ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರವಾಗಿ ಮಲೆ ಸುರಿಯುತ್ತಿದೆ. ಬೀದರ್ ಜಿಲ್ಲೆಯಲ್ಲಿ ಹಳ್ಳಗಳು ತುಂಬಿಹರಿಯುತ್ತಿವೆ. ಹಳ್ಳ ದಾಟಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಧನ್ನೂರ(ಆರ್) ಗ್ರಾಮದ ಮಲ್ಲಪ್ಪ ಶರಣಪ್ಪ ಬಿರಾದಾರ (28) ಎಂಬಾತ ಸೋಮವಾರ ಸಂಜೆ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಗ್ರಾಮದ ಹೊರವಲಯದಲ್ಲಿರುವ ತನ್ನ ನಿವಾಸಕ್ಕೆ ತೆರಳುತಿದ್ದ ವೇಳೆ, ಹಳ್ಳ ದಾಟುವಾಗ ನೀರಿಗೆ ಜಾರಿ ಯುವಕ ಕೊಚ್ಚಿಹೋಗಿದ್ದಾನೆ.
ಕ್ಷೇತ್ರದ ಶಾಸಕ ಡಾ: ಸಿದ್ದು ಪಾಟೀಲ್, ತಹಶೀಲ್ದಾರ ಶಾಂತಗೌಡ ಬಿರಾದಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಡಬಿ ಠಾಣೆ ಪೊಲೀಸ್ ತಂಡ ಶೋಧಕಾರ್ಯ ನಡೆಸುತ್ತಿದೆ. ಇನ್ನೂ ಯುವಕನ ಮೃತದೇಹ ಪತ್ತೆಯಾಗಿಲ್ಲ.