ಬೀದರ್‌ ವಿಶ್ವವಿದ್ಯಾಲಯ : ಸ್ನಾತಕೋತ್ತರ ಪದವಿ ಫಲಿತಾಂಶ ಘೋಷಣೆ

Date:

ಬೀದರ ವಿಶ್ವವಿದ್ಯಾಲಯವು 19 ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ ಫಲಿತಾಂಶವನ್ನು ಅ.4ರಂದು ಘೋಷಿಸಿದೆ.

- Advertisement -

ಬೀದರ್‌ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ್ ಅವರು ಶುಕ್ರವಾರ ಸಂಜೆ 4 ಗಂಟೆಗೆ ಫಲಿತಾಂಶ ಘೋಷಿಸಿ ಮಾತನಾಡಿ, ʼಸ್ನಾತಕೋತ್ತರ ಪ್ರಥಮ ಸೆಮಿಸ್ಟರ್‌ನ ಚೊಚ್ಚಲ ಫಲಿತಾಂಶ ಘೋಷಿಸುತ್ತಿರುವುದಕ್ಕೆ ಅತ್ಯಂತ ಸಂತೋಷವಾಗಿದೆ. ಇದಕ್ಕಾಗಿ ಶ್ರಮಿಸಿದ ವಿಶ್ವವಿದ್ಯಾಲಯದ ಸಮಸ್ತ ಅಧ್ಯಾಪಕ, ಅಧ್ಯಾಪಕೇತರ ಸಿಬ್ಬಂದಿಯನ್ನು ಅಭಿನಂದಿಸುತ್ತೇನೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ʼಅತ್ಯಂತ ಕಡಿಮೆ ಅವಧಿಯಲ್ಲಿ ಫಲಿತಾಂಶ ಪ್ರಕಟಿಸಲು ಎಲ್ಲರೂ ಅವಿರತವಾಗಿ ಶ್ರಮಿಸಿದ್ದಾರೆ. ಈ ಭಾಗದ ನೂತನ ವಿಶ್ವವಿದ್ಯಾಲಯದ ಶ್ರೇಯಸ್ಸಿನಲ್ಲಿ ಹೀಗೆಯೇ ಎಲ್ಲರ ಸಹಕಾರವನ್ನು ವಿಶ್ವವಿದ್ಯಾಲಯ ಬಯಸುತ್ತದೆʼ ಎಂದರು.

ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಪರಮೇಶ್ವರ ನಾಯ್ಕ್ ಮಾತನಾಡಿ, ʼ19 ಸ್ನಾತಕೋತ್ತರ ಕೋರ್ಸ್‌ಗಳ ಫಲಿತಾಂಶವನ್ನು ಏಕಕಾಲಕ್ಕೆ ಪ್ರಕಟಿಸಿ ವಿಶ್ವವಿದ್ಯಾಲಯ ತನ್ನ ಕ್ರಿಯಾಶೀಲತೆ ತೋರಿದೆ. ಈ ಫಲಿತಾಂಶವು ವಿದ್ಯಾರ್ಥಿಗಳಿಗೆ ಹಾಗೂ ಈ ಭಾಗದ ಸರ್ವರಿಗೂ ಸಂತಸ ತಂದಿದೆʼ ಎಂದು ಸಿಹಿ ಹಂಚಿ ಸಂಭ್ರಮಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ಮಶಾನದ ಬಳಿ ಆಸ್ಪತ್ರೆ : ಮಗುವಿಗೆ ಕೇಡಾಗುತ್ತೆ ಎಂಬ ಕಾರಣಕ್ಕೆ ಹೆರಿಗೆಗೆ ಬಾರದ ಗರ್ಭಿಣಿಯರು!

ಬೀದರ ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ) ಡಾ.ರವೀಂದ್ರನಾಥ.ವಿ.ಗಬಾಡಿ, ಅಧ್ಯಾಪಕರಾದ ಡಾ.ಚನ್ನಕೇಶವ ಮೂರ್ತಿ, ಡಾ.ನಾಗೇಶ ಸಾವಳೆ, ಶ್ರೀಪವನ್ ಕಾಂಬಳೆ, ಡಾ.ರಾಮಚಂದ್ರ ಗಣಾಪೂರ, ಶಿವರಾಜ ಪಾಟೀಲ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಭಾಲ್ಕಿ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಉತ್ತಮ ಶಿಂಧೆ ಪುನರಾಯ್ಕೆ

ಸರ್ಕಾರದ ಮಾನ್ಯತೆ ಪಡೆದ ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಭಾಲ್ಕಿ ತಾಲೂಕು...