ಬೀದರ್‌ | ತೊಗರಿ ಪ್ರತಿ ಕ್ವಿಂಟಾಲ್‌ಗೆ ₹8 ಸಾವಿರ ಬೆಂಬಲ ಬೆಲೆಯಂತೆ ಖರೀದಿ

Date:

Advertisements

2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ತೊಗರಿ ಪ್ರತಿ ಕ್ವಿಂಟಾಲ್‌ಗೆ ₹8 ಸಾವಿರ ಬೆಂಬಲ ಬೆಲೆಯಂತೆ ಖರೀದಿಗೆ ಸಂಬಂಧಿಸಿದಂತೆ ತಕ್ಷಣದಿಂದಲೇ ಖರೀದಿ ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್‌ಗೆ ₹7,550 ಜೊತೆಗೆ ರಾಜ್ಯ ಸರ್ಕಾರದ ಪ್ರೋತಾಹ ಧನ ₹450 ಸೇರಿ ಪ್ರತಿ ಕ್ವಿಂಟಾಲ್‌ ತೊಗರಿಗೆ ₹8 ಸಾವಿರದಂತೆ ಖರೀದಿಸಲು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಕಳೆದ ಜನವರಿಯಲ್ಲಿ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆ ಸಹಮತಿ ನೀಡಲಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಗೆ ತಕ್ಷಣದಿಂದ ಅನುಷ್ಠಾನಗೊಳಿಸಲು ಸೂಕ್ತ ನಿರ್ದೇಶನ ನೀಡಲಾಗಿದೆ.

ರಾಜ್ಯದ ಪ್ರಮುಖ ತೊಗರಿ ಬೆಳೆಯುವ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದಲ್ಲಿ ಅಂದಾಜು 330 ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ.

Advertisements

ಬೀದರ್‌ನಲ್ಲಿ 70 ತೊಗರಿ ಖರೀದಿ ಕೇಂದ್ರ :

ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್‌ಗಳಂತೆ ತೊಗರಿ ಕಾಳನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ಬೀದರ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯಿಂದ ಜಿಲ್ಲೆಯಲ್ಲಿ ಒಟ್ಟು 70 ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಬೀದರ ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಚನ ವಿಜಯೋತ್ಸವ : ಡಾ.ಗಂಗಾಂಬಿಕೆ ಪಾಟೀಲ್‌ ಅವರಿಗೊಂದು ಬಹಿರಂಗ ಪತ್ರ

ರೈತ ಬಾಂಧವರು ತಮ್ಮ ಹತ್ತಿರದ ಪಿಎಸಿಎಸ್, ಎಫ್‌ಪಿಒ, ಟಿಎಪಿಸಿಎಂಎಸ್‌ಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಕೊಂಡು ಬೆಂಬಲ ಬೆಲೆ ಯೋಜನೆ ಹಾಗೂ ರಾಜ್ಯ ಸರ್ಕಾರದ ಪ್ರೋತ್ಸಾಹ ಧನದ ಸದುಪಯೋಗ ಪಡೆದುಕೊಳ್ಳಬೇಕೆಂದು ಕೃಷಿ ಮರಾಟ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X