ಬೀದರ್ | ಸಾರಿಗೆ ಬಸ್ ಪಲ್ಟಿ : ಇಬ್ಬರಿಗೆ ಗಾಯ; ತಪ್ಪಿದ ಭಾರಿ ಅನಾಹುತ

Date:

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಔರಾದ್ ತಾಲ್ಲೂಕಿನ ಜಮಲಾಪುರ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ನಡೆದಿದೆ.

- Advertisement -

ಔರಾದ್ ಘಟಕಕ್ಕೆ ಸೇರಿದ KA 38, F0882 ಬಸ್ ಔರಾದ್‌ದಿಂದ ಭಾಲ್ಕಿಗೆ ತೆರಳುತ್ತಿದ್ದ ವೇಳೆ ಕಮಲನಗರ ರಸ್ತೆಯಲ್ಲಿ ಈ ಘಟನೆ ಜರುಗಿದೆ. ಎದುರಿನಿಂದ ಟೆಂಪೋ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಬಸ್ ಉರುಳಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಘಟನೆಯಲ್ಲಿ ಖಂಡೇಕೆರಿ ಗ್ರಾಮದ ಹಿರಿಯರಾದ ಸೋಪನರಾವ್ ಬಿರಾದಾರ ಹಾಗೂ ವಿದ್ಯಾರ್ಥಿ ನರಸಿಂಗ್ ಬಿರಾದಾರ ಗಾಯಗೊಂಡಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಸ್‌ನಲ್ಲಿ 9 ಜನ ಪ್ರಯಾಣಿಸುತ್ತಿದ್ದರು. ಇಬ್ಬರಿಗೆ ಗಾಯವಾಗಿದೆ. ಉಳಿದವರು ಎಲ್ಲರೂ ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ ಎಂದು ಔರಾದ್ ಬಸ್ ಘಟಕ ವ್ಯವಸ್ಥಾಪಕ ರಾಜೇಂದ್ರ ‘ಈದಿನ.ಕಾಮ್’ ಗೆ ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...

ಕೊಡಗಿನಲ್ಲಿ ‘SIR’ ಪಬ್ಲಿಕ್ ಹಿಯರಿಂಗ್: ‘ಮತದಾನದ ಹಕ್ಕು ಕಸಿಯುವುದು ಅಷ್ಟು ಸುಲಭವಲ್ಲ’ -ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಎದುರಾಗುತ್ತಿರುವ ಸಮಸ್ಯೆಗಳು,...

ದಿಂಡವಾರ ಬಳಿ ಭೂಕಂಪ; ಸ್ಥಳೀಯರು ಆತಂಕಪಡುವ ಅಗತ್ಯವಿಲ್ಲ: KSNDMC ಅಧಿಕಾರಿಗಳು

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ 3.5 ತೀವ್ರತೆಯ ಭೂಕಂಪ ಉಂಟಾಗಿರುವುದಾಗಿ ಕರ್ನಾಟಕ...

ಔರಾದ್ : ನಕಲಿ ವೈದ್ಯಕೀಯ ವೃತ್ತಿ: ಕ್ಲಿನಿಕ್ ಸೀಜ್

ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದೆ ನಕಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದ ಆರೋಪದ...