದ ರಾಜೇಂದ್ರಕುಮಾರ ಗಂದಗೆ, ಬಾಬುರಾವ್ ದಾನಿ, ಪಂಚಾಕ್ಷರಿ ಪುಣ್ಯಶೆಟ್ಟಿ, ಕುಶಾಲರಾವ್ ಪಾಟೀಲ ಖಾಜಾಪುರ, ಭಗವಂತ ಔದತ್ತಪುರ, ಬಂಡೆಪ್ಪ, ಕಂಟೆಪ್ಪ ಗಂದಿಗುಡೆ, ಉಮೇಶ ಗಾಯಗೊಂಡ, ಗೋವಿಂದರಾವ್ ಬಿರಾದಾರ, ಸೋಮನಾಥ ಗಂಗಶೆಟ್ಟಿ, ಚಂದ್ರಪ್ಪ ಹಳ್ಳಿ, ಶರಣಪ್ಪ ಲಾಡಗೇರಿ, ವೀರಭದ್ರಯ್ಯ ಬುಯ್ಯಾ, ಮಲ್ಲಿಕಾರ್ಜುನ ಪಂಚಾಕ್ಷರಿ, ಯೋಗೇಂದ್ರ ಯದಲಾಪುರೆ, ಅಣ್ಣೆಪ್ಪ ಹುಡಗೆ, ಡಾ. ಸುಲೋಚನಾ ಪಾಟೀಲ, ಡಾ. ದೇವಕಿ ನಾಗೂರೆ, ನಿರ್ಮಲಾ ಮಸೂದಿ, ರೂಪಾ ಪಾಟೀಲ, ಸ್ಫೂರ್ತಿ ಧನ್ನೂರ, ಸಂತೋಷಿ ಗಂದಗೆ, ವಿಜಯಲಕ್ಷ್ಮಿ ಪಾಟೀಲ ಮತ್ತಿತರರು ಇದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಮಹಾಸಭಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೊನ್ನಿಕೇರಿ ಸ್ವಾಗತಿಸಿದರು. ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಜಯದೇವಿ ಯದಲಾಪುರೆ ನಿರೂಪಿಸಿದರು. ಅಧ್ಯಕ್ಷೆ ಉಷಾ ಮಿರ್ಚೆ ವಂದಿಸಿದರು. ಜಗನ್ನಾಥ ನಾನಕೇರಿ ಹಾಗೂ ಸಿದ್ದುಸಾಯಿ ನಾನಕೇರಿ ವಚನ ಗಾಯನ ನಡೆಸಿಕೊಟ್ಟರು. ಬಿ.ಕೆ.ಡಿ. ಫೌಂಡೇಷನ್ ಕಾರ್ಯದರ್ಶಿ ಸುವರ್ಣಾ ಬಿ. ಧನ್ನೂರ ಭಕ್ತಿ ದಾಸೋಹಗೈದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X