ಬೀದರ್‌ | ಪತ್ರಕರ್ತ ರವಿ ಸ್ವಾಮಿ ಅವರಿಗೆ ಶ್ರದ್ದಾಂಜಲಿ

Date:

ಪತ್ರಕರ್ತ ರವಿ ಸ್ವಾಮಿ ಅವರ ಸಮಯ ಪರಿಪಾಲನೆ ಹಾಗೂ ಪ್ರಾಮಾಣಿಕತೆ ಇಂದಿನ ಯುವ ಪತ್ರಕರ್ತರಿಗೆ ಮಾದರಿಯಾಗಿದೆ ಎಂದು ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ಹೇಳಿದರು.

- Advertisement -

ಸೋಮವಾರ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತಿಚೀಗೆ ಹೃದಯಘಾತಕ್ಕೆ ತುತ್ತಾಗಿ ನಮ್ಮನ್ನಗಲಿದ ರವಿ ಸ್ವಾಮಿ (ರೇವಣಸಿದ್ದಯ್ಯ ಸ್ವಾಮಿ ಹೆಡಗಾಪುರ) ಅವರ ಶೃದ್ದಾಂಜಲಿ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ರವಿ ಸ್ವಾಮಿ ತನ್ನ ಮೂರುವರೆ ದಶಕಗಳ ಸುಧೀರ್ಘ ಪತ್ರಿಕಾ ರಂಗದ ಸೇವೆಯಲ್ಲಿ ವಿಶಿಷ್ಟ ರೀತಿಯಲ್ಲಿ ಗುರುತಿಸಿಕೊಂಡಿದ್ದರು. ಸ್ವಾಭಿಮಾನ, ಮಿತ ಭಾಷೆ, ಸಹಕಾರ ಮನೋಭಾವ ಅವರ ಜೀವನದ ಬಂಡವಾಳವಾಗಿದ್ದವು. ಕಿರಿಯರಿಗೆ ಮಾರ್ಗದರ್ಶನ ಹಾಗೂ ಹಿರಿಯರಿಗೆ ಸಹಾಯ ಮಾಡುವುದು ಅವರ ನಿತ್ಯದ ಕಾರ್ಯವಾಗಿತ್ತು. ದೊಡ್ಡವರು, ಚಿಕ್ಕವರು ಎಂಬುದನ್ನು ಲೆಕ್ಕಸಿದೆ ಎಲ್ಲರಿಗೂ ದೈನ್ಯತಾ ಭಾವದಿಂದ ಮಾತನಡಿಸುವ ಸ್ವಭಾವ ಅವರದ್ದಾಗಿತ್ತು. ಇಂಥ ಅಪರೂಪದ ಪತ್ರಕರ್ತನನ್ನು ಕಳೆದುಕೊಂಡು ಜಿಲ್ಲಾ ಪತ್ರಿಕಾ ಬಳಗ ಬಡವಾಗಿದೆʼ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನಂದ ದೇವಪ್ಪ ಮಾತನಾಡಿ, ‘ಕಳೆದ 38 ವರ್ಷಗಳಿಂದ ಜನದನಿ ಪರಿವಾರದ ಸದಸ್ಯನಾಗಿ ಗುರ್ತಿಸಿಕೊಂಡಿದ್ದ ರವಿ ಸ್ವಾಮಿ ಹಿಡಿದ ಕಾಯಕ, ಬಿಡದೆ ಅದನ್ನು ಚಾಚೂ ತಪ್ಪದೇ ಮುಗಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರಿಗೆ ತಾನು ಇಹಲೋಕ ತ್ಯಜಿಸುತ್ತೇನೆಂಬ ಅರಿವಿನೊಂದಿಗೆ ಭವಿಷ್ಯದಲ್ಲಿ ಎಲ್ಲರಿಗೆ ಅನುಕುಲ ಆಗುವ ರೀತಿಯಲ್ಲಿ ನೀಟಾಗಿ ತಿಳಿಯುವಂತೆ ಬರೆದಿಟ್ಟಿರುವುದು ನಿಜಕ್ಕೂ ಆಶ್ಚರ್ಯ ತಂದಿದೆʼ ಎಂದರು.

ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿದರು. ಪತ್ರಕರ್ತರಾದ ಬಸವರಾಜ ಪವಾರ, ಅಬ್ದುಲ್ ಖದೀರ್, ವಿಜಯಕುಮಾರ ಸೋನಾರೆ, ಭೀಮರಾವ ಬಿದರಕರ್, ಉಮೇಶ ಉಂಡೆ, ಸುಧಾರಾಣಿ, ಎಂ.ಪಿ ಮುದಾಳೆ ಹಾಗೂ ಇತರರು ತಮ್ಮ ಅನುಭವ ಹಂಚಿಕೊಂಡರು.

ಇದನ್ನೂ ಓದಿ : ಬೀದರ್‌ | ಶರಣರ ವಚನಗಳು ನಮ್ಮ ಬದುಕಿಗೆ ದಾರಿದೀಪ : ಗುರುಬಸವ ಪಟ್ಟದ್ದೇವರು

ಪತ್ರಕರ್ತರಾದ ಸುನಿಲಕುಮಾರ ಕುಲಕರ್ಣಿ, ಆಧೀಶ ವಾಲಿ, ಸಂತೋಷ ಚಟ್ಟಿ, ವಿಜಯಕುಮಾರ ಸೂರ್ಯನ್, ಸಂಜುಕುಮಾರ ಸ್ವಾಮಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿದ್ದರು. ಪತ್ರಕರ್ತ ಶಿವಕುಮಾರ ಸ್ವಾಮಿ ಸ್ವಾಗತಿಸಿ, ನಿರೂಪಿಸಿದರು. ನಾಗಶೆಟ್ಟಿ ಧರಂಪುರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...