ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿರುವ ಘಟನೆ ಬೀದರ್ ತಾಲ್ಲೂಕಿನ ಅಲಿಯಂಬರ್ ಸಮೀಪದ ಸಿದ್ದಾಪುರ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದೆ.
ಭಾಲ್ಕಿ ತಾಲ್ಲೂಕಿನ ಅಲಿಯಾಬಾದ್(ಕೆ) ಗ್ರಾಮದ ನಾಗುರಾಮ್ ಕೊಂಡಿಬಾ ಖೇತ್ರೆ (47) ಮೃತ ಸವಾರ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಮೃತರಿಗೆ ಪತ್ನಿ, ಪುತ್ರ ಇದ್ದಾರೆ.
ಮೃತ ನಾಗುರಾಮ ಅವರು ತಮ್ಮ ಗ್ರಾಮದಿಂದ ಅಲಿಯಂಬರ್ ಕಡೆಗೆ ಬರುತ್ತಿದ್ದರು. ಈ ವೇಳೆ ಸಿದ್ದಾಪುರ ಕ್ರಾಸ್ ಬಳಿ ಎದುರಿಗೆ ಬಂದ ಬೈಕ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.