ಬೀದರ್ ವಿಶ್ವವಿದ್ಯಾಲಯ, ಬ್ರಿಡ್ಜ್‌ ವಾಟರ್‌ ಸ್ಟೇಟ್ ವಿ.ವಿ. ನಡುವೆ ಒಪ್ಪಂದ

Date:

Advertisements

ಬೀದರ್ ವಿಶ್ವವಿದ್ಯಾಲಯ ಕುಲಪತಿ ಪ್ರೊ. ಬಿ.ಎಸ್.ಬಿರಾದಾರ ಅವರು ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಫ್ರೆಡ್ರಿಕ್ ಕ್ಲಾರ್ಕ್ ಅವರೊಂದಿಗೆ ಬೆಂಗಳೂರಿನಲ್ಲಿ ಹಲವಾರು ಶೈಕ್ಷಣಿಕ ಸಹಕಾರಿ ಕ್ಷೇತ್ರದ ಒಪ್ಪಂದಕ್ಕೆ ಸಹಿ ಹಾಕಿ ಪರಸ್ಪರ ವಿನಿಮಯ ಮಾಡಿಕೊಂಡಿದ್ದಾರೆ.

ʼಬೀದರ ವಿಶ್ವವಿದ್ಯಾಲಯ ಹಾಗೂ ಅಮೇರಿಕಾದ ಬ್ರ್ರಿಡ್ಜ್ ವಾಟರ್ ವಿಶ್ವವಿದ್ಯಾಲಯಗಳ ಈ ಐತಿಹಾಸಿಕ ಒಪ್ಪಂದದಿಂದಾಗಿ ಉಭಯ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರಗಳಲ್ಲಿ ವಿನೂತನ ಯುಗ ಆರಂಭವಾಗುತ್ತದೆ ಎನ್ನಲಾಗಿದೆ. ಪರಸ್ಪರ ತಂತ್ರಜ್ಞಾನದ ವಿಚಾರ ವಿನಿಮಯ, ಜಂಟಿಯಾಗಿ ಪದವಿ ಕಾರ್ಯಕ್ರಮಗಳ ವಿನಿಮಯಗಳಿಗೆ ಅನುಕೂಲವಾಗುತ್ತದೆʼ ಎಂದರು.

ʼಉಭಯ ವಿಶ್ವವಿದ್ಯಾಲಯಗಳ ಅಧ್ಯಾಪಕರ ವಿನಿಮಯದಿಂದ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹೊಸ ಆಯಾಮ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಆಧುನಿಕ ಶೈಲಿಯ ಕೃತಕ ಬುದ್ಧಿಮತ್ತೆ (ಎಐ)ಯಂತಹ ಕ್ಷೇತ್ರಗಳಲ್ಲಿ ದಾಪುಗಾಲಿಡಲು ಪೂರಕವಾಗುತ್ತದೆ. ಈ ಐತಿಹಾಸಿಕ ಒಪ್ಪಂದದಿಂದಾಗಿ ಶೈಕ್ಷಣಿಕ, ಸಾಂಸ್ಕೃತಿಕ, ಸಂಶೋಧನೆ, ಅಭಿವೃದ್ಧಿ ಕ್ಷೇತ್ರಗಳಲ್ಲಿ ಮಹತ್ವದ ಮೈಲುಗಲ್ಲಾಗಲಿದೆ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಈ ಎರಡೂ ವಿಶ್ವವಿದ್ಯಾಲಯಗಳ ಒಪ್ಪಂದ ಇಂದಿನ ಆಧುನಿಕ, ತಂತ್ರಜ್ಞಾನದ, ವೇಗದ ಯುಗದಲ್ಲಿ ತುಂಬಾ ಮಹತ್ವದ್ದಾಗಿದೆʼ ಎಂದರು.

ʼನೂತನ ಬೀದರ ವಿಶ್ವವಿದ್ಯಾಲಯವು ಈಗಾಗಲೇ ಅನೇಕ ಶೈಕ್ಷಣಿಕ ಹಾಗೂ ಕೌಶಲ್ಯ ಕೇಂದ್ರಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅವುಗಳಲ್ಲಿ ಕೇಂದ್ರ ಸರ್ಕಾರದ ತಂತ್ರಜ್ಞಾನ ಕೌಶಲ್ಯದ ಸೀಪೆಟ್ ಹಾಗೂ ತಂಜಾವೂರಿನ ನಿಫ್ಟೆಮ್ ಉದ್ಯಮಶೀಲತಾ ಕೇಂದ್ರಗಳೊಂದಿಗೆ ಮಹತ್ವದ ಒಪ್ಪಂದಗಳಾಗಿವೆ. ಪ್ರಸ್ತುತ ಅಮೇರಿಕಾದ ಬ್ರಿಡ್ಜ್ ವಾಟರ್ ಸ್ಟೇಟ್ ವಿಶ್ವವಿದ್ಯಾಲಯದೊಂದಿಗೆ ಬೀದರ ವಿ.ವಿ. ಶೈಕ್ಷಣಿಕ ಕ್ಷೇತ್ರದ ಒಪ್ಪಂದ ತುಂಬಾ ಅವಿಸ್ಮರಣೀಯʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬಿಎಸ್‍ಯುನ ಉಪಾಧ್ಯಕ್ಷರಾದ ಡಾ.ಉಮಾ ಶರ್ಮಾ, ಡಾ.ಜಬ್ಬಾರ ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ರೋಗಿಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಅಂಬೇಡ್ಕರ್ ಸ್ಟೂಡೆಂಟ್ ಅಸೋಸಿಯೇಷನ್‌ ಆಗ್ರಹ

ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಂದಿಸದೇ, ಔಷಧಿಗಳನ್ನು...

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

Download Eedina App Android / iOS

X