ಬೀದರ್‌ | ದನ ಮೇಯಿಸಲು ಹೋದ ಬಾಲಕರಿಬ್ಬರು ಹೊಂಡದಲ್ಲಿ ಮುಳುಗಿ ಸಾವು

Date:

ದನ ಮೇಯಿಸಲು ಜಮೀನಿಗೆ ತೆರಳಿದ ಇಬ್ಬರು ಬಾಲಕರು ಹೊಂಡದಲ್ಲಿ ಈಜಲು ಹೋದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಬಸವಕಲ್ಯಾಣ ತಾಲೂಕಿನ ರಾಂಪೂರವಾಡಿ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.

- Advertisement -

ರಾಂಪೂರವಾಡಿ ಗ್ರಾಮದ ಮೈಲಾರಿ ದೊಡ್ಮನಿ (10) ಹಾಗೂ ಶರಣಪ್ಪ ಹಾಳಗೋರ್ಟೆ (10) ಮೃತ ಬಾಲಕರು ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹೊಂಡದಲ್ಲಿ ಈಜಾಡಲು ಹೋದಾಗ ಕೆಸರಿನಲ್ಲಿ ಸಿಲುಕಿ ಮೇಲೆ ಬರಲಾಗದೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದ್ದು, ಸ್ಥಳಕ್ಕೆ ಬಸವಕಲ್ಯಾಣ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ.

WhatsApp Image 2025 10 27 at 5.47.34 AM

ಹುಮನಬಾದ್ ಶಾಸಕ ಡಾ.ಸಿದ್ದಲಿಂಗ ಪಾಟೀಲ್ ಅವರು ರಾಜೇಶ್ವರ್ ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮೃತ ಬಾಲಕರ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು. ಸರ್ಕಾರದ ಕಲ್ಪಿಸಲಾಗುವುದು ಭರವಸೆ ನೀಡಿದ ಅವರು, ಇಂತಹ ಘಟನೆಗಳನ್ನು ಮರುಕಳಿಸದಂತೆ ವಿವಿಧ ಗ್ರಾಮಗಳಲ್ಲಿರುವ ತೆರದ ಬಾವಿಗಳ ಬಗ್ಗೆ ಎಚ್ಚರವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...