ಬೀದರ್‌ | ಈದಿನ ಫಲಶೃತಿ : ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಜಮೆ

Date:

ಔರಾದ್-ಕಮಲನಗರ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರ ಖಾತೆಗೆ ಮೂರು ತಿಂಗಳ ಗೌರವಧನ ಗುರುವಾರ (ಮಾ.6) ಸಂಜೆ ಜಮೆಯಾಗಿದೆ.

- Advertisement -

ಈ ಕುರಿತು ಮಾ.4ರಂದು ಈದಿನ.ಕಾಮ್‌ ನಲ್ಲಿ ‘ಸಕಾಲಕ್ಕೆ ಸಿಗದ ಗೌರವಧನ : 147 ಅತಿಥಿ ಶಿಕ್ಷಕರು ಹೈರಾಣು’ ಎಂಬ ಶೀರ್ಷಿಕೆಯಡಿ ವಿಸ್ತೃತ ವರದಿ ಮೊದಲು ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಗುರುವಾರ ಅತಿಥಿ ಶಿಕ್ಷಕರಿಗೆ ವೇತನ ಪಾವತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಔರಾದ್-ಕಮಲನಗರ ಅವಳಿ ತಾಲ್ಲೂಕಿನಲ್ಲಿ 147 ಅತಿಥಿ ಶಿಕ್ಷಕರಿದ್ದರು. ವಿವಿಧ ಕಾರಣಗಳಿಂದ ಕೆಲ ಶಿಕ್ಷಕರು ಕೆಲಸ ಬಿಟ್ಟಿದ್ದಾರೆ. ಹೀಗಾಗಿ 129 ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕರಿಗೆ 2024ರ ಅಕ್ಟೊಬರ್, ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಗೌರವಧನ ಆಯಾ ಶಿಕ್ಷಕರ ಖಾತೆಗೆ ಜಮಾ ಮಾಡಲಾಗಿದೆʼ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಜಿ.ರಂಗೇಶ ತಿಳಿಸಿದ್ದಾರೆ.

ʼ2024-25ನೇ ಸಾಲಿನಲ್ಲಿ ಅತಿಥಿ ಶಿಕ್ಷಕರ ಗೌರವಧನ ಪಾವತಿಗಾಗಿ ಬಂದ ಅನುದಾನ ಔರಾದ್‌ನ ಶಿಕ್ಷಣ ಇಲಾಖೆ ಅಧಿಕಾರಿಗಳು ಸಕಾಲಕ್ಕೆ ಪಾವತಿಸದ ಕಾರಣಕ್ಕೆ ವಾಪಸ್‌ ಹೋಗಿದೆ. ಇದರಿಂದ ಅತಿಥಿ ಶಿಕ್ಷಕರಿಗೆ ಮೂರು ತಿಂಗಳ ಗೌರವಧನ ಪಾವತಿಯಾಗಿಲ್ಲ. ಕೂಡಲೇ ಅತಿಥಿ ಶಿಕ್ಷಕರ ಬಾಕಿ ಗೌರವಧನ ಪಾವತಿಸಬೇಕುʼ ಎಂದು ಅತಿಥಿ ಶಿಕ್ಷಕರ ಸಂಘ ಮನವಿ ಸಲ್ಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಕಾಲಕ್ಕೆ ಸಿಗದ ಗೌರವಧನ : 147 ಅತಿಥಿ ಶಿಕ್ಷಕರು ಹೈರಾಣು

ʼಈ ಕುರಿತು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಅತಿಥಿ ಶಿಕ್ಷಕರ ಸಂಘದ ತಾಲ್ಲೂಕಾಧ್ಯಕ್ಷ ನಾಗೇಂದ್ರ ಚಿಟಗೀರೆ ಮಾತನಾಡಿ, ʼಅತಿಥಿ ಶಿಕ್ಷಕರ ಬಾಕಿ ಇರುವ ಮೂರು ತಿಂಗಳ ಗೌರವಧನ ಬಿಡುಗಡೆ ಕುರಿತು ಮೊದಲಿಗೆ ʼಈದಿನ.ಕಾಮ್‌ʼ ವಿಶೇಷ ವರದಿ ಪ್ರಕಟಿಸಿತು. ವರದಿ ಪರಿಣಾಮವಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಮೂರು ತಿಂಗಳ ಗೌರವಧನ ಗುರುವಾರ ಖಾತೆಗೆ ಜಮೆ ಮಾಡಿದ್ದಾರೆʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...