ಬೀದರ್ ವಿಶ್ವವಿದ್ಯಾಲಯಕ್ಕೆ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಡಿ : ಶಿವಯ್ಯ ಸ್ವಾಮಿ

Date:

Advertisements

ಬೀದರ್ ವಿಶ್ವವಿದ್ಯಾಲಯಕ್ಕೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಹೆಸರಿಟ್ಟು, ವಿಸ್ತರಣಾ ಘಟಕ, ವಿಶೇಷ ಕೇಂದ್ರ ಹಾಗೂ ಮೂಲಸೌಕರ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಸೇರಿದಂತೆ ರಾಜ್ಯ ಸರ್ಕಾರಕ್ಕೆ 26 ಪ್ರಸ್ತಾವನೆಯನ್ನು ದಿಶಾ ಸಮಿತಿ ಸದಸ್ಯ ಶಿವಯ್ಯಾ ಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ನಡೆದ ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವಗಳ ಮನವಿ ಪತ್ರ ಸಲ್ಲಿಸಿದರು.

‘ಕಾರಂಜಾ ನೀರಾವರಿ ಯೋಜನೆಯ ಸಂತ್ರಸ್ತರಿಗೆ ಕೂಡಲೇ ವೈಜ್ಞಾನಿಕ ಪರಿಹಾರ ಕಲ್ಪಿಸಬೇಕು. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಪಾವತಿಸಬೇಕು. ಕಾರ್ಖಾನೆಗಳಿಗೆ ಮೂಲಸೌಕರ್ಯಕ್ಕೆ ಅನುದಾನ ಕಲ್ಪಿಸಬೇಕು. ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ವಿಲೀನಗೊಳಿಸಬಾರದು’ ಎಂದು ಆಗ್ರಹಿಸಿದರು.

Advertisements

ರಾಜ್ಯ, ಕೇಂದ್ರ ಸರ್ಕಾರದಿಂದ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಆಚರಿಸಬೇಕು. ಬೀದರನಲ್ಲಿ ಬಿದ್ರಿ ಕಲೆ ಅಭಿವೃದ್ಧಿ ಕ್ಲಸ್ಟರ್, ಟೆಕ್ಸ್‍ಟೈಲ್ ಪಾರ್ಕ್ ಸ್ಥಾಪಿಸಬೇಕು. ಕೊಳಾರ ಕೈಗಾರಿಕಾ ಪ್ರದೇಶದಲ್ಲಿ ಮುಚ್ಚಿರುವ ಕಾರ್ಖಾನೆಗಳನ್ನು ಪುನಾರಂಭಿಸಬೇಕು. ಹೊಸ ಉದ್ಯಮ ಸ್ಥಾಪಿಸುವವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

‘ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದಿಸೆಯಲ್ಲಿ ಜಿಲ್ಲೆಯ ಐತಿಹಾಸಿಕ ಸ್ಮಾರಕ, ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ಕಲ್ಪಿಸಬೇಕು. ಕೇಂದ್ರಕ್ಕೂ ವಿಶೇಷ ಪ್ರಸ್ತಾವ ಸಲ್ಲಿಸಬೇಕು. ಉಡಾನ್ ಯೋಜನೆಯಡಿ ಬೆಂಗಳೂರಿಗೆ ರಾತ್ರಿ ವೇಳೆಯೂ ವಿಮಾನಯಾನ ಸೌಕರ್ಯ ಒದಗಿಸಬೇಕು. ಹೈದರಾಬಾದ್- ನಿಜಾಮೊದ್ದೀನ್ ಹಾಗೂ ಸಿಂಕದರಾಬಾದ್- ವಾರಾಣಸಿ-ದಾನಾಪುರ ರೈಲುಗಳನ್ನು ಬೀದರ್ ವರೆಗೆ ವಿಸ್ತರಿಸಬೇಕು’ ಎಂದರು.

‘ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲೆಯ ಸಮುದಾಯ ಸಂಸ್ಥೆಗಳಿಗೆ 200 ಹೆಚ್ಚುವರಿ ರೇಷನ್ ಅಂಗಡಿಗಳನ್ನು ಮಂಜೂರು ಮಾಡಬೇಕು. ಸ್ಟಾರ್ಟಪ್ ಇಂಡಿಯಾ ಕರ್ನಾಟಕ ಎಲಿವೇಟ್‍ನಲ್ಲಿ ಆಯ್ಕೆಯಾಗಿರುವ ಯುವ ಉದ್ಯಮಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೆಟಲ್ ಮಾರ್ಕ್ ಲೇಸರ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್‍ಗೆ ರೂ. 10 ಕೋಟಿ ಅನುದಾನ ನೀಡಬೇಕು’ ಎಂದು ಒತ್ತಾಯಿಸಿದರು.

ಸಂವಿಧಾನದ 371(ಜೆ) ಕಲಂ ತಿದ್ದುಪಡಿ ಕಾಯ್ದೆ ಅನ್ವಯ ಸರ್ಕಾರದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಬೇಕು. ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಗಮನಹರಿಸಬೇಕು. ಸಂವಿಧಾನದ 371(ಜೆ) ತಿದ್ದುಪಡಿ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು’ ಎಂದು ತಿಳಿಸಿದರು.

‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಯೋಜನೆಗಳ ಮಂಜೂರಾತಿಗಾಗಿ ದೆಹಲಿಗೆ ನಿಯೋಗ ಒಯ್ಯಬೇಕು. ಕೇಂದ್ರದಿಂದ ಬಿಡುಗಡೆಯಾಗುವ ಅನುದಾನ ತ್ವರಿತವಾಗಿ ಬಿಡುಗಡೆ ಆಗುವಂತೆ ನೋಡಿಕೊಳ್ಳಲು ಪ್ರತ್ಯೇಕ ಫಾಲೋ ಅಪ್ ಘಟಕ ರಚಿಸಬೇಕು’ ಎಂದು ಮನವಿಯಲ್ಲಿ ತಿಳಿಸಿದರು.

ಇದನ್ನೂ ಓದಿ : ಬೀದರ್ | ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘ ಅಸ್ತಿತ್ವಕ್ಕೆ : ಜಿಲ್ಲಾಧ್ಯಕ್ಷರಾಗಿ ಮೋಹನ್ ಮಾನೆ ನೇಮಕ

ಮುಖ್ಯಮಂತ್ರಿ ಅವರು ತಮ್ಮ ಪ್ರಸ್ತಾವಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಿವಯ್ಯ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X