ಬೀದರ್‌ | ಸಾಲಬಾಧೆಯಿಂದ ಇಬ್ಬರು ರೈತರ ಆತ್ಮಹತ್ಯೆ

Date:

ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಜನವರಿ 28ರಂದು ಒಂದೇ ದಿನ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಸುವ ಮುನ್ನವೇ ಮತ್ತೆ ಇಬ್ಬರು ರೈತರು ಸಾವಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.

- Advertisement -

ಭಾಲ್ಕಿ ತಾಲ್ಲೂಕಿನ ಆನಂದವಾಡಿ ಗ್ರಾಮದ ರೈತ ಸುಧಾಕರ ವೈಜಿನಾಥ ಘೋಡೆ (36) ಸಾಲಬಾಧೆ ತಾಳಲಾರದೆ ಮರಕ್ಕೆ ನೇಣು ಬಿಗಿದುಕೊಂಡು ಫೆ.17ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಬೇಸಾಯಕ್ಕಾಗಿ ಭಾತಂಬ್ರಾ ಗ್ರಾಮದ ಪಿಕೆಪಿಎಸ್‌ನಲ್ಲಿ ₹50 ಸಾವಿರ ಸೇರಿದಂತೆ ಖಾಸಗಿ ಮೂಲದಿಂದ ಕೈಸಾಲ ಪಡೆದಿದ್ದರು. ಸರಿಯಾಗಿ ಬೆಳೆ ಬಾರದ ಕಾರಣ ಸಾಲ ಹೇಗೆ ತೀರಿಸಬೇಕು ಎಂದು ಚಿಂತೆಗೀಡಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ತಾಯಿ ಕುಂದನಾ ದೂರು ನೀಡಿದ್ದಾರೆ. ಈ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಲಸೂರ ಸಮಿಪದ ಬೆಟಬಾಲಕುಂದ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ 38 ವರ್ಷದ ರೈತ ಪಂಡರಿ ದಿಗಂಬರಾವ್‌ ಎಂಬುವರರು ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹1 ಲಕ್ಷ ಹಾಗೂ ಖಾಸಗಿ ಮೂಲಗಳಿಂದ ಸಾಲ ಪಡೆದಿದ್ದರು. ನಿರೀಕ್ಷೆಯಿಂದ ಜಮೀನು ಬೆಳೆಯಲಿಲ್ಲ. ಹೀಗಾಗಿ ಸಾಲ ತೀರಿಸುವುದು ಹೇಗೆ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತ : ಓರ್ವ ವ್ಯಕ್ತಿ ಸಾವು

ಈ ಬಗ್ಗೆ ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...