ಬೀದರ್‌ | ಬಗೆಹರಿಯದ ಜಮೀನು ದಾರಿ ಸಮಸ್ಯೆ: ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ರೈತ

Date:

ತನ್ನ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಕಳೆದ ಎರಡು ವರ್ಷದಿಂದ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಸ್ಪಂದಿಸದಕ್ಕೆ ಬೇಸತ್ತ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕೈಯಲ್ಲಿ ವಿಷದ ಬಾಟಲಿ, ಹಗ್ಗ ಹಿಡಿದು ತಹಸೀಲ್ ಕಚೇರಿಗೆ ಬಂದ ಪ್ರಸಂಗ‌ ಬಸವಕಲ್ಯಾಣ ನಗರದಲ್ಲಿ ಸೋಮವಾರ ನಡೆದಿದೆ.

- Advertisement -

ಬಸವಕಲ್ಯಾಣ ತಾಲೂಕಿನ ಕೋಹಿನೂರ ಗ್ರಾಮದ ರೈತ ಪ್ರಶಾಂತ ಲಕಮಾಜಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಒಂದು ಕೈಯಲ್ಲಿ ವಿಷದ ಬಾಟಲಿ, ಮತ್ತೊಂದು ಕೈಯಲ್ಲಿ ಹಗ್ಗ ಹಿಡಿದು ಮಿನಿ ವಿಧಾನಸೌಧ ಬಳಿಯ ತಹಶೀಲ್ ಕಚೇರಿಗೆ ಬಂದು ತಹಸೀಲ್ದಾರ್‌ ವಿರುದ್ಧ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ʼಕಳೆದ ಎರಡು ವರ್ಷಗಳಿಂದ ನಮ್ಮ ಜಮೀನಿಗೆ ಹೋಗಲು ದಾರಿ ಸಮಸ್ಯೆ ಇದೆ. ಹೊಲಗಳಿಗೆ ಹೋಗುವ ದಾರಿಯಲ್ಲಿ ಸರ್ಕಾರಿ ನಾಲಾ ಇದ್ದು, ಅದರಲ್ಲಿ ಅನ್ಯ ಜಮೀನಿನ ರೈತರು ಪೈಪ್‌ ಅಳವಡಿಸಿದ್ದು. ಇದರಿಂದ ಕೃಷಿ ಚಟುವಟಿಕೆಗೆ ನಿತ್ಯ ಜಮೀನಿಗೆ ಹೋಗಲು ತುಂಬಾ ತೊಂದರೆಯಾಗುತ್ತಿದೆ. ಇದನ್ನು ಬಗೆಹರಿಸಿ ನಮ್ಮ ಜಮೀನಿಗೆ ಹೋಗಲು ದಾರಿ ಮಾಡಿಕೊಡುವಂತೆ ಹಲವು ಬಾರಿ ತಹಸೀಲ್ದಾರ್‌ ಕಚೇರಿಗೆ ಅಲೆದಾಡಿದರೂ ತಹಸೀಲ್ದಾರ್‌ ಅವರು ಸ್ಪಂದಿಸದೆ ದಿನದೂಡುತ್ತಿದ್ದಾರೆʼ ಎಂದು ರೈತ ಪ್ರಶಾಂತ ಲಕಮಾಜಿ ಆರೋಪಿಸಿದರು.

ರೈತ ಪ್ರಶಾಂತ ಮಾಧ್ಯಮದವರೊಂದಿಗೆ ಮಾತನಾಡಿ, ʼನಮ್ಮ ಜಮೀನಿಗೆ ತೆರಳಲು ದಾರಿ ಮಾಡಿಕೊಡುವಂತೆ ನೂರಾರು ಬಾರಿ ಮನವಿ ಸಲ್ಲಿಸಿದರೂ ತಹಸೀಲ್ದಾರ್‌ ಅವರು ಸ್ಪಂದಿಸದೆ ಕಾಲಹರಣ ಮಾಡುತ್ತಿದ್ದಾರೆ. ತಹಸೀಲ್ದಾರ್‌ ಕಚೇರಿಗೆ ಅಲೆದಾಡಿ ಸಮಸ್ಯೆಗೆ ಪರಿಹಾರ ಸಿಗದಕ್ಕೆ ತುಂಬಾ ನೊಂದಿದ್ದೇನೆ. ತಹಸೀಲ್ದಾರ್ ಎದುರೇ ಆತ್ಮಹತ್ಯೆ ಮಾಡಿಕೊಳ್ಳುವೆ. ಇಲ್ಲದಿದ್ದರೆ ಅವರ ಹೆಸರಿನಲ್ಲಿ ಚೀಟಿ ಬರೆದಿಟ್ಟು ನೇಣಿಗೆ ಶರಣಾಗುವೆʼ ಎಂದು ತಹಸೀಲ್ದಾರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ರೈತರಿಗೆ ರಸಗೊಬ್ಬರ ಕೊರತೆ : ಜು.30ರಂದು ಜಿಲ್ಲಾದ್ಯಂತ ಬಿಜೆಪಿ ಪ್ರತಿಭಟನೆ

ʼ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...